ಉದ್ಯೋಗ

Home Guards Recruitment 2024 : ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ಹೋಮ್ ಗಾರ್ಡ್ ಹುದ್ದೆಗಳು | ಪುರುಷರು ಮತ್ತು ಮಹಿಳೆಯರಿಂದ ಅರ್ಜಿ ಆಹ್ವಾನ

WhatsApp Group Join Now
Telegram Group Join Now

Home Guards Recruitment 2024 : ಒಟ್ಟು 126 ಸ್ವಯಂ ಸೇವಕ ಗೃಹರಕ್ಷಕ, ಗೃಹರಕ್ಷಕಿಯರ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಯುವಕ, ಯುವತಿಯರು ಇದೇ ಫೆಬ್ರವರಿ 27ರ ಒಳಗೆ ಆಫ್‌ಲೈನ್ ಮೂಲಕ ಅರ್ಜಿ ಆಲ್ಲಿಸುವ ಮೂಲಕ ಈ ಅವಕಾಶ ಬಳಸಿಕೊಳ್ಳಬಹುದಾಗಿದೆ ಎಂದು ಯಾದಗಿರಿ ಜಿಲ್ಲಾ ಗೃಹರಕ್ಷಕ ದಳದ ಆಯ್ಕೆ ಸಮಿತಿ ಸಮಾದೇಷ್ಟರು ಹಾಗೂ ಸದಸ್ಯ ಕಾರ್ಯದರ್ಶಿ ಅರುಣ ಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Home Guards ನೇಮಕಾತಿ ಕುರಿತ ಸಂಕ್ಷಿಪ್ತ ವಿವರ

 • ನೇಮಕಾತಿ ಸಂಸ್ಥೆ : ಗೃಹರಕ್ಷಕ ದಳ, ಯಾದಗಿರಿ
 • ಹುದ್ದೆಗಳ ಹೆಸರು : ಗೃಹರಕ್ಷಕ/ ಗೃಹರಕ್ಷಕಿ
 • ಗೃಹರಕ್ಷಕರು : 77 ಹುದ್ದೆಗಳು
 • ಗೃಹರಕ್ಷಕಿಯರು : 49 ಹುದ್ದೆಗಳು
 • ಒಟ್ಟು ಖಾಲಿ ಹುದ್ದೆಗಳು : 126 ಹುದ್ದೆಗಳು
 • ಅರ್ಜಿ ಸಲ್ಲಿಕೆ : ಆಫ್‌ಲೈನ್ ಮುಖಾಂತರ
 • ಉದ್ಯೋಗ ಸ್ಥಳ : ಯಾದಗಿರಿ ಜಿಲ್ಲೆಯ ವಿವಿಧ ತಾಲ್ಲೂಕುಗಳು

ಇದನ್ನೂ ಓದಿ: FDA SDA Recruitment 2024 : ಪ್ರಥಮ ಮತ್ತು ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿ | ಖಾಲಿ ಇರುವ 300 ಹುದ್ದೆಗಳ ನೇಮಕಾತಿಗೆ ಜಿಲ್ಲಾವಾರು ಪಟ್ಟಿ ಬಿಡುಗಡೆ

ಯಾರೆಲ್ಲ ಅರ್ಜಿ ಸಲ್ಲಿಸಬಹುದು?

 • ಎಸ್ಸೆಸ್ಸೆಲ್ಸಿ ಅಥವಾ 10ನೇ ತರಗತಿ ಪಾಸಾಗಿರುವ ಅರ್ಹ ಪುರುಷರು ಹಾಗೂ ಮಹಿಳೆಯರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. 19 ರಿಂದ 50 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
 • ಅಭ್ಯರ್ಥಿಗಳು ನಿಗದಿಪಡಿಸಿದ ದೈಹಿಕ ಅರ್ಹತೆಯನ್ನು ಹೊಂದಿರಬೇಕು. ಜಿಲ್ಲೆಯಲ್ಲಿಯೇ ವಾಸಿಸುತ್ತಿರಬೇಕು.
 • ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ರಾಜಕೀಯ ಪಕ್ಷ-ಸಂಘ ಸಂಸ್ಥೆಗಳ ಸದಸ್ಯರು, ಕಾರ್ಯಕರ್ತರು ಆಗಿರಬಾರದು ಮತ್ತು ಯಾವುದೇ ಪೊಲೀಸ್ ಪ್ರಕರಣದಲ್ಲಿ ಭಾಗಿಯಾಗಿರಬಾರದು.

ಉದ್ಯೋಗ ಸ್ಥಳ

ಆಯ್ಕೆಯಾದ ಅಭ್ಯರ್ಥಿಗಳು ಯಾದಗಿರಿ ಜಿಲ್ಲೆಯ ಯಾದಗಿರಿ, ಶಹಾಪುರ, ಸುರಪುರ, ಕೆಂಬಾವಿ, ಹುಣಸಗಿ, ಗುರುಮಠಕಲ್, ಸೈದಾಪುರ ತಾಲ್ಲೂಕು ಹಾಗೂ ಉಪ ಘಟಕಗಳಲ್ಲಿ ಕರ್ತವ್ಯ ನಿರ್ವಹಿಸಬೇಕು.

ಇದನ್ನೂ ಓದಿ: Rain forecast : ಬರಗಾಲ ಮುಕ್ತಾಯ ಜೂನ್’ನಿಂದ ಉತ್ತಮ ಮುಂಗಾರು | ಈ ವರ್ಷದ ಮಳೆ ಭರವಸೆ ನೀಡಿದ ಹವಾಮಾನ ಇಲಾಖೆ

ಗೃಹರಕ್ಷಕ \ ರಕ್ಷಕಿಯರ ಕರ್ತವ್ಯವೇನು?

ಈ ಹುದ್ದೆಗಳಿಗೆ ನೇಮಕವಾದ ಅಭ್ಯರ್ಥಿಗಳಿಗೆ ಮೊದಲು ಸಾಮಾನ್ಯ ತರಬೇತಿ ನೀಡಲಾಗುತ್ತದೆ. ಅನಂತರ ನೆರೆ ರಕ್ಷಣೆ, ಅಗ್ನಿಶಮನ, ಪ್ರಥಮ ಚಿಕಿತ್ಸೆ, ರೈಫಲ್, ಸಂಚಾರ ನಿಯಂತ್ರಣ, ಶಸ್ತ್ರಾಸ್ತ್ರ ಸೇರಿದಂತೆ ಮೊದಲಾದ ರಕ್ಷಣಾ ತರಬೇತಿ ನೀಡಿ ತುರ್ತು ಸಂದರ್ಭಗಳಲ್ಲಿ ಅವರನ್ನು ಸೇವೆಗೆ ಬಳಸಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಕೆ ಪ್ರಮುಖ ದಿನಾಂಕಗಳು

 • ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 17-02-2024
 • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 27-02-2024

ಅರ್ಜಿ ಸಲ್ಲಿಕೆ ಹೇಗೆ?

ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕವಿರುವುದಿಲ್ಲ. ಯಾದಗಿರಿಯ ಜಿಲ್ಲಾ ಸಮಾದೇಷ್ಟರು ಗೃಹರಕ್ಷಕ ದಳ ಕಚೇರಿಗೆ ಭೇಟಿ ನೀಡಿ ಉಚಿತವಾಗಿ ಅರ್ಜಿ ನಮೂನೆ ಪಡೆದು, ಸೂಕ್ತ ದಾಖಲಾತಿಗಳೊಂದಿಗೆ ಉಚಿತವಾಗಿ ಅರ್ಜಿ ಸಲ್ಲಿಕೆ ಮಾಡಬೇಕು. ಯಾದಗಿರಿ ಜಿಲ್ಲಾ ಗೃಹರಕ್ಷಕ ದಳ ಕಚೇರಿ ಜಿಲ್ಲಾ ಬೋಧಕರ 89704 28778, 89715 12785 ಸಂಪರ್ಕಿಸಹುದಾಗಿದೆ.

ಇದನ್ನೂ ಓದಿ: PM Vishwakarma Scheme free tool kit : ಕೇಂದ್ರ ಸರ್ಕಾರದಿಂದ 15 ಸಾವಿರ ಮೌಲ್ಯದ ಉಚಿತ ಹೊಲಿಗೆ ಯಂತ್ರ ನೀಡಲು ಅರ್ಜಿ ಆಹ್ವಾನ

Bescom Solar Rooftop Scheme : ಮನೆಮನೆಗೂ ಸೋಲಾರ್ ವಿದ್ಯುತ್ | ಬೆಸ್ಕಾಂ ಸೂಪರ್ ಸ್ಕೀಮ್ | ಕೂತಲ್ಲೇ ಗಳಿಸಿ ಭರ್ಜರಿ ಆದಾಯ

WhatsApp Group Join Now
Telegram Group Join Now

Related Posts

error: Content is protected !!