ಭಾರತದ ಅತಿದೊಡ್ಡ ಹಡಗು ನಿರ್ಮಾಣ (Shipbuilding plant) ಮತ್ತು ನಿರ್ವಹಣೆ ಮಾಡುವ ಸಂಸ್ಥೆಯಾಗಿರುವ ‘ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್’ನಲ್ಲಿ (Cochin Shipyard Limited) ಖಾಲಿ ಇರುವ ಹುದ್ದೆಗಳ ಭರ್ತಿಗೆ 10ನೇ ತರಗತಿ, ಐಟಿಐ ಪೂರ್ಣಗೊಳಿಸಿದ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಹುದ್ದೆಗಳ ವಿವರ
‘ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್’ ಐದು ವರ್ಷದ ಅವಧಿಗೆ ಗುತ್ತಿಗೆಯ ಆಧಾರದ ಮೇಲೆ ಈ ಕೆಳಕಂಡ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಶೀಟ್ ಮೆಟಲ್ ವರ್ಕರ್ | 42 |
ವೆಲ್ಡರ್ | 02 |
ಮೆಕಾನಿಕಲ್ ಡೀಸೆಲ್ | 11 |
ಮೆಕಾನಿಕ್ ಮೋಟಾರ್ ವೆಹಿಕಲ್ | 05 |
ಪ್ಲಂಬರ್ | 20 |
ಪೇಂಟರ್ | 17 |
ಎಲೆಕ್ಟ್ರಿಷಿಯನ್ | 36 |
ಎಲೆಕ್ಟ್ರಾನಿಕ್ ಮೆಕಾನಿಕ್ | 32 |
ಇನ್‌ಸ್ಟ್ರುಮೆಂಟ್ ಮೆಕಾನಿಕ್ | 38 |
ಶಿಪ್‌ರೈಟ್ ವುಡ್ | 07 |
ಮಷಿನಿಷ್ | 13 |
ಫಿಟ್ಟರ್ | 01 |
ಒಟ್ಟು ಹುದ್ದೆಗಳು | 224 |
ಮೊಬೈಲ್‌ನಲ್ಲೇ ಚೆಕ್ ಮಾಡಿ ಬೆಳೆವಿಮೆ ಪರಿಹಾರ | ಇಲ್ಲಿದೆ ಸರಳ ವಿಧಾನ
ವಿದ್ಯಾರ್ಹತೆ, ವಯೋಮಿತಿ ವಿವರ
ಮೇಲ್ಕಾಣಿಸಿದ ‘ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್’ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ 10ನೇ ತರಗತಿ ಮತ್ತು ಐಟಿಐ ಪೂರ್ಣಗೊಳಿಸಿರಬೇಕು. ಮೂರು ವರ್ಷದ ಕೆಲಸದ ಅನುಭವ ಹೊಂದಿರಬೇಕು.
ಅಭ್ಯರ್ಥಿಯ ಗರಿಷ್ಠ ವಯಸ್ಸು ಇದೇ ಡಿಸೆಂಬರ್ 30, 2024ಕ್ಕೆ ಅನ್ವಯವಾಗುವಂತೆ 45 ವರ್ಷದೊಳಗಿರಬೇಕು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮತಿ ಸಡಿಲಿಕೆ ಅನ್ವಯವಾಗಲಿದೆ.
ಮಾಸಿಕ ವೇತನವೆಷ್ಟು?
‘ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್’ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 23,300 ರೂ. ವೇತನ ನಿಗದಿ ಪಡಿಸಲಾಗಿದೆ. ಹೆಚ್ಚುವರಿ ಅವಧಿಯ ಕೆಲಸಕ್ಕೆ ಗರಿಷ್ಠ 5,830 ರೂ. ವೇತನ ನೀಡಲಾಗುತ್ತದೆ.
ವಾಟ್ಸಾಪ್‌ನಲ್ಲೇ ಸಿಗುತ್ತವೆ ಗ್ರಾಮ ಪಂಚಾಯತಿ ಹಲವು ಸೇವೆಗಳು | ಈ ವಾಟ್ಸಾಪ್ ನಂಬರ್‌ಗೆ ‘ಹಾಯ್’ ಅಂತ ಕಳಿಸಿ..
ಅರ್ಜಿ ಶುಲ್ಕವೆಷ್ಟು?
ಎಸ್‌ಸಿ, ಎಸ್‌ಟಿ, ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. ಈ ವರ್ಗದ ಅಭ್ಯರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಇನ್ನುಳಿದ ಎಲ್ಲ ಇತರ ವರ್ಗದ ಅಭ್ಯರ್ಥಿಗಳು 600 ರೂ. ಅರ್ಜಿ ಶುಲ್ಕ ಆನ್‌ಲೈನ್ ಮೂಲಕ ಪಾವತಿಸಬೇಕು.
ಅರ್ಜಿ ಸಲ್ಲಿಕೆ ಹೇಗೆ?
ಆಪ್ಟೆಕ್ಟಿವ್ ಟೈಪ್ ಟೆಸ್ಟ್ ಮತ್ತು ಪ್ರಾಯೋಗಿಕ ಪರೀಕ್ಷೆ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಹುದ್ದೆಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅಪ್ಟೆಕ್ಟಿವ್ ಟೈಪ್ ಟೆಸ್ಟ್ 30 ಅಂಕ ಮತ್ತು ಪ್ರಾಯೋಗಿಕ ಪರೀಕ್ಷೆ 70 ಅಂಕಕ್ಕೆ ನಡೆಯಲಿದೆ.
ಆಸಕ್ತ ಅಭ್ಯರ್ಥಿಗಳು https://cochinshipyard.in/ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸಂಪೂರ್ಣ ಮಾಹಿತಿಗಾಗಿ ಅಧಿಸೂಚನೆ ಡೌನ್‌ಲೋಡ್ ಮಾಡಿ…
ಅರ್ಜಿ ಸಲ್ಲಿಕೆ ಕೊನೇ ದಿನ : 30-12-2024
One Comment