ಮುಂದಿನ ಒಂದುವಾರ ರಾಜ್ಯದಲ್ಲಿ ಭಾರಿ ಚಳಿ (severe cold) ಇರಲಿದ್ದು; ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಕನಿಷ್ಟ ತಾಪಮಾನ ಇಳಿಕೆಯಾಗಲಿದೆ. ಹಲವು ಜಿಲ್ಲೆಗಳಲ್ಲಿ ಭಾರಿ ಶೀತಗಾಳಿ (Cold wave) ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.
ಜನವರಿ ತಿಂಗಳ ಸರಾಸರಿ ಕನಿಷ್ಠ ತಾಪಮಾನವು 15.8 ಡಿಗ್ರಿ ಸೆಲ್ಸಿಯಸ್ ಇರಲಿದೆ. ಆದರೆ, ಈ ಕನಿಷ್ಠ ತಾಪಮಾನವು ಮುಂದಿನ ಒಂದು ವಾರದಲ್ಲಿ 10 ರಿಂದ 12 ಡಿಗ್ರಿ ಸೆಲ್ಸಿಯಸ್‌ನಷ್ಟು ಇಳಿಕೆಯಾಗಲಿದೆ. ಉತ್ತರ ಭಾರತದಲ್ಲಿ ಬೀಸುತ್ತಿರುವ ಶೀತಗಾಳಿ ಪ್ರಭಾವದಿಂದ ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನ ಭಾಗಗಳಲ್ಲಿ ಕನಿಷ್ಠ ತಾಪಮಾನ ಸರಾಸರಿಗಿಂತ ಅಧಿಕ ಪ್ರಮಾಣ ಇಳಿಕೆಯಾಗಲಿದೆ.
ಇದನ್ನೂ ಓದಿ: Agricultural Pumpset : ಈ ರೈತರ ಕೃಷಿ ಪಂಪ್‌ಸೆಟ್‌ಗೆ ಉಚಿತ ವಿದ್ಯುತ್ ಬಂದ್?
ಈ ಜಿಲ್ಲೆಗಳಲ್ಲಿ ಶೀತ ಮಾರುತ ಮುನ್ಸೂಚನೆ
ವಿಶೇಷವಾಗಿ ಉತ್ತರ ಕರ್ನಾಟಕ ಜಿಲ್ಲೆಗಳಾದ ಬೀದರ್, ರಾಯಚೂರು ಹಾಗೂ ವಿಜಯಪುರ ಮೂರು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಕೋಲ್ಡ್ ವೇವ್ (Cold wave) ಬೀಸುವ ಸಾಧ್ಯತೆ ಇದೆ. ಉತ್ತರ ದಿಕ್ಕಿನಿಂದ ದಕ್ಷಿಣಕ್ಕೆ ಗಾಳಿ ಬೀಸುತ್ತಿರುವುದರಿಂದ ಈ ಜಿಲ್ಲೆಗಳಲ್ಲಿ ಜನವರಿ 6ರ ವರೆಗೆ ಶೀತ ಅಲೆ ಕಾಣಿಸಿಕೊಳ್ಳುವ ಸಂಭವವಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಉತ್ತರ ಒಳನಾಡಿನ ಬೀದರ್, ರಾಯಚೂರು ಹಾಗೂ ವಿಜಯಪುರ ಮೂರು ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶವು ವಾಡಿಕೆ ಪ್ರಮಾಣಕ್ಕಿಂತ ಬಹಳಷ್ಟು ಇಳಿಕೆಯಾಗಿದೆ. ಈಗಾಗಲೇ ವಿಜಯಪುರ 5.9 ಡಿ.ಸೆ, ಬೀದರ್ 3.6 ಡಿ.ಸೆ, ಹಾಗೂ ರಾಯಚೂರು 4.6 ಡಿ.ಸೆ, ನಷ್ಟು ಕನಿಷ್ಠ ಉಷ್ಣಾಂಶ ಇಳಿಕೆಯಾಗಿದೆ.
ಇದನ್ನೂ ಓದಿ: Co-operative Central Bank Recruitment 2025 : ಕೋ-ಅಪರೇಟಿವ್ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರಿನಲ್ಲಿ ಚಳಿ ಹೆಚ್ಚಳ
ರಾಜಧಾನಿ ಬೆಂಗಳೂರಿನಲ್ಲಿ ಚಳಿ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು; ವಾಡಿಕೆಗಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್‌ನಷ್ಟು ಕನಿಷ್ಟ ಉಷ್ಣಾಂಶ ಕಡಿಮೆಯಾಗಿದೆ. ಬೆಂಗಳೂರು ನಗರದಲ್ಲಿ ನಿನ್ನೆ (ಜನವರಿ 4) ಕನಿಷ್ಠ ಉಷ್ಣಾಂಶ 14 ಡಿ.ಸೆ. ದಾಖಲಾಗಿದೆ. ಮುಂದಿನ ದಿನಗಳಲ್ಲಿ ನಗರದಲ್ಲಿ ಕನಿಷ್ಠ ಉಷ್ಣಾಂಶ 11 ಡಿ.ಸೆ. ವರೆಗೂ ಇಳಿಕೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ನಗರದಲ್ಲಿ ಮುಂದಿನ ಎರಡು ದಿನಗಳ ಕಾಲ ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣ ಕಂಡು ಬರದಲಿದೆ ಎಂದು ಬೆಂಗಳೂರು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ತ್ವರಿತವಾಗಿ ಗೂಗಲ್ ಪೇ ಲೋನ್ ಪಡೆಯುವುದು ಹೇಗೆ? | ₹8 ಲಕ್ಷ ರೂಪಾಯಿ ವರೆಗೆ ಸಿಗುತ್ತೆ ಸಾಲ ಸೌಲಭ್ಯ
2 Comments