FinanceGovt SchemesNews

PKCC Loan : ಹೈನುಗಾರಿಕೆ, ಕುರಿ, ಕೋಳಿ ಸಾಕಾಣಿಕೆಗೆ ಕಡಿಮೆ ಬಡ್ಡಿ ಲೋನ್

ಈ ಸಾಲ ಪಡೆಯುವುದು ಹೇಗೆ? ಎಲ್ಲಿ ಅರ್ಜಿ ಸಲ್ಲಿಸಬೇಕು? ಸಂಪೂರ್ಣ ಮಾಹಿತಿ ಇಲ್ಲಿದೆ...

ಕಿಸಾನ್ ಕ್ರೆಡಿಟ್ ಕಾರ್ಡ್ (Kisan credit card-KCC) ಯೋಜನೆಯನ್ನು ದೇಶದ ರೈತ ಬಾಂಧವರ ಹಿತದೃಷ್ಠಿಯಿಂದ ಕೇಂದ್ರ ಸರಕಾರ ಜಾರಿಗೆ ತಂದಿದ್ದು; 2019-20ನೇ ಸಾಲಿನಿಂದ ಪಶುಪಾಲನೆಗೂ ಈ ಯೋಜನೆಯನ್ನು ವಿಸ್ತರಿಸಲಾಗಿದೆ.

ಗ್ಯಾರಂಟಿ ಇಲ್ಲದೆ ಸಾಲ ಸೌಲಭ್ಯ

WhatsApp Group Join Now
Telegram Group Join Now

ಪಶು ಕಿಸಾನ್ ಕ್ರೆಡಿಟ್ ಕಾರ್ಡ್ (Pashu Kisan Credit Card Yojana-PKCC) ಯೋಜನೆಯಡಿ ಮೀನು ಸಾಕಣೆ, ಕೋಳಿ ಸಾಕಣೆ, ಕುರಿ-ಮೇಕೆ, ಹಸು ಮತ್ತು ಎಮ್ಮೆ ಪಾಲನೆಗಾಗಿ ರೈತರಿಗೆ ಸಾಲ ನೀಡಲಾಗುತ್ತದೆ. ಈ ಕಾರ್ಡ್ ಹೊಂದಿದ್ದರೆ, ರೈತರು ಯಾವುದೇ ಗ್ಯಾರಂಟಿ ಇಲ್ಲದೆ ಪಶುಪಾಲನೆ ಮಾಡಲು ಸಾಲ ಪಡೆಯಬಹುದು.

ಹರಿಯಾಣವು ತನ್ನ ರಾಜ್ಯದ ರೈತರಿಗೆ ಪಶು ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯನ್ನು ಪಡೆದ ದೇಶದ ಮೊದಲ ರಾಜ್ಯವಾಗಿದೆ. ಈ ಯೋಜನೆ ಈಗ ದೇಶದ ಎಲ್ಲ ರಾಜ್ಯಗಳಲ್ಲಿ ಅಸ್ಥಿತ್ವದಲ್ಲಿದ್ದು; ಕೃಷಿಗೆ ಪೂರಕವಾದ ಉಪ ಕಸುಬುಗಳಿಗೆ ಗರಿಷ್ಠ 2ರಿಂದ 3 ಲಕ್ಷ ರೂಪಾಯಿ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ನೀಡಲಾಗುತ್ತದೆ.

ಇದನ್ನೂ ಓದಿ: Sheep-Goat Farming Schemes : ಕುರಿ-ಮೇಕೆ ಸಾಕಾಣಿಕೆ ಸಬ್ಸಿಡಿ ಯೋಜನೆಗಳು

ಯಾವುದಕ್ಕೆ ಎಷ್ಟು ಸಾಲ?

ಈ ಯೋಜನೆಯಲ್ಲಿ ಪ್ರತಿ ಎಮ್ಮೆಗೆ 60,249 ರೂಪಾಯಿ, ಪ್ರತಿ ಹಸುವಿಗೆ 40,783 ರೂಪಾಯಿ, ಮೊಟ್ಟೆ ಇಡುವ ಕೋಳಿಗೆ 720 ರೂಪಾಯಿ ಮತ್ತು ಕುರಿ/ಮೇಕೆಗೆ 4,063 ರೂಪಾಯಿ ಸಾಲ ನೀಡಲಾಗುತ್ತದೆ. 1.6 ಲಕ್ಷ ರೂಪಾಯಿ ವರೆಗಿನ ಸಾಲಗಳಿಗೆ ಯಾವುದೇ ಗ್ಯಾರಂಟಿ ಅಗತ್ಯವಿಲ್ಲ.

ಹಣಕಾಸು ಸಂಸ್ಥೆಗಳು/ ಬ್ಯಾ೦ಕ್‌ಗಳು 7% ಬಡ್ಡಿದರದಲ್ಲಿ ಸಾಲವನ್ನು ನೀಡಿದರೆ, ಪಶು ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿಯಲ್ಲಿ ಜಾನುವಾರು ಮಾಲೀಕರು 4% ರಷ್ಟು ಕಡಿಮೆ ಬಡ್ಡಿದರದಲ್ಲಿ ಸಾಲವನ್ನು ಪಡೆಯಬಹುದು.

ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಪಶು ಸಂಗೋಪನೆ ರೈತರು, ಜಾನುವಾರು ಮಾಲೀಕರು ಮತ್ತು ಮೀನು ಕೃಷಿಕರಂತಹ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಸೇರಿದ ವ್ಯಕ್ತಿಗಳು ಪಶು ಕಿಸಾನ್ ಕ್ರೆಡಿಟ್ ಕಾರ್ಡ್’ಗೆ ಅರ್ಜಿ ಸಲ್ಲಿಸಬಹುದು. ಆಕ್ಸಿಸ್ ಬ್ಯಾಂಕ್, ಎಚ್‌ಡಿಎಫ್‌ಸಿ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮುಂತಾದ ಉನ್ನತ ಬ್ಯಾಂಕ್‌ಗಳು ಪಶು ಕಿಸಾನ್ ಕ್ರೆಡಿಟ್ ಕಾರ್ಡ್’ಗಳನ್ನು ನೀಡುತ್ತವೆ.

ಇದನ್ನೂ ಓದಿ: MGNREGA Karnataka : ಸಣ್ಣ ರೈತರಿಗೆ ₹5 ಲಕ್ಷ ನರೇಗಾ ಸಹಾಯಧನ

ಅರ್ಜಿ ಸಲ್ಲಿಕೆ ಹೇಗೆ?

ಪಶು ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆಯಲು, ನೀವು ಮೊದಲು ಬ್ಯಾಂಕ್‌ಗೆ ಭೇಟಿ ನೀಡಬೇಕು ಮತ್ತು ಅರ್ಜಿ ನಮೂನೆಯನ್ನು ಕೇಳಬೇಕು. ಪಶು ಕಿಸಾನ್ ಕ್ರೆಡಿಟ್ ಕಾರ್ಡ್ಗಾಗಿ ಅರ್ಜಿ ನಮೂನೆಯನ್ನು ಕೆಲವು ಏಙಅ ದಾಖಲೆಗಳೊಂದಿಗೆ ಸಲ್ಲಿಸಬೇಕಾಗಿದೆ.

ನೀವು ಸಲ್ಲಿಸಬೇಕಾದ ದಾಖಲೆಗಳ ಬಗ್ಗೆ ಬ್ಯಾಂಕ್ ಅಧಿಕಾರಿಗಳು ನಿಮಗೆ ತಿಳಿಸುತ್ತಾರೆ. ನಿಮ್ಮ ಯೋಜನೆ ಅಥವಾ ಕೆಲಸದ ಆರ್ಥಿಕ ಪ್ರಮಾಣದ ಆಧಾರದ ಮೇಲೆ ಕ್ರೆಡಿಟ್ ಕಾರ್ಡ್ ನೀಡಲಾಗುತ್ತದೆ.

ಇದನ್ನೂ ಓದಿ: Loan Information : ಸಾಲ ಪಡೆಯುವ ಮುನ್ನ ಈ ಮಾಹಿತಿ ತಿಳಿದಿರಿ

ಬೇಕಾಗುವ ಪ್ರಮುಖ ದಾಖಲೆಗಳೇನು?

ಪಶು ಕಿಸಾನ್ ಕ್ರೆಡಿಟ್ ಕಾರ್ಡ್’ಗೆ ಅರ್ಜಿ ಸಲ್ಲಿಸಲು ಈ ಕೆಳಕಂಡ ದಾಖಲೆಗಳು ಬೇಕಾಗುತ್ತದೆ.

  • ಭೂ ದಾಖಲೆಗಳು
  • ಪ್ರಾಣಿಗಳ ಆರೋಗ್ಯ ಪ್ರಮಾಣಪತ್ರ
  • ಪಾಸ್​​ಪೋರ್ಟ್ ಅಳತೆಯ ಭಾವಚಿತ್ರಗಳು
  • ಆಧಾರ್ ಕಾರ್ಡ್
  • ಪಾನ್ ಕಾರ್ಡ್
  • ಮತದಾರರ ಗುರುತಿನ ಚೀಟಿ
  • ಬ್ಯಾಂಕ್ ಖಾತೆ ವಿವರ

ಹೈನುಗಾರಿಕೆ, ಕುರಿ-ಮೇಕೆ, ಹಂದಿ, ಕೋಳಿ ಸಾಕಣೆೆ ಹಾಗೂ ಮೀನುಗಾರಿಕೆ ಉಪ ಕಸುಬುಗಳಲ್ಲಿ ತೊಡಗಿಸಿಕೊಂಡಿರುವ ರೈತರು ಅರ್ಜಿ ಸಲ್ಲಿಸಲು ಹಾಗೂ ಮಾಹಿತಿಗಾಗಿ ಆಯಾ ತಾಲೂಕಿನ ಸಹಾಯಕ ನಿರ್ದೇಶಕರು, ಪಶು ಸಮಗೋಪನೆ ಮತ್ತು ಮೀನುಗಾರಿಕೆ ಇಲಾಖೆಗಳಿಗೆ ಭೇಡಿ ನೀಡಿ, ಅಗತ್ಯವಾಗಿರುವ ದಾಖಲಾತಿಗಳನ್ನು ಸಲ್ಲಿಸಿ, ಆರ್ಥಿಕ ನೆರವು ಪಡೆಯಬಹುದಾಗಿದೆ.

ಇದನ್ನೂ ಓದಿ: Livestock, Poultry and Fisheries Expo 2025 : ಜಾನುವಾರು, ಕೋಳಿ, ಮೀನುಗಾರಿಕೆ ಮೇಳ 2025

WhatsApp Group Join Now
Telegram Group Join Now

Related Articles

Leave a Reply

Your email address will not be published. Required fields are marked *

Back to top button
error: Content is protected !!