BBMP welfare programs- ಉಚಿತ ಮನೆ, ಎಲೆಕ್ಟ್ರಿಕ್ ಬೈಕ್, ಲ್ಯಾಪ್‌ಟಾಪ್, ಆಟೋ, ಕಾರು ಖರೀದಿ ಸಬ್ಸಿಡಿಗೆ ಅರ್ಜಿ ಆಹ್ವಾನ
2024-25ನೇ ಸಾಲಿನ ಕಲ್ಯಾಣ ಕಾರ್ಯಕ್ರಮಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

2024-25ನೇ ಸಾಲಿನ ಕಲ್ಯಾಣ ಕಾರ್ಯಕ್ರಮಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು; ಪೌರ ಕಾರ್ಮಿಕರು, ಪರಿಶಿಷ್ಟ ಜಾತಿ/ಪಂಗಡಗಳು, ಆರ್ಥಿಕವಾಗಿ ಹಿಂದುಳಿದವರು, ಅಲ್ಪಸಂಖ್ಯಾತರು, ವಿಶೇಷ ಚೇತನರು, ತೃತೀಯ ಲಿಂಗಿಗಳು ಹಾಗೂ ಮಹಿಳೆಯರು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಹೌದು, ಬಿಬಿಎಂಪಿ ಅರ್ಥಾತ್ ಬೆಂಗಳೂರು ಮಹಾನಗರ ಪಾಲಿಕೆಯ 2024-25ನೇ ಸಾಲಿನ ಬಜೆಟ್ ಅಡಿಯಲ್ಲಿ ಅನುಷ್ಠಾನಗೊಳ್ಳುವ ವಿವಿಧ ಕಲ್ಯಾಣ ಕಾರ್ಯಕ್ರಮಗಳಲ್ಲಿ ವಿವಿಧ ಉಚಿತ ಸೌಲಭ್ಯಗಳನ್ನು ಪಡೆಯಲು ಪಾಲಿಕೆ ವ್ಯಾಪ್ತಿಯ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: Zero Interest Crop Loan- ರೈತರಿಗೆ ₹5 ಲಕ್ಷ ಬಡ್ಡಿ ಇಲ್ಲದ ಸಾಲ | ಸಾಲ ಪಡೆಯುವ ಸಂಪೂರ್ಣ ಮಾಹಿತಿ ಇಲ್ಲಿದೆ…
ಅನುಷ್ಠಾನಗೊಳ್ಳುವ ಕಲ್ಯಾಣ ಕಾರ್ಯಕ್ರಮಗಳು
- ಒಂಟಿ ಮನೆ ನಿರ್ಮಾಣ ಮತ್ತು ಅಮೃತ ಮಹೋತ್ಸವ ಯೋಜನೆಯಡಿ ಫ್ಲ್ಯಾಟ್ ಖರೀದಿಗೆ ಧನಸಹಾಯ.
- ಹೊಲಿಗೆ ತರಬೇತಿ ಪಡೆದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ.
- ಪೌರ ಕಾರ್ಮಿಕರು ಹಾಗೂ ಉದ್ಯೋಗಸ್ಥ ಮಹಿಳೆಯರಿಗೆ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ವಿತರಣೆ (ಗಾರ್ಮೆಂಟ್ಸ್ ಉದ್ಯೋಗಿಗಳಿಗೆ ಪ್ರಥಮ ಆದ್ಯತೆ).
- ವಿಶೇಷ ಚೇತನರಿಗೆ ಹೆಚ್ಚುವರಿ ಚಕ್ರ ಅಳವಡಿಸಿದ ಎಲೆಕ್ಟ್ರಿಕ್ ತ್ರಿಚಕ್ರ ವಾಹನ ಮತ್ತು ವೀಲ್ ಚೇರ್ ವಿತರಣೆ.
- ಗಂಭೀರ ಕಾಯಿಲೆ, ಹಿರಿಯ ನಾಗರಿಕರ ಆರೋಗ್ಯ ತಪಾಸಣೆ, ಅಂಗ ವೈಫಲ್ಯ ಶಸ್ತ್ರಚಿಕಿತ್ಸೆಗೆ ಧನಸಹಾಯ.
- ಬೀದಿ ಬದಿ ವ್ಯಾಪಾರಸ್ಥರಿಗೆ ಎಲೆಕ್ಟ್ರಿಕ್ ವೆಂಡಿ೦ಗ್ ಮೆಷಿನ್ ವಿತರಣೆ.
- ಪರಿಶಿಷ್ಟ ಜಾತಿ / ವರ್ಗ ಪೌರ ಕಾರ್ಮಿಕ ಮಕ್ಕಳಿಗೆ ಹಾಗೂ ಮಹಿಳೆಯರಿಗೆ ಕೌಶಲ್ಯಾಭಿವೃದ್ಧಿ ತರಬೇತಿ.
- ಸಂಗೀತ ಸಾಧನ ಖರೀದಿ, ಕ್ರೀಡಾಪಟುಗಳಿಗೆ ಸಹಾಯಧನ, ಸ್ವಯಂ ಉದ್ಯೋಗ, ವಿಶೇಷ ಚೇತನರಿಗೆ ಔಷಧಿ ಅಂಗಡಿ ಪ್ರಾರಂಭ, ಆಟೋ/ಕಾರು ಖರೀದಿಗೆ ಸಹಾಯ.
- ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ.
- ಸಾಂಸ್ಕೃತಿಕ ಹಾಗೂ ವಿಶೇಷ ಚೇತನ ವಿದ್ಯಾ ಸಂಸ್ಥೆಗಳಿಗೆ ಆರ್ಥಿಕ ನೆರವು.
- ಶಾಲಾ ಶುಲ್ಕ ಮರುಪಾವತಿ, ಉನ್ನತ / ವಿದೇಶ ವ್ಯಾಸಂಗಕ್ಕೆ ಸಹಾಯಧನ.

ಇದನ್ನೂ ಓದಿ: Male nakshatragalu 2025- 2025ರ ಮಳೆ ನಕ್ಷತ್ರಗಳು | ಹೇಗಿದೆ ಈ ವರ್ಷದ ಮಳೆಗಾಲ?
ಅರ್ಜಿ ಸಲ್ಲಿಕೆ ಹೇಗೆ?
ಸಂಬ೦ಧಿಸಿದ ಫಲಾನುಭವಿಗಳು ಆಯಾಯ ಕಲ್ಯಾಣ ಕಾರ್ಯಕ್ರಮಗಳ ಅಡಿಯಲ್ಲಿ ಸಂಬ೦ಧಿತ ಬಿಬಿಎಂಪಿ ವಲಯ ಸಹಾಯಕ ಕಂದಾಯ ಅಧಿಕಾರಿ (ಕಲ್ಯಾಣ) ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅಗತ್ಯ ದಾಖಲೆಗಳೊಂದಿಗೆ ಸ್ವಯಂ ದೃಢೀಕರಣ ಸಲ್ಲಿಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ನಾಗರಿಕರು ಈ ಅವಕಾಶದ ಸದುಪಯೋಗ ಮಾಡಿಕೊಳ್ಳಲು ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ.
ಉಪಮುಖ್ಯಮಂತ್ರಿಗಳ ಕಾಳಜಿ ಮತ್ತು ಸಾರ್ವಜನಿಕರ ಆಶೋತ್ತರಗಳಿಗೆ ಸ್ಪಂದಿಸಿ, ಬೆಂಗಳೂರು ನಗರದಲ್ಲಿ ಅತೀ ಹೆಚ್ಚು ಸಾರ್ವಜನಿಕರು ಕಲ್ಯಾಣ ಕಾರ್ಯಕ್ರಮದ ಫಲಾನುಭವಿಗಳಾಗಬೇಕೆಂಬ ಉದ್ದೇಶದಿಂದ ಮೇಲೆ ತಿಳಿಸಿರುವ ಎಲ್ಲಾ ಕಾರ್ಯಕ್ರಮಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಕಾಲಾವಕಾಶ ನೀಡಲು ಕೊನೆಯ ದಿನಾಂಕವನ್ನು 29-03-2025ರ ವರೆಗೆ ವಿಸ್ತರಿಸಲಾಗಿದೆ. ಅರ್ಹ ಫಲಾನುಭವಿಗಳು ಈ ಸದಾವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಈ ಮೂಲಕ ಕೋರಲಾಗಿದೆ.
ಅರ್ಜಿ ಸಲ್ಲಿಕೆ ಕೊನೇ ದಿನಾಂಕ: 29-03-2025
ಇದನ್ನೂ ಓದಿ: IPPB Group Accident Insurance-500 ರೂಪಾಯಿಗೆ 10 ಲಕ್ಷ ವಿಮೆ ಪರಿಹಾರ | ಅಂಚೆ ಇಲಾಖೆಯ ಈ ಅವಕಾಶ ಮಿಸ್ ಮಾಡದೇ ಬಳಸಿಕೊಳ್ಳಿ…