Crop Insurance Karnataka : ರೈತರೇ ನಿಮಗೆ ಗ್ಯಾರಂಟೀ ಬೆಳೆ ವಿಮೆ ಹಣ ಸಿಗಬೇಕೆಂದರೆ ತಪ್ಪದೇ ಈ ಕ್ರಮ ಅನುಸರಿಸಿ…

ಹವಾಮಾನ ವೈಪರೀತ್ಯದ ಕಾರಣದಿಂದ ಕೃಷಿಕರು ಪದೇ ಪದೆ ನಷ್ಟಕ್ಕೆ ಒಳಗಾಗುತ್ತಿದ್ದು; ಅತಿವೃಷ್ಟಿ ಅಥವಾ ಅನಾವೃಷ್ಟಿ ಯಾವುದೇ ಸಂಭವಿಸಿದರೂ ರೈತ ಸಂಕಷ್ಟಕ್ಕೆ ಸಿಲುಕುತ್ತಾರೆ. ಹೀಗಾಗಿ ರೈತರನ್ನು ಸಂಕಷ್ಟದಿ೦ದ ಪಾರು ಮಾಡಲು ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ (Karnataka Raitha Suraksha Pradhana Mantri Fasal Bima Yojana) ಜಾರಿಗೆ ತರಲಾಗಿದೆ.
ಬೆಳೆ ವಿಮೆ ಮಾಡಿಸಿದ ನಂತರ ನೈಸರ್ಗಿಕ ವಿಪತ್ತಿನಿಂದಾದ ಬೆಳೆ ನಷ್ಟಕ್ಕೆ ರೈತನು ವಿಮಾ ಹಕ್ಕು ಪಡೆಯಬಹುದು. ಅಂದರೆ ಪ್ರಾಕೃತಿಕ ವಿಕೋಪಗಳಾದ ನೈಸರ್ಗಿಕ ಬೆಂಕಿ, ಬರ ಪರಿಸ್ಥಿತಿ, ಬಿರುಗಾಳಿ, ನೀರಿನಿಂದ ಉಂಟಾಗುವ ಹಾನಿ, ಪ್ರವಾಹ, ಅಕಾಲಿಕ ಮಳೆ, ಆಲಿಕಲ್ಲು ಮಳೆ, ಭೂ ಕುಸಿತ, ಕೀಟಬಾಧೆ ಇವುಗಳಿಂದ ಸಂಭವಿಸುವ ಹಾನಿಗಳಿಗೆ ಪರಿಹಾರ ಪಡೆಯಬಹುದು.
ಇದನ್ನೂ ಓದಿ: PM Kisan 19th installment : ಫೆಬ್ರವರಿ 25ಕ್ಕೆ ರೈತರ ಖಾತೆಗೆ ಪಿಎಂ ಕಿಸಾನ್ 19ನೇ ಕಂತಿನ ಹಣ ಜಮಾ
ವಿಮೆ ಪರಿಹಾರ ಪಡೆಯಲು ಏನು ಮಾಡಬೇಕು?
ಹಾಗಂತ ಪ್ರೀಮಿಯಂ ಪಾವತಿಸಿದ ಮಾತ್ರಕ್ಕೆ ಬೆಳೆ ವಿಮಾ ಪರಿಹಾರ ರೈತರ ಕೈಸೇರುವುದಿಲ್ಲ. ಮೊದಲಿಗೆ ಪ್ರಕೃತಿ ವಿಕೋಪದಿಂದಾಗಿ ಬೆಳೆ ಹಾಳಾದರೆ ರೈತರು ಬೆಳೆ ಸಮೀಕ್ಷೆ ಆಪ್ನಲ್ಲಿ ಮಾಹಿತಿ ಅಪ್ಲೋಡ್ ಮಾಡಬೇಕು.
ಒಂದು ವೇಳೆ ನೀವು ಮೊಬೈಲ್ನಲ್ಲಿ ಮಾಹಿತಿ ಅಪ್ಲೋಡ್ ಮಾಡುವುದು ಗೊತ್ತಿರದಿದ್ದರೆ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಬೆಳೆ ಸಮೀಕ್ಷೆ ಮಾಡಿಸಬಹುದು.
ಬಳಿಕ ಪ್ರಕೃತಿ ವಿಕೋಪದಿಂದ ಬೆಳೆ ಹಾಳಾದಾಗ ರೈತರು ಯಾವ ವಿಮಾ ಕಂಪನಿಗಳಿಗೆ ಬೆಳೆ ವಿಮೆ ಮಾಡಿಸಿದ್ದಾರೋ ಆ ವಿಮಾ ಕಂಪನಿಗೆ 72 ಗಂಟೆಯೊಳಗೆ ಕರೆ ಮಾಡಬೇಕು. ಆಗ ವಿಮಾ ಕಂಪನಿಯ ಸಿಬ್ಬಂದಿಗಳು ರೈತರ ಜಮೀನಿಗೆ ಭೇಟಿ ನೀಡಿ ಬೆಳೆ ಹಾಳಾದ ಕುರಿತು ಪರಿಶೀಲನೆ ನಡೆಸುತ್ತಾರೆ.
ಯಾವ ಪ್ರಮಾಣದಲ್ಲಿ ಬೆಳೆ ಹಾಳಾಗಿದೆಯೋ ಅದನ್ನು ಪರಿಶೀಲಿಸಿ ರೈತರಿಗೆ ಪರಿಹಾರ ನೀಡಲು ಮೇಲಧಿಕಾರಿಗಳ ಗಮನಕ್ಕೆ ತರುತ್ತಾರೆ. ಮೇಲಧಿಕಾರಿಗಳು ಕೆಲವು ದಿನಗಳ ನಂತರ ರೈತರ ಖಾತೆಗೆ ಬೆಳೆ ವಿಮೆ ಹಣ ಜಮೆ ಮಾಡುತ್ತಾರೆ.
ಇದನ್ನೂ ಓದಿ: Geranium Cultivation : ರೈತರಿಗೆ ಭಾರೀ ಆದಾಯ ತರುವ ವನಸ್ಪತಿ ಬೆಳೆ
ಯೋಜನೆಯ ಉದ್ದೇಶ
2016ರ ಜನವರಿ 13 ರಂದು ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಘೋಷಿಸಲಾಗಿದೆ. ಕೇಂದ್ರ ಕೃಷಿ ಮತ್ತು ಕಲ್ಯಾಣ ಸಚಿವಾಲಯವು ಈ ಯೋಜನೆಯ ನಿರ್ವಹಣೆ ಮಾಡುತ್ತಿದ್ದು, ಕರ್ನಾಟಕ ಸೇರಿದಂತೆ ಭಾರತದ ಎಲ್ಲ ರಾಜ್ಯಗಳಲ್ಲೂ ಜಾರಿಯಲ್ಲಿದೆ. ರೈತರಿಗೆ ಕಡಿಮೆ ಬೆಲೆಗೆ ಬೆಳೆ ವಿಮೆ ಒದಗಿಸುವುದೇ ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ.
ಆದರೆ ರಾಜ್ಯದಲ್ಲಿ ಬೆಳೆ ವಿಮೆ ಯೋಜನೆ ರೈತರ ನೆರವಿಗೆ ಬರುತ್ತಿಲ್ಲ ಎಂಬ ಆಪಾದನೆ ಇದೆ. ರೈತರು ಕಟ್ಟಿದ ಪ್ರಿಮಿಯಂ ಮೊತ್ತದಷ್ಟೂ ವಿಮೆ ಪರಿಹಾರ ವಿತರಣೆಯಾಗುತ್ತಿಲ್ಲ ಎನ್ನಲಾಗುತ್ತಿದೆ. ರೈತರಿಗೆ ನ್ಯಾಯಯುತ ವಿಮೆ ಪರಿಹಾರ ಸಿಗುವಂತೆ ಜಿಲ್ಲಾಧಿಕಾರಿಗಳು ಸಂಬ೦ಧಪಟ್ಟ ಜಿಲ್ಲೆಯಲ್ಲಿ ಈ ಬಗ್ಗೆ ನಿಗಾ ವಹಿಸಬೇಕು.
ಬೆಳೆ ವಿಮೆ ಮಾಹಿತಿ ಪಡೆಯಲು ಹಾಗೂ ತಮ್ಮ ಜಿಲ್ಲೆಯ ಬೆಳೆ ವಿಮಾ ಕಂಪನಿಯ ಸಿಬ್ಬಂದಿ ಮೊಬೈಲ್ ನಂಬರ್ ಬೇಕಾದರೆ 1800180 1551 ಉಚಿತ ಸಹಾವಾಣಿ ನಂಬರಿಗೆ ಕರೆ ಮಾಡಬಹುದು. ಬೆಳೆ ವಿಮೆ ಪ್ರೀಮಿಯಂ ಅನ್ನು ಯಾವ ಕಂಪನಿಗೆ ಪಾವತಿಸಲಾಗಿದೆ ಎಂಬುವುದನ್ನು ಹಾಗೂ ಬೆಳೆವಿಮೆ ಸ್ಟೇಟಸ್ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: KCC Loan Limit Increase : ರೈತರಿಗೆ ಕಡಿಮೆ ಬಡ್ಡಿಯಲ್ಲಿ ₹5 ಲಕ್ಷ ಕೆಸಿಸಿ ಲೋನ್