Govt SchemesNews

Labour department scholarship : ರಾಜ್ಯ ಕಾರ್ಮಿಕ ಇಲಾಖೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | ಈ ವಿದ್ಯಾರ್ಥಿಗಳಿಗೆ 10 ಸಾವಿರ ರೂ. ಆರ್ಥಿಕ ನೆರವು

Labour department scholarship : 2023-24 ಮತ್ತು 2024-25ನೇ ಸಾಲಿನ ಶೈಕ್ಷಣಿಕ ಧನ ಸಹಾಯ ಪಡೆಯಲು ಅರ್ಹ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ತಮ್ಮ ಮಕ್ಕಳ ಅರ್ಜಿಗಳನ್ನು ರಾಜ್ಯ ವಿದ್ಯಾರ್ಥಿವೇತನ ತಂತ್ರಾ೦ಶ (SSP) ಮೂಲಕ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

WhatsApp Group Join Now
Telegram Group Join Now

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು, ನೊಂದಾಯಿತ ಕಾರ್ಮಿಕರ ಇಬ್ಬರು ಮಕ್ಕಳಿಗೆ ಶೈಕ್ಷಣಿಕ ವಿದ್ಯಾಭ್ಯಾಸಕ್ಕಾಗಿ (Education) ಸಹಾಯವಾಗಲು ಹತ್ತು ಸಾವಿರ ರೂಪಾಯಿ ವರೆಗೆ ವಿದ್ಯಾರ್ಥಿ ವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಯಾರು ಅರ್ಹರು? ಯಾರಿಗೆ ಎಷ್ಟು ರೂಪಾಯಿ ವಿದ್ಯಾರ್ಥಿವೇತನ ಸಿಗಲಿದೆ? ಅರ್ಜಿ ಸಲ್ಲಿಸುವುದು ಹೇಗೆ ಎಂಬ ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ನೀಡಲಾಗಿದೆ.

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹತೆಗಳು

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು (Labour department) ವಿದ್ಯಾರ್ಥಿ ವೇತನದ ಕುರಿತು ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿ ಪ್ರಮುಖ ಮಾಹಿತಿಯನ್ನು ಬಿಡುಗಡೆ ಮಾಡಿದೆ. ವಿದ್ಯಾರ್ಥಿವೇತನ ಪಡೆಯಲು ಎಲ್ಲಾ ನೊಂದಾಯಿತ ಕಾರ್ಮಿಕರು ತಮ್ಮ ಆಧಾರ್ ಸಂಖ್ಯೆಯನ್ನು 31ನೇ ಡಿಸೆಂಬರ್ 2024ರ ಒಳಗಾಗಿ ಬ್ಯಾಂಕ್ ಖಾತೆಯೊಂದಿಗೆ ಕಡ್ಡಾಯವಾಗಿ ಲಿಂಕ್ ಮಾಡಿಸಿ NPCI (National Payments Corporation of India) ಮ್ಯಾಪಿಂಗ್ ಮಾಡಿಸಲು ಸೂಚಿಸಿದೆ.

ಕಾರ್ಮಿಕರ ಕಲ್ಯಾಣ ಮಂಡಳಿಯ ವಿದ್ಯಾರ್ಥಿ ವೇತನವನ್ನು ಕಾರ್ಮಿಕರ ಇಬ್ಬರು ಮಕ್ಕಳು ಮಾತ್ರ ಪಡೆಯಲು ಅರ್ಹರಿರುತ್ತಾರೆ. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಪಾಲಕರು ಕಡ್ಡಾಯವಾಗಿ ಲೇಬರ್ ಕಾರ್ಡ್ ಹೊಂದಿದ್ದು, ಅದರಲ್ಲಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ಹೆಸರು ನಮೂದಿಸಿರಬೇಕು. ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ನೋಂದಾಯಿತ ಶಾಲಾ ಕಾಲೇಜುಗಳಲ್ಲಿ ಶೈಕ್ಷಣಿಕ ವಿದ್ಯಾಭ್ಯಾಸ ಪಡೆಯುತ್ತಿರಬೇಕು.

ಯಾರಿಗೆ ಎಷ್ಟು ವಿದ್ಯಾರ್ಥಿವೇತನ ಸಿಗಲಿದೆ?

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ವಿದ್ಯಾರ್ಥಿ ವೇತನವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.

  • 8ನೇ ತರಗತಿಯಿಂದ 10ನೇ ತರಗತಿ ಓದುತ್ತಿರುವವರಿಗೆ ವಿದ್ಯಾರ್ಥಿಗಳಿಗೆ – ₹3000
  • PUC / ITI / Diploma / TCHನಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ – ₹4000
  • ಪದವಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ – ₹5000
  • ಸ್ನಾತಕೋತ್ತರ ಪದವಿ ಕೋರ್ಸ್ ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ – ₹6000
  • ವೃತ್ತಿಪರ ಪದವಿ ಶಿಕ್ಷಣ (Engineering / Medical) ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ – ₹10,000

ಅರ್ಜಿ ಸಲ್ಲಿಸಲು ಪ್ರಮುಖ ಮಾಹಿತಿ

Labour department scholarship ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಶೈಕ್ಷಣಿಕ ಧನಸಹಾಯವನ್ನು ಪಡೆಯಲು ಎಲ್ಲಾ ಅರ್ಹ ಅಭ್ಯರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ತಂತ್ರಾ೦ಶದ (State Scholarship Portal) ಮುಖಾಂತರ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನೊಂದಣಿಯಾಗಿರುವ ಎಲ್ಲಾ ಕಾರ್ಮಿಕರು ಇಲಾಖೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ನೋಂದಣಿ ಸಂಖ್ಯೆ (Registration Number) ಮತ್ತು ರೆಫೆರೆನ್ಸ್ ಸಂಖ್ಯೆಯನ್ನು (Reference Number) ನಮೂದಿಸಿ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಲು ಸೂಚಿಸಲಾಗಿದೆ. ಈ ಪ್ರಕ್ರಿಯೆಯನ್ನು ನಾವು ಕೆಳಗೆ ನೀಡಿರುವ ಜಾಲತಾಣದ ಲಿಂಕ್’ನ ಮುಖಾಂತರ ಮಾಡಬಹುದು.

ಅರ್ಜಿ ಸಲ್ಲಿಕೆಯ ಪ್ರಮುಖ ಲಿಂಕುಗಳು

WhatsApp Group Join Now
Telegram Group Join Now

Related Articles

Leave a Reply

Your email address will not be published. Required fields are marked *

Back to top button
error: Content is protected !!