ಸರಕಾರಿ ಯೋಜನೆ

Apply for New Ration Card : ಹೊಸ ರೇಷನ್ ಕಾರ್ಡ್ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ

WhatsApp Group Join Now
Telegram Group Join Now

Apply for New Ration card : ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಆಹ್ವಾನಿಸಲು ಸರಕಾರ ಸಿದ್ಧವಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

ಹೊಸ ರೇಷನ್ ಕಾರ್ಡ್’ಗಾಗಿ (New Ration card) ಅರ್ಜಿ ಸಲ್ಲಿಕೆಗಾಗಿ ಕಾಯ್ದು ಕೂತವರಿಗೆ ಶೀಘ್ರದಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಸಿಗಲಿದೆ. ಜತೆಗೆ ಈಗಾಗಲೇ ಅರ್ಜಿ ಸಲ್ಲಿಸಿವರಿಗೆ ಅತೀ ಶೀಘ್ರದಲ್ಲಿಯೇ ಹೊಸ ರೇಷನ್ ಕಾರ್ಡ್ ಸಿಗಲಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಾಶಾಸ್ತ್ರ ಇಲಾಖಾ ಸಚಿವ ಕೆ.ಎಚ್.ಮುನಿಯಪ್ಪ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: Rain forecast : ಬರಗಾಲ ಮುಕ್ತಾಯ ಜೂನ್’ನಿಂದ ಉತ್ತಮ ಮುಂಗಾರು | ಈ ವರ್ಷದ ಮಳೆ ಭರವಸೆ ನೀಡಿದ ಹವಾಮಾನ ಇಲಾಖೆ

2,95,986 ಬಿಪಿಎಲ್ ಕಾರ್ಡ್ ವಿತರಣೆ

ರಾಜ್ಯ ಸರಕಾರದ ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆ ಪ್ರಯೋಜನ ಪಡೆಯಲು ರೇಷನ್ ಕಾರ್ಡ್ ಪ್ರಮುಖ ದಾಖಲೆಯಾಗಿದೆ. ಜತೆಗೆ ವಿವಿಧ ಯೋಜನೆಗಳಿಗೂ ರೇಷನ್ ಕಾರ್ಡ್ ಅಗತ್ಯ ದಾಖಲೆಯಾಗಿದೆ. ಮೇಲಾಗಿ ವರ್ಷಗಳಿಂದ ರೇಷನ್ ಕಾರ್ಡ್ ಅರ್ಜಿ ಪ್ರಕ್ರಿಯೆ ಸ್ಥಗಿತಗೊಂಡಿದೆ. ಇದರಿಂದಾಗಿ ಹೊಸ ಪಡಿತರ ಚೀಟಿ ವಿತರಿಸುವಂತೆ ಅರ್ಹ ಫಲಾನುಭವಿಗಳಿಂದ ಆಗ್ರಹ ಕೇಳಿ ಬಂದಿತ್ತು.

ಒಟ್ಟಾರೆ 2.95 ಲಕ್ಷ ಮಂದಿ ರೇಷನ್ ಕಾರ್ಡ್’ಗಾಗಿ ಅರ್ಜಿ ಸಲ್ಲಿಸಿದ್ದು; ಇಷ್ಟೂ ಅರ್ಜಿಗಳನ್ನು ಮಾನ್ಯ ಮಾಡಲು ಆಹಾರ ಇಲಾಖೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ, ಅನುಮತಿಗಾಗಿ ಕಾದು ಕುಳಿತಿತ್ತು. ಇದೀಗ ಹೊಸ ಆದ್ಯತಾ (Priority Household -PHH) ಪಡಿತರ ಚೀಟಿಯನ್ನು ಕೋರಿ ಸಲ್ಲಿಕೆಯಾದ 2,95,986 ಅರ್ಜಿಗಳನ್ನು ಇದೇ ಮಾರ್ಚ್ 31ರೊಳಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ: Summer sun danger to dairy farming : ಹೈನುಗಾರಿಕೆಗೆ ಆಪತ್ತು | ಬಿಸಿಲಿನಿಂದ ಹಾಲಿನ ಫ್ಯಾಟು, ಡಿಗ್ರಿ, ಇಳುವರಿ ಕುಸಿತ

ಹೊಸ ರೇಷನ್ ಕಾರ್ಡ್ ಅರ್ಜಿ ಆರಂಭ

ಗ್ಯಾರ೦ಟಿ ಯೋಜನೆಗಳ ಜತೆಗೆ ಅನೇಕ ಸರಕಾರಿ ಸೌಲಭ್ಯಗಳನ್ನು ಪಡೆಯಲು ರೇಷನ್ ಕಾರ್ಡ್ ಬೇಕು. ಆಸ್ಪತ್ರೆಯಿಂದ ಸರಕಾರಿ ಸೌಲಭ್ಯ ಪಡೆಯಲು, ಆಧಾರ್ ಕಾರ್ಡ್, ಆರೋಗ್ಯ ಭಾರತ್ ಕಾರ್ಡ್ ಮಾಡಿಸಲು, ಆದಾಯ ಮತ್ತು ಜಾತಿ ಪ್ರಮಾಣ ಪತ್ರ, ನಿವಾಸ ಪ್ರಮಾಣಪತ್ರ, ಚಾಲಕರ ಪರವಾನಗಿ, ಪ್ಯಾನ್ ಕಾರ್ಡ್ ಇತ್ಯಾದಿಗಳಿಗೆ ಅರ್ಜಿ ಸಲ್ಲಿಸುವಾಗ ರೇಷನ್ ಕಾರ್ಡ್ ಒಂದು ಪ್ರಮುಖ ದಾಖಲೆಯಾಗಿದೆ.

ಇದರಿಂದಾಗಿ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಸಲು ಹಲವರು ಕಾತರಿಸುತ್ತಿದ್ದಾರೆ. ಈಚೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿತ್ತಾದರೂ ಅತ್ಯಲ್ಪ ಅವಧಿ ನಿಗದಿಪಡಿಸಲಾಗಿತ್ತು. ಮಾತ್ರವಲ್ಲ ಅಲ್ಪ ಅವಧಿಯಲ್ಲಿ ಸರ್ವರ್ ಸಮಸ್ಯೆ ಎದುರಾಗಿತ್ತು. ಇದೀಗ ಪುನಃ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭಿಸುವುದಾಗಿ ಹೇಳಿದೆ. ಏಪ್ರಿಲ್ 1ರಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.

ಇದನ್ನೂ ಓದಿ: Karnataka Rain Report 2024 : ಈ ವರ್ಷ ಭರ್ಜರಿ ಮುಂಗಾರು ಮಳೆ | ಬೇಸಿಗೆ ಮಳೆ ನೀಡಿದ ಮುನ್ಸೂಚನೆ

ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲೆಗಳು

ಹೊಸ ರೇಷನ್ ಕಾರ್ಡ್ ಪಡೆಯಲು ಆನ್‌ಲೈನ್ ವಿಧಾನದಲ್ಲಿ ಹೊಸ ಅರ್ಜಿ ಸಲ್ಲಿಸಬಹುದು. ಹೊಸದಾಗಿ ಎಪಿಎಲ್ ಅಥವಾ ಬಿಪಿಎಲ್ ಕಾರ್ಡ್ (BPL Ration Card) ಪಡೆದುಕೊಳ್ಳಲು ಈ ಕೆಳಗಿನ ದಾಖಲಾತಿಗಳು ಬೇಕು…

  • ವಾಸಸ್ಥಳದ ಪುರಾವೆ (ವೋಟರ್ ಐಡಿ, ಡ್ರೆöÊವಿಂಗ್ ಲೈಸೆನ್ಸ್, ಆಧಾರ್ ಕಾರ್ಡ್)
  • ಕುಟುಂಬದ ಆದಾಯ ಪ್ರಮಾಣ ಪತ್ರ
  • ಇತ್ತೀಚಿನ ಪಾಸ್‌ಪೋರ್ಟ್ ಗಾತ್ರದ ಭಾವಚಿತ್ರ
  • ಮೊಬೈಲ್ ಸಂಖ್ಯೆ ಅಥವಾ ಇ-ಮೇಲ್ ಐಡಿ
  • ವಾರ್ಡ್ ಕೌನ್ಸಿಲರ್ ನೀಡಿದ ಸ್ವಯಂ ಘೋಷಣೆ ಪ್ರಮಾಣಪತ್ರ

ಇದನ್ನೂ ಓದಿ: Google Pay loan : ತ್ವರಿತವಾಗಿ ಗೂಗಲ್ ಪೇ ಲೋನ್ ಪಡೆಯುವುದು ಹೇಗೆ? | 8 ಲಕ್ಷ ರೂಪಾಯಿ ವರೆಗೆ ಸಿಗುತ್ತೆ ಸಾಲ ಸೌಲಭ್ಯ

ಅರ್ಜಿ ಎಲ್ಲಿ ಸಲ್ಲಿಸಬೇಕು?

ಮೇಲ್ಕಾಣಿಸಿದ ಈ ಎಲ್ಲಾ ದಾಖಲಾತಿಗಳೊಂದಿಗೆ Secugen ಬಯೋಮೆಟ್ರಿಕ್ ಸೌಲಭ್ಯವಿರುವ ನಿಮ್ಮ ಹತ್ತಿರದ CSC ಸೆಂಟರ್ ಅಥವಾ ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರ, ಕರ್ನಾಟಕ ಒನ್, ಬೆಂಗಳೂರು ಒನ್ ಸೈಬರ್ ಸೆಂಟರ್‌ಗಳಿಗೆ ಹೋಗಿ ದಾಖಲೆ ನೀಡಿ, ನಿಗದಿತ ಶುಲ್ಕದೊಂದಿಗೆ ಅರ್ಜಿ ಸಲ್ಲಿಕೆ ಮಾಡಬಹುದು.

ಈಗಾಗಲೇ ಸರಕಾರ ಇದೇ ಏಪ್ರಿಲ್ 1ರಿಂದ ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಆಹ್ವಾನಿಸುವುದಾಗಿ ಅಧಿಕೃತವಾಗಿ ಘೋಷಣೆ ಮಾಡಿದೆ. ಅಷ್ಟರಲ್ಲಿ ಅಗತ್ಯ ದಾಖಲಾತಿಗಳನ್ನು ಸಿದ್ಧ ಮಾಡಿಟ್ಟುಕೊಂಡು, ಸರಕಾರ ಆಹಾರ ಇಲಾಖೆಯ ಮೂಲಕ ಅವಕಾಶ ನೀಡಿದ ಕೂಡಲೇ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗೆ

ಇದನ್ನೂ ಓದಿ: RDPR Recruitment 2024 : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನ | ಸಂಬಳ : ₹61,500 | Panchayat Raj fellowship recruitment

WhatsApp Group Join Now
Telegram Group Join Now

Related Posts

error: Content is protected !!