Gram panchayat employees strike RDPR Protest : ಗ್ರಾಮ ಪಂಚಾಯತಿ ನೌಕರರು, ಸಿಬ್ಬಂದಿ ವರ್ಗ ಮತ್ತೆ ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನೆಗೆ ಸನ್ನದ್ಧವಾಗಿದೆ. ಇದೇ ಸೆಪ್ಟೆಂಬರ್ 30ರೊಳಗೆ ತಮ್ಮ ಬೇಡಿಕೆ ಈಡೇರಿಸದಿದ್ದರೆ ಅಕ್ಟೋಬರ್ 4ರಿಂದ ರಾಜ್ಯಾದ್ಯಂತ ಗ್ರಾಮ ಪಂಚಾಯತಿ ಸೇವೆಗಳು ಸಂಪೂರ್ಣ ಬಂದ್ ಆಗಲಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (Rural Development and Panchayat Raj Department- RDPR) ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಒಕ್ಕೂಟವು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಹೋರಾಟಕ್ಕೆ ನಿರ್ಧರಿಸಿದೆ. ಇದರಿಂದ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯತ್ ಸೇವೆಗಳಲ್ಲಿ ಭಾರೀ ವ್ಯತ್ಯಯವಾಗುವ ಸಾಧ್ಯತೆ ಇದೆ.
ಪ್ರತಿಭಟನೆಯಲ್ಲಿ ಯಾರೆಲ್ಲ ಭಾಗಿಯಾಗಲಿದ್ದಾರೆ?
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (RDPR) ಇಲಾಖೆಯ ಸುಮಾರು 11 ವೃಂದಗಳು ಸೇರಿ ಈ ಬೃಹತ್ ಹೋರಾಟಕ್ಕೆ ಸನ್ನದ್ಧವಾಗಿವೆ. ಹೋರಾಟದಲ್ಲಿ ಭಾಗಿಯಾಗಲಿರುವ ನೌಕರರು, ಸಿಬ್ಬಂದಿ ಹಾಗೂ ಜನಪ್ರತಿನಿಧಿಗಳ ವಿವರ ಈ ಕೆಳಗಿನಂತಿದೆ:
- ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು (PDO)
- ಪಂಚಾಯಿತಿ ಕಾರ್ಯದರ್ಶಿಗಳು
- ದ್ವಿತೀಯ ದರ್ಜೆ ಲೆಕ್ಕ ಸಹಾಯಕರು
- ಡೇಟಾ ಎಂಟ್ರಿ ಆಪರೇಟರ್
- ಕರ ವಸೂಲಿಗಾರರು
- ಗ್ರಾ.ಪಂ ಜವಾನರು
- ಗ್ರಾ.ಪಂ ವ್ಯಾಪ್ತಿ ಸ್ವಚ್ಛತಾಗಾರರು
- ಗ್ರಾಮ ಪಂಚಾಯ್ತಿ ಅಧ್ಯಕ್ಷರು
- ಉಪಾಧ್ಯಕ್ಷರು ಹಾಗೂ ಸದಸ್ಯರು
ನೌಕರರ ಬೇಡಿಕೆಗಳೇನು?
ಪಿಡಿಒ ವರ್ಗಾವಣೆ ನಿಯಮ ಬದಲಾವಣೆ : ಏಳು ವರ್ಷ ಪೂರೈಸಿ ಕರ್ತವ್ಯ ನಿರ್ವಹಿಸುತ್ತಿರುವ ಪಿಡಿಒ ಗಳನ್ನು ಬೇರೆ ತಾಲ್ಲೂಕಿಗೆ ವರ್ಗಾವಣೆ ಮಾಡುವ ನಿಯಮವನ್ನು ಕೈಬಿಡಬೇಕು. ಸಾರ್ವಜನಿಕ ಹಿತಾಸಕ್ತಿ ಗಮನಿಸದೇ ಪಿಡಿಒಗಳನ್ನು ವರ್ಗಾವಣೆ ಮಾಡಬಾರದು.
ಪಿಡಿಒ ಹುದ್ದೆ ಗೆಜೆಟೆಡ್ ‘ಬಿ’ ದರ್ಜೆಗೆ : ರಾಜ್ಯದ ಎಲ್ಲಾ ಪಿಡಿಒ ಹುದ್ದೆಯನ್ನು ಗೆಜೆಟೆಡ್ ಗ್ರೂಪ್ ‘ಬಿ’ ದರ್ಜೆಗೆ ಉನ್ನತಿಕರಿಸಬೇಕು ಹಾಗೂ ಪಿಡಿಒಗಳ ಜೇಷ್ಠತಾ ಪಟ್ಟಿ ಹಾಗೂ ಬಡ್ತಿಯಲ್ಲಿನ ಸಮಸ್ಯೆಗಳನ್ನು ತುರ್ತಾಗಿ ಪರಿಹರಿಸಬೇಕು.
ನರೇಗಾ, ಕೂಸಿನ ಮನೆ ಕ್ರಮ : ನರೇಗಾ (MGNREGA) ಯೋಜನೆಯ ಅನುಷ್ಠಾನಗೊಳಿಸುವ ಬಗ್ಗೆ ಗುರಿ ನಿಗದಿಯನ್ನು ಕೈಬಿಡಬೇಕು. ಅವಶ್ಯಕತೆ ಇಲ್ಲದ ಕಡೆಗಳಲ್ಲಿ ‘ಕೂಸಿನ ಮನೆ’ ಮುಂದುವರಿಸುವ ಬಗ್ಗೆ ಗ್ರಾಮ ಪಂಚಾಯತಿ ಅಭಿಪ್ರಾಯ ಪಡೆದು ಕ್ರಮ ಕೈಗೊಳ್ಳಬೇಕು.
ಗ್ರಾ.ಪಂ ಗಳಿಗೆ ನೌಕರರ ನೇಮಕ : ಗ್ರಾಮ ಪಂಚಾಯಿತಿಗೆ ಅಗತ್ಯವಿರುವ ಕಾರ್ಯದರ್ಶಿಗಳು, ಲೆಕ್ಕ ಸಹಾಯಕರು ಹಾಗೂ ಅಗತ್ಯವಿದ್ದಷ್ಟು ಗ್ರಾಮ ಪಂಚಾಯತ್ ಸಿಬ್ಬಂದಿಗಳನ್ನು ನೇಮಕ ಮಾಡಬೇಕು. ಗ್ರಾಮ ಪಂಚಾಯತ್ ಸಿಬ್ಬಂದಿ ಮಾದರಿಯನ್ನು ಪರಿಷ್ಕರಿಸಿ ಪ್ರತಿಯೊಂದು ವಿಷಯಕ್ಕೂ ಒಬ್ಬರು ವಿಷಯ ನಿರ್ವಾಹಕರನ್ನು ನೇಮಿಸಿ, ತಾಂತ್ರಿಕ ಸಿಬ್ಬಂದಿಯನ್ನು ಒದಗಿಸಬೇಕು.
ಏಕರೂಪದ ಅಡಿಟ್ ಪದ್ಧತಿ ಜಾರಿ : ಕುಂದು ಕೊರತೆ ಪ್ರಾಧಿಕಾರವನ್ನು ಪೊಲೀಸ್ ಇಲಾಖೆ ಮಾದರಿಯಲ್ಲಿ ಸದೃಢಗೊಳಿಸಬೇಕು. ತಜ್ಞರ ಸಮಿತಿ ನೇಮಿಸುವುದು ಹಾಗೂ ಏಕರೂಪದ ಅಡಿಟ್ ಪದ್ಧತಿ ಜಾರಿಗೊಳಿಸಬೇಕು. ಸೇವಾ ವಿಷಯಗಳನ್ನು ಸಕಾಲ ವ್ಯಾಪ್ತಿಗೆ ತರುವುದು ಹಾಗೂ ಎಲ್ಲ ತಂತ್ರಾಂಶಗಳಿಗೆ ಏಕರೂಪದ ಸಹಾಯವಾಣಿ ವ್ಯವಸ್ಥೆ ಜಾರಿಗೊಳಿಸಬೇಕು.
ಇದನ್ನೂ ಓದಿ: ಕೇಂದ್ರ ಸರ್ಕಾರದಿಂದ 15 ಸಾವಿರ ಮೌಲ್ಯದ ಉಚಿತ ಹೊಲಿಗೆ ಯಂತ್ರ ನೀಡಲು ಅರ್ಜಿ ಆಹ್ವಾನ PM Vishwakarma Scheme free tool kit