Anganwadi 2439 Vacancies District wise list : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ (Directorate of Women And Child Development Department) ರಾಜ್ಯದ ಹಲವು ಜಿಲ್ಲೆಗಳಲ್ಲಿನ ಶಿಶು ಅಭಿವೃದ್ಧಿ ಯೋಜನೆಯಡಿಯಲ್ಲಿ 2,400ಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆ (Anganwadi worker) ಹಾಗೂ ಸಹಾಯಕಿಯರ (Anganwadi Assistant) ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.
ಮಂಡ್ಯ, ದಕ್ಷಿಣ ಕನ್ನಡ, ರಾಯಚೂರು, ರಾಮನಗರ, ಉಡುಪಿ, ಗದಗ, ವಿಜಯನಗರ, ಬಳ್ಳಾರಿ, ಯಾದಗಿರಿ ಜಿಲ್ಲೆಗಳಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು; ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿದಲಾಗಿದೆ.
SSLC, PUC ವಿದ್ಯಾರ್ಹತೆಯನ್ನು ಹೊಂದಿದ ಕನಿಷ್ಠ 19 ವರ್ಷದ ಮಹಿಳೆಯರು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ. ಆಸಕ್ತಿ ಮತ್ತು ಅರ್ಹತೆ ಹೊಂದಿರುವ ಅಭ್ಯರ್ಥಿಗಳು ತಮ್ಮ ಜಿಲ್ಲೆಗಳಿಗೆ ಸಂಬಂಧಪಟ್ಟಂತೆ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಅರ್ಜಿ ಸಲ್ಲಿಸಬೇಕು.
ವಿದ್ಯಾರ್ಹತೆ ಏನಿರಬೇಕು?
ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಕನಿಷ್ಠ ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು ಹಾಗೂ ಎಸ್ಎಸ್ಎಲ್ಸಿಯಲ್ಲಿ ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕನ್ನಡವನ್ನು ಕಲಿತಿರಬೇಕು. ಇನ್ನು ಅಂಗನವಾಡಿ ಸಹಾಯಕಿ ಹುದ್ದೆಗೆ ಕನಿಷ್ಠ ಎಸ್ಎಸ್ಎಲ್ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.
ಇವರಿಗೆ ಮೊದಲ ಆದ್ಯತೆ
ಅಂಗೀಕೃತ ಸಂಸ್ಥೆಗಳಿಂದ, ರಾಜ್ಯ ಶಿಕ್ಷಣ ಸಂಶೋಧನೆ ಹಾಗೂ ತರಬೇತಿ ಸಂಸ್ಥೆಯಿಂದ ಇಸಿಸಿಇ ಕೋರ್ಸ್, ಡಿಪ್ಲೊಮಾ, ಜೆಒಸಿ, ಎನ್ಟಿಟಿ, ಅಂಗನವಾಡಿ ಚಟುವಟಿಕೆಗಳಿಗೆ ಸಂಬಂಧಪಟ್ಟಂತೆ ಡಿಪ್ಲೊಮಾ ನ್ಯೂಟ್ರಿಷಿಯನ್, ಹೋಮ್ ಸೈನ್ಸ್, ಒಂದು ವರ್ಷದ ನರ್ಸರಿ, ಪೂರ್ವ ಪ್ರಾಥಮಿಕ ತರಬೇತಿ ಪಡೆದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
ವಯೋಮಿತಿ, ವೇತನವೆಷ್ಟು?
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 19 ವರ್ಷದಿಂದ ಗರಿಷ್ಠ 35 ವರ್ಷದೊಳಗಿರಬೇಕು. ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇರಲಿದೆ. ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಸ್ಥೆಯ ನಿಯಮಾನುಸಾರ ಗೌರವ ಧನ ನೀಡಲಾಗುತ್ತದೆ.
ಹುದ್ದೆಗಳ ವಿವರ
ರಾಜ್ಯದ ಹಲವು ಜಿಲ್ಲೆಗಳ ವಿವಿಧ ತಾಲ್ಲೂಕುಗಳ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾವಾರು ಹುದ್ದೆಗಳ ವಿವರ ಈ ಕೆಳಗಿನಂತಿದೆ:
- ಮಂಡ್ಯ : 341
- ದಕ್ಷಿಣ ಕನ್ನಡ : 335
- ರಾಯಚೂರು : 391
- ರಾಮನಗರ : 216
- ಉಡುಪಿ : 193
- ಗದಗ : 196
- ವಿಜಯನಗರ : 297
- ಬಳ್ಳಾರಿ : 102
- ಯಾದಗಿರಿ : 470
ಆಯ್ಕೆ ಪ್ರಕ್ರಿಯೆ ಹೇಗೆ?
ಅಂಗನವಾಡಿಗಳಿರುವ ಆಯಾ ಗ್ರಾಮ, ವಾರ್ಡ್’ಗಳಲ್ಲಿ ನೆಲೆಸಿರುವ ಅಭ್ಯರ್ಥಿಗಳಿಗೆ ಮೊದಲ ಪ್ರಾಶಸ್ತ್ರ ನೀಡಲಾಗುತ್ತದೆ. ವಿಧವೆಯರು, ವಿಚ್ಛೇದಿತೆಯರು, ಪರಿತ್ಯಕ್ತಿಯರು ಹಾಗೂ ಆ್ಯಸಿಡ್ ದಾಳಿಗೆ ತುತ್ತಾದವರು, ಅಂಗವಿಕಲರಿಗೆ ಆದ್ಯತೆ ಇರಲಿದೆ.
ಹುದ್ದೆಗೆ ಮೆರಿಟ್ ಪಟ್ಟಿ ಮತ್ತು ಸಂದರ್ಶನಕ್ಕೆ ಒಳಪಡಿಸುವ ಮೂಲಕ ಆಯ್ಕೆ ಮಾಡಲಾಗುತ್ತದೆ. ಸಮಾನ ಅಂಕಗಳಿದ್ದಲ್ಲಿ ವಯಸ್ಸಿನ ಹಿರಿತನವನ್ನು ಪರಿಗಣಿಸಲಾಗುತ್ತದೆ.
karnemakaone.kar.nic.in ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು. ಜಿಲ್ಲೆಗಳಿಗೆ ಅನುಸಾರವಾಗಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕಗಳನ್ನು ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಕೆ ಲಿಂಕ್ : Apply Now