ಕೇ೦ದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿಯಲ್ಲಿ (Central Board of Secondary Education – CBSE) 12ನೇ ತರಗತಿ ಮತ್ತು ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗಾಗಿ ನೇರ ನೇಮಕಾತಿಯ ಮೂಲಕ ಸೂಪರಿಂಟೆಂಡೆಂಟ್ (Superintendent), ಜೂನಿಯರ್ ಅಸಿಸ್ಟೆಂಟ್ (Junior Assistant) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಭಾರತ ಸರ್ಕಾರದ ನಿಯಂತ್ರಣದಲ್ಲಿರುವ ‘CBSE’ ಭಾರತದಲ್ಲಿ ಸಾರ್ವಜನಿಕ ಮತ್ತು ಖಾಸಗಿ ಶಾಲೆಗಳಿಗೆ ರಾಷ್ಟ್ರೀಯ ಮಟ್ಟದ ಶಿಕ್ಷಣ ನೀಡುವ ಮಂಡಳಿಯಾಗಿದೆ. ಸದರಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಇದೀಗ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: KSDA AO AAO Recruitment 2025 : ಕರ್ನಾಟಕ ಕೃಷಿ ಇಲಾಖೆ 945 ಹುದ್ದೆಗಳಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ
- ಸೂಪರಿಂಟೆಂಡೆಂಟ್ : 147
- ಜೂನಿಯರ್ ಅಸಿಸ್ಟೆಂಟ್ : 70
- ಒಟ್ಟು ಹುದ್ದೆಗಳು : 212
ವಿದ್ಯಾರ್ಹತೆ ವಿವರ
‘ಸಿಬಿಎಸ್ಇ’ ಸೂಪರಿಂಟೆಂಡೆಂಟ್ ಹಾಗೂ ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ವಿದ್ಯಾ ಸಂಸ್ಥೆಯಿ೦ದ 12ನೇ ತರಗತಿ, ಯಾವುದೇ ಪದವಿ ಪೂರ್ಣಗೊಳಿಸಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ಇದನ್ನೂ ಓದಿ: New facilities for Govt employees : ಸರ್ಕಾರಿ ನೌಕರರಿಗೆ ಹೊಸ ವರ್ಷಕ್ಕೆ ಭರ್ಜರಿ ಸೌಲಭ್ಯಗಳು
ವಯೋಮಿತಿ, ವೇತನವೆಷ್ಟು?
ಅಭ್ಯರ್ಥಿಗಳ ಕನಿಷ್ಠ ವಯಸ್ಸು 2025ರ ಜನವರಿ 31ಕ್ಕೆ ಅನ್ವಯವಾಗುವಂತೆ 18 ವರ್ಷ ಮೇಲ್ಪಟ್ಟಿರಬೇಕು. ಸೂಪರಿಂಟೆಂಡೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 30 ವರ್ಷದೊಳಗಿರಬೇಕು. ಜೂನಿಯರ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 27 ವರ್ಷದೊಳಗಿರಬೇಕು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್ಸಿ/ಎಸ್ಪಿ ಅಭ್ಯರ್ಥಿಗಳಿಗೆ 5 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ರಿಂದ 15 ವರ್ಷ ವಯೋಮಿತಿ ಸಡಿಲಿಕೆ ನಿಗದಿಪಡಿಸಲಾಗಿದೆ.
ಆಯ್ಕೆ ಪ್ರಕ್ರಿಯೆ ಹೇಗೆ?
ಪೂರ್ವಭಾವಿ ಸ್ಕಿçÃನಿಂಗ್ ಪರೀಕ್ಷೆ, ಲಿಖಿತ ಮುಖ್ಯ ಪರೀಕ್ಷೆ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಹುದ್ದೆಗೆ ಮಾಡಿಕೊಳ್ಳಲಾಗುತ್ತದೆ.
ಸೂಪರಿಂಟೆಂಡೆಂಟ್ ಹುದ್ದೆಗೆ ಎರಡು ಹಂತದಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಹಂತ ಒಂದು ಆಪ್ಟೆಕ್ಟಿವ್ ಪ್ರಕಾರದ ಪರೀಕ್ಷೆಯನ್ನು 450 ಅಂಕಗಳಿಗೆ ನಡೆಸಲಾಗುತ್ತದೆ. ಇದರಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಗೆ ಹಂತ 2 ಆಬ್ಜೆಕ್ಟಿವ್ ಮತ್ತು ಲಿಖಿತ ಪ್ರಕಾರ ಪರೀಕ್ಷೆಯನ್ನು 150 ಮತ್ತು 150 ಅಂಕಗಳಿಗೆ ನಡೆಸಲಾಗುತ್ತದೆ.
ಜೂನಿಯರ್ ಅಸಿಸ್ಟೆಂಟ್ ಹುದ್ದೆಗೆ ಆಬ್ಜೆಕ್ಟಿವ್ ಪ್ರಕಾರದ ಪರೀಕ್ಷೆಯನ್ನು 300 ಅಂಕಗಳಿಗೆ ನಡೆಸಲಾಗುತ್ತದೆ. ಪರೀಕ್ಷೆ ಹಿ ಮತ್ತು ಇಂಗಲೀಷ್ ಭಾಷೆಯಲ್ಲಿರುತ್ತದೆ. ಕರ್ನಾಟಕದ ಅಭ್ಯರ್ಥಿಗಳಿಗೆ ಬೆಂಗಳೂರು ಪರೀಕ್ಷಾ ಕೇಂದ್ರವಾಗಿರಲಿದೆ.
ಇದನ್ನೂ ಓದಿ: IPPB SO Recruitment 2025 : ಪೋಸ್ಟ್ ಪೇಮೆಂಟ್ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಅರ್ಜಿ ಶುಲ್ಕವೆಷ್ಟು?
ಎಸ್ಸಿ/ಎಸ್ಟಿ, ಅಂಗವಿಕಲ, ಮಾಜಿ ಸೈನಿಕ, ಮಹಿಳಾ ಮತ್ತು ಇಲಾಖಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಒಬಿಸಿ, ಯುಆರ್, ಇಡಬ್ಲ್ಯುಎಸ್ ಅಭ್ಯರ್ಥಿಗಳಿಗೆ 800 ರೂ. ಶುಲ್ಕ ವಿಧಿಸಲಾಗಿದೆ. ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು.
ಅರ್ಜಿ ಸಲ್ಲಿಕೆ ಹೇಗೆ?
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸಿಬಿಎಸ್ಇ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಬೇಕು. ಮೊದಲಿಗೆ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್ಲೋಡ್ ಮಾಡಿಕೊಂಡು ನಿಗದಿತ ನಮೂನೆಯಲ್ಲಿ ಅರ್ಜಿ ಭರ್ತಿ ಮಾಡಿಕೊಳ್ಳಿ. ನಂತರ ಇಮೇಲ್ ಐಡಿ, ಮೊಬೈಲ್ ಸಂಖ್ಯೆ, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಛಾಯಾಚಿತ್ರ ಇತ್ಯಾದಿ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿ ಅಪ್ಲೋಡ್ ಮಾಡುವ ಮೂಲಕ ಸಲ್ಲಿಕೆ ಮಾಡಬೇಕು.
ಅರ್ಜಿ ಸಲ್ಲಿಕೆ ಕೊನೇ ದಿನಾಂಕ : 31-01-2025
ಅಧಿಸೂಚನೆ ಮತ್ತು ಅರ್ಜಿ ನಮೂನೆ : Download
ಅರ್ಜಿ ಲಿಂಕ್ : Apply Now
ಇದನ್ನೂ ಓದಿ: ಪ್ರತಿ ತಿಂಗಳು ₹5000 ಪಿಂಚಣಿ ಪಡೆಯಬೇಕೆ? | ಕೂಡಲೇ ಅಟಲ್ ಪಿಂಚಣಿ ಯೋಜನೆಯಡಿ ಈ ಕೆಲಸ ಮಾಡಿ…
One Comment