ಕೃಷಿಸರಕಾರಿ ಯೋಜನೆ

Forest and Revenue Joint Survey : ರೈತರಿಗೆ ಅರಣ್ಯ ಭೂಮಿ ಮಂಜೂರಾತಿ | ಈ ಜಿಲ್ಲೆಗಳ ರೈತರಿಗೆ ಹಕ್ಕುಪತ್ರ?

WhatsApp Group Join Now
Telegram Group Join Now

Forest and Revenue Joint Survey : ಸರಕಾರಿ ಅರಣ್ಯದ ಅಕ್ಕಪಕ್ಕದಲ್ಲಿ ಕೃಷಿ ಮಾಡುತ್ತ ಅರಣ್ಯ ಇಲಾಖೆಯಿಂದ ನಾನಾ ನಮೂನೆ ಸಮಸ್ಯೆಗಳನ್ನು ಎದುರಿಸುತ್ತಿರುವ ರೈತರಿಗೆ ಕಂದಾಯ ಸಚಿವರು ಗುಡ್‌ನ್ಯೂಸ್ ನೀಡಿದ್ದಾರೆ. ಅರಣ್ಯ ಮತ್ತು ಕಂದಾಯ ಜಂಟಿ ಸರ್ವೇ ನಡೆಸುವ ಮೂಲಕ ಈ ರೈತರ ಸಮಸ್ಯೆಗೆ ಅಂತ್ಯ ಹಾಕುವ ಭರವಸೆ ನೀಡಿದ್ದಾರೆ. ಈ ಸಂಬAಧ ಸರಕಾರ ಅಧಿಕೃತ ಅಧಿಸೂಚನೆ ಹೊರಡಿಸಿದ್ದು; ಈಗಾಗಲೇ ಜಂಟಿ ಸರ್ವೇ ಕಾರ್ಯ ಕೂಡ ಶುರುವಾಗಿದೆ.

ಅರಣ್ಯ ಭೂಮಿ ಡಿನೋಟಿಫಿಕೇಷನ್ ಗಿಫ್ಟ್

ಜಂಟಿ ಸರ್ವೇಯಿಂದ ರೈತರ ಭೂಮಿಯ ಬಗ್ಗೆ ಖಚಿತ ಮಾಹಿತಿ ತಿಳಿಯಲಿದ್ದು; ಆಕಸ್ಮಾತ್ ಅರಣ್ಯ ಇಲಾಖೆಯು ಕಂದಾಯ ಭೂಮಿಯನ್ನು ತಪ್ಪಾಗಿ ನೋಟಿಫೈ ಮಾಡಿರುವುದು ಜಂಟಿ ಸರ್ವೆ ಅಥವಾ ಡ್ರೋನ್ ಸರ್ವೆಯಿಂದ ಖಚಿತವಾದರೆ ಆ ಭೂಮಿಯನ್ನು ಡಿನೋಟಿಫಿಕೇಷನ್ ಮಾಡಲು ಅರಣ್ಯ ಇಲಾಖೆಗೆ ಮನವಿ ಸಲ್ಲಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಭರವಸೆ ನೀಡಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಜಂಟಿ ಸರ್ವೆ ಬಳಿಕ ಕಂದಾಯ ಭೂಮಿ ಮತ್ತು ಅರಣ್ಯ ಭೂಮಿ ಗಡಿಗಳನ್ನು ನಿಖರವಾಗಿ ಗುರುತಿಸಲಾಗುತ್ತದೆ. ಗಡಿ ಗುರುತಿಸಿದ ಬಳಿಕ ಅಂತಹ ಜಮೀನಿನಲ್ಲಿ ಒಂದು ವೇಳೆ ಕೃಷಿ ಚಟುವಟಿಕೆ ನಡೆಯುತ್ತಿದ್ದರೆ, ಅರ್ಹ ರೈತರಿಗೆ ಸಾಗುವಳಿ ಚೀಟಿ ನೀಡಲಾಗುತ್ತದೆ. ಫಾರಂ-57 ಅಡಿಯಲ್ಲಿ ಅರ್ಹ ರೈತರು ಅರ್ಜಿ ಸಲ್ಲಿಸಿದ್ದರೆ, ಬಗರ್‌ಹುಕುಂ ಆ್ಯಪ್ ಮೂಲಕ ಭೂ ಮಂಜೂರು ಮಾಡುವುದು ಸರ್ಕಾರದ ಕರ್ತವ್ಯವಾಗಿದೆ ಎಂದಿದ್ದಾರೆ.

ಇದನ್ನೂ ಓದಿ: Karnataka Rain Report 2024 : ಈ ವರ್ಷ ಭರ್ಜರಿ ಮುಂಗಾರು ಮಳೆ | ಬೇಸಿಗೆ ಮಳೆ ನೀಡಿದ ಮುನ್ಸೂಚನೆ

ತುಂಬಾ ಹಳೆಯ ಸಮಸ್ಯೆ

ಹಾಗೇ ನೋಡಿದರೆ, ಅರಣ್ಯ ಮತ್ತು ಕಂದಾಯ ಭೂಮಿಯ ಗಡಿ ವಿಚಾರದ ಸಮಸ್ಯೆ ಇವತ್ತು ನಿನ್ನೆಯದಲ್ಲ. ದಶಕಗಳಿಂದಲೂ ಈ ಸಮಸ್ಯೆ ಜೀವಂತವಾಗಿದೆ. ಅರಣ್ಯ ಭೂಮಿಯ ಗಡಿಯನ್ನು ಗುರುತಿಸದೇ ಇರುವುದರಿಂದ ಅರಣ್ಯದಂಚಿನಲ್ಲಿ ಕೃಷಿ ಮಾಡುವ ರೈತರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.

ಆರ್‌ಟಿಸಿ, ಪೋಡಿ, ಫೌತಿ ಖಾತೆ ಸೇರಿದಂತೆ ಈ ಭಾಗದಲ್ಲಿ ಬೇಸಾಯ ಮಾಡುವ ರೈತರಿಗೆ ಕಂದಾಯ ಇಲಾಖೆ ಸೇವೆಗಳನ್ನು ಒದಗಿಸುವುದು ಕಷ್ಟವಾಗಿದೆ. ರಸ್ತೆ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ನೀಡುವುದೂ ಸಹ ಸವಾಲಿನ ಕೆಲಸವಾಗಿದೆ.

ಇದನ್ನೂ ಓದಿ: karnataka Heat Wave : ರಾಜ್ಯದ ಈ ಜಿಲ್ಲೆಗಳಲ್ಲಿ ಸುರಿಯಲಿದೆ ಬೆಂಕಿ ಬಿಸಿಲು | ಅಧಿಕ ಉಷ್ಣಾಂಶದ ಜಿಲ್ಲೆಗಳ ಪಟ್ಟಿ ಬಿಡುಗಡೆ

ಅಧಿವೇಶನದಲ್ಲಿ ಜಂಟಿ ಸರ್ವೇ ಭರವಸೆ

ಅರಣ್ಯದಂಚಿನ ರೈತರ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ್ದ ರಾಜ್ಯ ಸರ್ಕಾರ ಸಮಸ್ಯೆಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕಳೆದ ಚಳಿಗಾಲದ ಅಧಿವೇಶನದಲ್ಲೇ ಭರವಸೆ ನೀಡಿತ್ತು. ಆ ಪ್ರಕಾರ ಕಳೆದ ಫೆಬ್ರವರಿ 16ರಂದು ಸರಕಾರ ಅಧಿಕೃತವಾಗಿ ಅಧಿಸೂಚನೆ ಹೊರಡಿಸಿದ್ದು; ಅನೇಕ ವರ್ಷಗಳ ನಂತರ ಅರಣ್ಯ ಭೂಮಿಯ ಜಂಟಿ ಸರ್ವೆಗೆ ನಾಂದಿ ಹಾಡಿದೆ.

ಈ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಸರ್ವೆ ಕೆಲಸವೂ ಭರದಿಂದ ಸಾಗಿದೆ. ಅಧಿಸೂಚನೆಯಲ್ಲಿ ಸೂಚಿಸಿರುವಂತೆ ಜಿಲ್ಲಾಧಿಕಾರಿಗಳು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಜಂಟಿ ಸರ್ವೆ ಕಾರ್ಯದಲ್ಲಿ ತೊಡಗಿದ್ದಾರೆ. ಕಂದಾಯ ಹಾಗೂ ಅರಣ್ಯ ಇಲಾಖೆ ಜಂಟಿ ಸರ್ವೆ ಮೂಲಕ ನಕ್ಷೆ ಇಲ್ಲದ ಜಮೀನುಗಳಲ್ಲಿ ರೈತರಿಗೆ ಸಾಗುವಳಿ ಚೀಟಿ ನೀಡಲು ಸರ್ಕಾರ ನಿಶ್ಚಯಿಸಿದೆ ಎಂಬ ಮಾಹಿತಿಯನ್ನು ಕಂದಾಯ ಸಚಿವರು ನೀಡಿದ್ದಾರೆ.

ಇದನ್ನೂ ಓದಿ: Bagar Hukum land : ಈ ರೈತರ ಬಗರ್ ಹುಕುಂ ಜಮೀನು ಸರಕಾರದ ಸ್ವಾಧೀನ | ಸುತ್ತೋಲೆ ಹೊರಡಿಸಿದ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ

ಯಾವೆಲ್ಲ ಜಿಲ್ಲೆಗಳಲ್ಲಿ ಸರ್ವೇ ಕಾರ್ಯ?

ಕಳೆದ ಎರಡು ತಿಂಗಳುಗಳಿ೦ದ ಜಂಟಿ ಸರ್ವೆ ಕೆಲಸ ಪ್ರಗತಿಯಲ್ಲಿದೆ ಎಂದು ಹೇಳಿರುವ ಕಂದಾಯ ಸಚಿವರು ಈಗಾಗಲೇ ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸರ್ಕಾರಿ ಭೂ ಮಾಪಕರು (ಸರ್ವೆಯರ್) ಹಾಗೂ ಪರವಾನಗಿ ಹೊಂದಿರುವ ಭೂ ಮಾಪಕರ ಸಹಾಯದಿಂದ ಸರ್ವೆ ಕೆಲಸ ಆರಂಭಿಸಲಾಗಿದೆ. ಪರಿಭಾವಿತ ಅರಣ್ಯ ಪ್ರದೇಶ ಈ ಕೆಳಗಿನಂತಿದೆ:

  • ಚಾಮರಾಜನಗರ ಜಿಲ್ಲೆ 28,45,964 ಎಕರೆ
  • ಚಿಕ್ಕಬಳ್ಳಾಪುರ ಜಿಲ್ಲೆ 47,809.31 ಎಕರೆ
  • ದಕ್ಷಿಣ ಕನ್ನಡ ಜಿಲ್ಲೆ 21983 ಎಕರೆ
  • ಚಿಕ್ಕಮಗಳೂರು ಜಿಲ್ಲೆ 130927 ಎಕರೆ

ಅರಣ್ಯ ಹಾಗೂ ಕಂದಾಯ ಭೂಮಿ ಗುರುತಿಸುವ ಸಂಬ೦ಧ ಹೆಚ್ಚು ಸಮಸ್ಯೆಗಳಿರುವ ಚಿಕ್ಕಮಗಳೂರು, ದಕ್ಷಿಣ ಕನ್ನಡ ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಬೇರೆ ಬೇರೆ ಜಿಲ್ಲೆಗಳಿಂದ ಆದ್ಯತೆ ಮೇಲೆ ಭೂ ಮಾಪಕರನ್ನು ತುರ್ತು ನಿಯೋಜನೆಗೊಳಿಸಿ ಜಂಟಿ ಸರ್ವೆ ಕೆಲಸಕ್ಕೆ ವೇಗ ನೀಡಲಾಗಿದೆ.

ಪ್ರತೀ ಜಿಲ್ಲೆಯ ವಿಸ್ತೀರ್ಣವನ್ನು ಅಳೆಯುವ ಸಲುವಾಗಿ ಡ್ರೋನ್ ಸರ್ವೆಗೆ ಈಗಾಗಲೇ ಚಾಲನೆ ನೀಡಲಾಗಿದೆ. ಡ್ರೋನ್ ಸರ್ವೆ ಮೂಲಕವೂ ಜಿಲ್ಲಾ ವ್ಯಾಪ್ತಿಯಲ್ಲಿ ಕಂದಾಯ ಭೂಮಿ ವಿಸ್ತೀರ್ಣದ ಪ್ರಮಾಣ ಹಾಗೂ ಅರಣ್ಯ ಪ್ರದೇಶ ವಿಸ್ತೀರ್ಣದ ನಿಖರ ಪ್ರಮಾಣ ಎಷ್ಟು? ಎಂಬ ಮಾಹಿತಿಯನ್ನು ಗುರುತಿಸುವ ಕೆಲಸ ಚಾಲ್ತಿಯಲ್ಲಿದೆ ಎಂದು ಕಂದಾಯ ಸಚಿವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Karnataka PDO Recruitment 2024 : ಕರ್ನಾಟಕ ಗ್ರಾಮ ಪಂಚಾಯತಿ PDO ಹುದ್ದೆಗಳಿಗೆ ಅರ್ಜಿ ಆಹ್ವಾನ

WhatsApp Group Join Now
Telegram Group Join Now

Related Posts

error: Content is protected !!