NewsWeather

2025 rain information-ಈ ವರ್ಷ ಏಪ್ರಿಲ್‌ನಲ್ಲಿ ಮಳೆ | 2025ರ ಮಳೆ ಮಾಹಿತಿ ಇಲ್ಲಿದೆ…

ಕರ್ನಾಟಕ ಮಳೆ ಮಾಹಿತಿ (Karnataka Rain Update)

ರಾಜ್ಯಾದ್ಯಂತ ರಣಬಿಸಿಲು ಸುರಿಯತೊಡಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಟ ಉಷ್ಣಾಂಶ 33+ ಡಿಗ್ರಿ ಸೆಲ್ಸಿಯಸ್ ದಾಖಲಾಗುತ್ತಿದೆ. ಹಾಗಾದರೆ ಈ ವರ್ಷದ ಮಳೆಗಾಲ ಹೇಗಿದೆ? ಈ ಕುರಿತು ರಾಜ್ಯ ಸರ್ಕಾರದ ನೀಡಿದ ಮಾಹಿತಿ ಇಲ್ಲಿದೆ…

WhatsApp Group Join Now
Telegram Group Join Now

ರಾಜ್ಯದಲ್ಲಿ ಬಿಸಿಲಿನ ತಾಪ ದಿನೇ ದಿನೇ ಹೆಚ್ಚಾಗುತ್ತಿದ್ದು, ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್ ದಾಟಿದೆ. ಬಿಸಿಲುನಾಡು ಕಲಬುರಗಿಯಲ್ಲಿ ಈಗಾಗಲೇ ಗರಿಷ್ಠ ಉಷ್ಣಾಂಶ 37 ಡಿ.ಸೆ.ಗಿಂತ ಹೆಚ್ಚು ದಾಖಲಾಗುತ್ತಿದೆ. ಇದು ವಾಡಿಕೆ ಪ್ರಮಾಣಕ್ಕಿಂತ 1.8 ಡಿ.ಸೆ. ಹೆಚ್ಚು ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಉಳಿದಂತೆ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 35 ಡಿ.ಸೆ.ದಾಟಿದೆ. ಕಾರವಾರದಲ್ಲೂ 35 ಡಿ.ಸೆಗಿಂತ ಹೆಚ್ಚಾಗಿದೆ. ದಕ್ಷಿಣ ಒಳನಾಡಿನ ದಾವಣಗೆರೆ, ಚಾಮರಾಜನಗರದಲ್ಲಿ ಗರಿಷ್ಠ ಉಷ್ಣಾಂಶ 35 ಡಿ.ಸೆ.ಗಿಂತ ಹೆಚ್ಚು ದಾಖಲಾದ ವರದಿಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಇದನ್ನೂ ಓದಿ: PM-Kisan-ಈ ರೈತರ ಖಾತೆಗೆ ಪಿಎಂ ಕಿಸಾನ್ 19ನೇ ಕಂತಿನ 2,000 ರೂ. ಹಣ ಜಮಾ

ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆ

ಫೆಬ್ರವರಿ 21ರಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಅವರ ನೇತೃತ್ವದಲ್ಲಿ ನಡೆದ ಪ್ರಕೃತಿ ವಿಕೋಪಕ್ಕೆ ಸಂಬAಧಿಸಿದ ಸಭೆಯಲ್ಲಿ ಅಧಿಕಾರಿಗಳು ಈ ವರ್ಷದ ಮಳೆ ಮಾಹಿತಿ ಸೇರಿದಂತೆ ಪ್ರಸ್ತುತ 2025ನೇ ಸಾಲಿನಲ್ಲಿ ಹಿಂಗಾರು-ಮುAಗಾರು ಮಳೆ ಸ್ಥಿತಿ, ಕೃಷಿ, ಕುಡಿಯುವ ನೀರು, ಹವಾಮಾನ ಹಾಗೂ ಅಣೆಕಟ್ಟೆಗಳಲ್ಲಿನ ನೀರಿನ ಮಟ್ಟದ ಕುರಿತು ಚರ್ಚಿಸಲಾಯಿತು.

ಅಧಿಕಾರಿಗಳ ಮಾಹಿತಿಯಂತೆ ಪ್ರಸ್ತುತ ವರ್ಷ ಪೂರ್ವ ಮುಂಗಾರಿನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಲಿದೆ. ಏಪ್ರಿಲ್-ಮೇನಲ್ಲಿ ಉತ್ತಮ ಮಳೆಯಾಗಲಿದೆ. ಫೆಬ್ರವರಿ-ಮಾರ್ಚ್ ತಿಂಗಳ ಕೊನೆಯ ವಾರದಲ್ಲೂ ಹೆಚ್ಚು ಮಳೆ ಸಾಧ್ಯತೆ ಇದೆ. ಆದರೆ, ಹಿಂಗಾರಿನಲ್ಲಿ ಪ್ರಸ್ತುತ ವರ್ಷ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Bapuji Seva Kendra Services : ಗ್ರಾಮ ಪಂಚಾಯತಿಯಲ್ಲೇ ಸಿಗಲಿವೆ ಎಲ್ಲ ಸರಕಾರಿ ಸೇವೆಗಳು

ಬೇಸಿಗೆಗೆ ನೀರಿನ ಅಭಾವ ಸಾಧ್ಯತೆ

ರಾಜ್ಯದಲ್ಲಿ ಈ ವರ್ಷ ಬಿಸಿಲು ಬಹುಬೇಗ ಕಾಣಿಸಿಕೊಂಡಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಬೇಸಿಗೆ ಕಾಲದಲ್ಲಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ನೀರಿನ ಅಭಾವ ಉಂಟಾಗುವ ಸಾಧ್ಯತೆಯಿದೆ. ರಾಜ್ಯದಲ್ಲಿರುವ ಪ್ರಮುಖ 14 ಜಲಾಶಯಗಳಲ್ಲಿ ಪ್ರಸ್ತುತ 535.21 ಟಿಎಂಸಿ ನೀರಿನ ಸಂಗ್ರಹಣೆಯಿದೆ.

ಸರಾಸರಿ ನೀರಿನ ಸಂಗ್ರಹಣೆಯ ಶೇ.60ರಷ್ಟು ಇದೆ. ಹಿಂದಿನ ವರ್ಷ ಇದೇ ಸಮಯದಲ್ಲಿ 332.52 ಟಿ.ಎಂ.ಸಿ. ನೀರಿನ ಸಂಗ್ರಹಣೆ ಇತ್ತು. ಹಿಂದಿನ ವರ್ಷಕ್ಕಿಂತ ಈ ವರ್ಷ ಸರಾಸರಿ ನೀರಿನಲ್ಲಿ ಏರಿಕೆಯಿದ್ದರೂ ಹಲವು ಜಿಲ್ಲೆಗಳಲ್ಲಿ ನೀರಿನ ಅಭಾವ ಕಾಡುವ ಸಾಧ್ಯತೆಯಿದೆ. ಆದ್ದರಿಂದ ಈ ಬಗ್ಗೆ ಎಚ್ಚರವಹಿಸುವಂತೆ ಸಚಿವರು ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: KCC Loan Limit Increase : ರೈತರಿಗೆ ಕಡಿಮೆ ಬಡ್ಡಿಯಲ್ಲಿ ₹5 ಲಕ್ಷ ಕೆಸಿಸಿ ಲೋನ್

ಈ ಜಿಲ್ಲೆಗಳಿಗೆ ಟ್ಯಾಂಕರ್ ನೀರಿನ ಸರಬರಾಜು

ಚಿಕ್ಕಬಳ್ಳಾಪುರ, ಚಿತ್ರದುರ್ಗ, ತುಮಕೂರು, ಬೆಂಗಳೂರು ನಗರ ಹಾಗೂ ರಾಮನಗರ ಈ ಐದು ಜಿಲ್ಲೆಗಳ 13 ತಾಲೂಕುಗಳ ವ್ಯಾಪ್ತಿಯ 66 ಗ್ರಾಮಗಳಿಗೆ ದೀರ್ಘಕಾಲೀನ ಸಮಸ್ಯೆ ಹಾಗೂ ನೀರಿನ ಗುಣಮಟ್ಟದ ಸಮಸ್ಯೆಯಿಂದಾಗಿ ಬಾಡಿಗೆ ಟ್ಯಾಂಕರ್ ಮತ್ತು ಬೋರ್‌ವೆಲ್‌ಗಳ ಮುಖಾಂತರ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ.

ಇನ್ನು ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಮತ್ತು ಕೋಲಾರ ಜಿಲ್ಲೆಗಳ 5 ನಗರ ಸ್ಥಳೀಯ ಸಂಸ್ಥೆಗಳ 56 ವಾರ್ಡ್’ಗಳಿಗೆ ಟ್ಯಾಂಕರ್ ಮತ್ತು ಬೋರ್‌ವೆಲ್‌ಗಳ ಮುಖಾಂತರ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಮುಂಬರುವ ದಿನಗಳಲ್ಲಿ ಸಮಸ್ಯೆ ಉಂಟಾಗಬಹುದಾದ ಗ್ರಾಮಗಳ ಪಟ್ಟಿಯನ್ನು ಗುರುತಿಸಲು ಸಭೆಯಲ್ಲಿ ಸೂಚನೆ ನೀಡಲಾಗಿದೆ ಎಂದು ಸಚಿವ ಕೃಷ್ಣಭೈರೇಗೌಡ ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Dwarf Arecanut Specialty : ಕುಬ್ಜ ತಳಿ ಅಡಿಕೆ ಕೃಷಿ

WhatsApp Group Join Now
Telegram Group Join Now

Raitapi Jagattu

ಮಾಲತೇಶ ಮಾಳಮ್ಮನವರ್, ಸಂಪಾದಕರು ಮಾಲತೇಶ ಮಾಳಮ್ಮನವರ್ ಅವರು ಅನುಭವಿ ಪತ್ರಕರ್ತರಾಗಿದ್ದು, 2010ರಿಂದ ಪತ್ರಿಕೋಧ್ಯಮದಲ್ಲಿ ತೊಡಗಿಸಿಕೊಂಡಿದ್ದಾರೆ. ನಾಡಿನ ಹೆಸರಾಂತ ಪತ್ರಿಕೆಗಳಲ್ಲಿ ವರದಿಗಾರರಾಗಿ, ಸಹ ಸಂಪಾದಕರಾಗಿ, ಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. 2022ರಿಂದ ಡಿಜಿಟಲ್ ಪತ್ರಿಕೋಮಧ್ಯಮದಲ್ಲಿ ನಿರತರಾಗಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!