ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮದಿಂದ ಚಂಡಮಾರುತ (Cyclone) ಪರಿಚಲನೆ ಏರ್ಪಟ್ಟಿದ್ದು, ಕರ್ನಾಟಕದಲ್ಲಿ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸಾಮಾಜಿಕ ಜಾಲತಾಣ ‘X’ನಲ್ಲಿ ಹವಾಮಾನ ಪರಿಸ್ಥಿತಿ ಕುರಿತು ಮಾಹಿತಿ ನೀಡಿದೆ.
ಜನವರಿ 13 ಮತ್ತು 14ರಂದು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು; ಮಕರ ಸಂಕ್ರಾಂತಿ ಹೊತ್ತಿಗೆ 2025ರ ಹೊಸ ವರ್ಷದ ಮೊದಲ ಮಳೆ ಬೀಳುವ ಸಂಭವವಿದೆ.
ಇದನ್ನೂ ಓದಿ: Loan Information : ಸಾಲ ಪಡೆಯುವ ಮುನ್ನ ಈ ಮಾಹಿತಿ ತಿಳಿದಿರಿ
ಕರ್ನಾಟಕದಲ್ಲಿ ಎಲ್ಲೆಲ್ಲಿ ಮಳೆ
ನಾಳೆ ಜನವರಿ 13 ಮತ್ತು ನಾಡಿದ್ದು 14ರಂದು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು; ಈ ಎರಡು ದಿನ ಸಾಧಾರಣ ಮಳೆಯಾಗಲಿರುವ ಜಿಲ್ಲೆಗಳು ಈ ಕೆಳಗಿನಂತಿವೆ:
ಜನವರಿ 13ರ ಹಾವಾಮಾನ ಮಾಹಿತಿ
ನಾಳೆ ಜನವರಿ 13ರಂದು ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಇನ್ನು ಕರಾವಳಿ, ಉತ್ತರ ಒಳನಾಡು ಕರ್ನಾಟಕ ಮತ್ತು ದಕ್ಷಿಣ ಒಳನಾಡು ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ. ಸಾಧಾರಣದಿಂದ ಮಧ್ಯಮ ಪ್ರಮಾಣದಲ್ಲಿ ಮಂಜು ಬೀಳುವ ಜಿಲ್ಲೆಗಳ ಪಟ್ಟಿಯಲ್ಲಿ ವಿಜಯಪುರ, ಬೀದರ್, ಕಲಬುರ್ಗಿ, ಬಾಗಲಕೋಟೆ, ಧಾರವಾಡ, ಬೆಳಗಾವಿ ಜಿಲ್ಲೆಗಳಿವೆ ಎಂದು ಹೇಳಿದೆ.
ಇದನ್ನೂ ಓದಿ: ನಿಮ್ಮ ಜಮೀನು ಕಾಲುದಾರಿ ನಕ್ಷೆಯನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ…
ಜನವರಿ 14ರ ಹವಾಮಾನ ಮಾಹಿತಿ
ಜನವರಿ 14ರ ಮಕರ ಸಂಕ್ರಾಂತಿ ದಿನದಂದು ಮೈಸೂರು, ಮಂಡ್ಯ, ಕೊಡಗು, ಹಾಸನ ಮತ್ತು ತುಮಕೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.
ಮೇಲ್ಕಾಣಿಸಿದ ಜಿಲ್ಲೆಗಳ ಹೊರತಾಗಿ ಕರಾವಳಿ, ಉತ್ತರ ಒಳನಾಡು ಕರ್ನಾಟಕ ಮತ್ತು ದಕ್ಷಿಣ ಒಳನಾಡು ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನ ಇರುವ ಸಾಧ್ಯತೆ ಇದೆ.
ವಿಜಯಪುರ, ಬೀದರ್, ಕಲಬುರ್ಗಿ, ಬಾಗಲಕೋಟೆ, ಧಾರವಾಡ, ಬೆಳಗಾವಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದಲ್ಲಿ ಮಂಜು ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಜನವರಿ 15ರಿಂದ ಜನವರಿ 17ರ ವರೆಗೂ ರಾಜ್ಯಾದ್ಯಂತ ಒಣಹವೆ ಇರಲಿದ್ದು; ರಾಜ್ಯದಾದ್ಯಂತ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ ಎಂದು ಹೇಳಿದೆ.
ಇದನ್ನೂ ಓದಿ: Cold wave forecast in Karnataka : ಮುಂದಿನ ಒಂದು ವಾರ ಭಾರೀ ಚಳಿ