ಉದ್ಯೋಗ

Gram Panchayat Recruitment 2024 : ಪಿಯುಸಿ ಪಾಸಾದವರಿಂದ ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆ ಉಚಿತ

WhatsApp Group Join Now
Telegram Group Join Now

Gram Panchayat Recruitment 2024 : ಪಿಯುಸಿ ಪಾಸಾದ ಅಭ್ಯರ್ಥಿಗಳಿಂದ ವಿವಿಧ ಜಿಲ್ಲೆಯ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಬೇಕಾಗಿರುವ ಸಂಪೂರ್ಣ ಮಾಹಿತಿ ಇಲ್ಲಿದೆ..

ವಿವಿಧ ಜಿಲ್ಲೆಗಳ ಗ್ರಾಮ ಪಂಚಾಯಿತಿಯಲ್ಲಿ ಅನೇಕ ಹುದ್ದೆಗಳು ಖಾಲಿ ಇದ್ದು, ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಕೃತ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಸಲು ಬೇಕಾಗಿರುವ ಅಧಿಕೃತ ಜಾಲತಾಣ, ಅಧಿಕೃತ ಅಧಿಸೂಚನೆ, ವೇತನ ಮತ್ತು ವಯೋಮಿತಿಗಳ ವಿವರ, ಪ್ರಮುಖ ದಿನಾಂಕಗಳು, ಸಹಾಯವಾಣಿ ಮತ್ತು ವಿದ್ಯಾರ್ಹತೆಯ ಸಂಪೂರ್ಣ ಮಾಹಿತಿ ಈ ಕೆಳಗಿನ ಲೇಖನದಲ್ಲಿದೆ..

  • ಹುದ್ದೆಗಳ ಹೆಸರು : ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮೇಲ್ವಿಚಾರಕರ ಹುದ್ದೆಗಳು
  • ಒಟ್ಟು ಖಾಲಿ ಹುದ್ದೆಗಳು : 54 ಹುದ್ದೆಗಳು
  • ಅರ್ಜಿ ಸಲ್ಲಿಕೆ : ಆಫ್‌ಲೈನ್
  • ಉದ್ಯೋಗ ಸ್ಥಳ : ತುಮಕೂರು ಮತ್ತು ಕೊಪ್ಪಳ

ಶೈಕ್ಷಣಿಕ ವಿದ್ಯಾರ್ಹತೆ ಏನು?

ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಈ ಕೆಳಗಿನ ಅರ್ಹತೆಯನ್ನು ಹೊಂದಿರಬೇಕು.

  • ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿ೦ದ PUC ಪಾಸಾಗಿರಬೇಕು.
  • ಸರ್ಟಿಫಿಕೇಶನ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಮುಗಿಸಿ, ಮಾನ್ಯವಾದ ಪ್ರಮಾಣ ಪತ್ರ ಹೊಂದಿರಬೇಕು.
  • ಕನಿಷ್ಠ ಮೂರು ತಿಂಗಳ ಕಂಪ್ಯೂಟರ್ ಕೋರ್ಸ್ ಪಡೆದು ಉತ್ತೀರ್ಣರಾಗಿರಬೇಕು.

ವಯೋಮಿತಿ ವಿವರ

ಅಭ್ಯರ್ಥಿಗಳ ವಯಸ್ಸು ನಿಗದಿತ ದಿನಾಂಕಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷದ ಮೀರಿರಬಾರದು. ಮೀಸಲಾತಿ ಬಯಸುವ ಅಭ್ಯರ್ಥಿಗಳಿಗೆ ನಿಯಮಗಳ ಅನುಸಾರ ವಯೋಮಿತಿ ಸಡಿಲಿಕೆ ನೀಡಲಾಗುವುದು ನೀಡಲಾಗುವುದು.

ವಾಸ ಸ್ಥಳದ ವಿವರಗಳು

ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸಂಬ೦ಧಪಟ್ಟ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ನಿವಾಸಿಯಾಗಿರಬೇಕು.

ಮಾಸಿಕ ಸಂಬಳ ಎಷ್ಟಿರುತ್ತದೆ?

ಗ್ರಂಥಾಲಯ ಮೇಲ್ವಿಚಾರಕರಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 15,197 ರೂಪಾಯಿ ಸಂಬಳದ ಜೊತೆಗೆ ತುಟ್ಟಿ ಭತ್ಯೆಯನ್ನು ನೀಡಲಾಗುವುದು.

ಆಯ್ಕೆ ಮಾಡಿ ಕೊಳ್ಳುವ ವಿಧಾನ

ಹುದ್ದೆಗಳಿಗೆ ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಲಿಸ್ಟ್’ನಲ್ಲಿ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗುವುದು ನಂತರ ದಾಖಲೆಗಳ ಪರಿಶೀಲನೆ ಮತ್ತು ಸಂದರ್ಶನದ ಮುಖಾಂತರ ಅಭ್ಯರ್ಥಿಗಳನ್ನು ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾಗುವುದು.

ತುಮಕೂರು ಜಿಲ್ಲೆ ಹುದ್ದೆಗಳ ವಿವರ

ತುಮಕೂರು ಜಿಲ್ಲೆಯಲ್ಲಿ ಒಟ್ಟು 33 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಈ ಕೆಳಗಿನ ವೆಬ್‌ಸೈಟ್’ಗೆ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಅಂಚೆ ಮುಖಾಂತರ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ. ಉಚಿತವಾಗಿ ಅರ್ಜಿ ಸಲ್ಲಿಸಬಹುದು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ, ಪಾವಗಡ, ಶಿರಾ, ಕುಣಿಗಲ್, ಮಧುಗಿರಿ, ತುಮಕೂರು, ಗುಬ್ಬಿ, ಕೊರಟಗೆರೆ, ತುರುವೆಕೆರೆ ತಾಲ್ಲೂಕುಗಳ ವಿವಿಧ ಗ್ರಾಮ ಪಂವಾಯತಿ ವ್ಯಾಪ್ತಿಗಳಲ್ಲಿ ಈ ಹುದ್ದೆಗಳು ಖಾಲಿ ಇವೆ. ದಿನಾಂಕ: 24-04-2024ರ ಒಳಗೆ ಈ ಕೆಳಕಂಡ ವಿಳಾಸಕ್ಕೆ ಅಂಚೆ ಮೂಲಕ ಅರ್ಜಿ ಸಲ್ಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ವಿಳಾಸ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಜಿಲ್ಲಾ ಪಂಚಾಯತ್ ಕಾರ್ಯಾಲಯ ತುಮಕೂರು ತುಮಕೂರು (ಆಡಳಿತ ಶಾಖೆ)

ಕೊಪ್ಪಳ ಜಿಲ್ಲೆ ಹುದ್ದೆಗಳ ವಿವರ

ಕೊಪ್ಪಳ ಜಿಲ್ಲೆಯಲ್ಲಿ ಒಟ್ಟು 21 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕೊಪ್ಪಳ ಜಿಲ್ಲಾ ಪಂಚಾಯತ್ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು, ಬೇಕಾಗಿರುವ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ ಅಂಚೆ ಮುಖಾಂತರ ಅರ್ಜಿ ಸಲ್ಲಿಸಿ.

ಕೊಪ್ಪಳ ಜಿಲ್ಲೆಯ ಕುಷ್ಟಗಿ, ಕಾರಟಗಿ, ಕೊಪ್ಪಳ, ಗಂಗಾವತಿ, ಕನಕಗಿರಿ, ಯಲಬುರ್ಗ, ಕುಕನೂರು ತಾಲ್ಲೂಕುಗಳ ವಿವಿಧ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಈ ಹುದ್ದೆಗಳು ಖಾಲಿ ಇವೆ. ಅರ್ಜಿ ಸಲ್ಲಿಕೆಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಆಸಕ್ತ ಅಭ್ಯರ್ಥಿಗಳು ದಿನಾಂಕ: 03-04-2024ರ ಒಳಗಾಗಿ ಈ ಕೆಳಕಂಡ ಅಂಚೆ ವಿಳಾಸಕ್ಕೆ ತಲುಪವಂತೆ ಅಥವಾ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ವಿಳಾಸ : ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಉಪ ಕಾರ್ಯದರ್ಶಿಗಳು ಜಿಲ್ಲಾ ಪಂಚಾಯತ್, ಜಿಲ್ಲಾ ಆಡಳಿತ ಭವನ, ಹೊಸಪೇಟೆ ರೋಡ್ ಕೊಪ್ಪಳ

ಇವುಗಳನ್ನೂ ಓದಿ:

SSC Sub Inspector Recruitment 2024 : 4,000+ ಪೊಲೀಸ್ ಸಬ್ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಅರ್ಜಿ | ಸಂಬಳ ₹1,12,400 ರೂಪಾಯಿ | ಈಗಲೇ ಅರ್ಜಿ ಸಲ್ಲಿಸಿ…

Tumakuru district court recruitment 2024 : SSLC ಪಾಸಾದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಹೊಸ ನೇಮಕಾತಿ | ಸಂಬಳ ₹52,650

Karnataka PDO Recruitment 2024 : ಕರ್ನಾಟಕ ಗ್ರಾಮ ಪಂಚಾಯತಿ PDO ಹುದ್ದೆಗಳಿಗೆ ಅರ್ಜಿ ಆಹ್ವಾನ

Karnataka Apex Bank Recruitment 2024 : ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಖಾಯಂ ಹುದ್ದೆಗಳಿಗೆ ಅರ್ಜಿ ಆಹ್ವಾನ | ಸಂಬಳ ₹87,125 ರೂಪಾಯಿ

NWKRTC Driver recruitment 2024 : ಪಿಯುಸಿ ಪಾಸಾದವರಿಗೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಚಾಲಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

WhatsApp Group Join Now
Telegram Group Join Now

Related Posts

error: Content is protected !!