increase in milk incentive- ಹಾಲು ಉತ್ಪಾದಕರಿಗೆ ಹೆಚ್ಚುವರಿ 2 ರೂಪಾಯಿ ಪ್ರೋತ್ಸಾಹ ಧನ
ಹೈನುಗಾರರನ್ನು ಪ್ರೋತ್ಸಾಹಿಸಲು ಹಾಲು ಒಕ್ಕೂಟಗಳ ತೀರ್ಮಾನ

ಬಿಸಿಲಿನ ಬೇಗೆಯಿಂದ ತತ್ತರಿಸಿರುವ ಹೈನೋದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ 2 ರೂಪಾಯಿ ಹೆಚ್ಚವರಿ ಪ್ರೋತ್ಸಾಹಧನ (Milk Incentive) ನೀಡ ಹಾಲು ಒಕ್ಕೂಟಗಳು ಮುಂದಾಗಿವೆ…
ದಟ್ಟ ಬೇಸಿಗೆ ಕಾಲ ಪ್ರಾರಂಭವಾಗಿದ್ದು; ಹೈನು ರಾಸುಗಳಲ್ಲಿ ಹಾಲಿನ ಇಳುವರಿ ಕಡಿಮೆಯಾಗುತ್ತಿದೆ. ಬಿಸಿಲಿನ ಭೇಗೆಯಿಂದ ಹಾಲು ಉತ್ಪಾದನಾ ವೆಚ್ಚ ಅಧಿಕವಾಗುತ್ತಿದೆ. ರಾಜ್ಯದಲ್ಲಿ ಹಾಲು ಶೇಖರಣೆ ಮತ್ತು ಗುಣಮಟ್ಟ ಕೂಡ ಕಡಿಮೆಯಾಗುತ್ತಿದೆ.
ಹೈನುಗಾರರನ್ನು (Milk producers) ಉತ್ತೇಜಿಸುವ ಹಿನ್ನೆಲೆಯಲ್ಲಿ ಹಾಲು ಉತ್ಪಾದಕರ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿ ಇರಿಸಿಕೊಂಡು ಹಾಲು ಶೇಖರಣೆ ಮತ್ತು ಗುಣಮಟ್ಟವನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರೋತ್ಸಾಹ ಧನವನ್ನು ಹೆಚ್ಚಿಸಲಾಗಿದೆ ಎಂದು ಸಚಿವರಾದ ಬೈರತಿ ಸುರೇಶ ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ಇನ್ಮುಂದೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಎಲ್ಲಾ ಆಸ್ತಿಗಳಿಗೂ ಸಿಗಲಿದೆ ಇ-ಸ್ವತ್ತು
ಈ ಪ್ರೋತ್ಸಾಹಧನ ಯಾರಿಗೆಲ್ಲ ಅನ್ವಯವಾಗಲಿದೆ?
ಸಚಿವ ಬೈರತಿ ಸುರೇಶ್ ಅವರು ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಹಾಲು ಉತ್ಪಾದಕರ ಶ್ರೇಯೋಭಿವೃದ್ಧಿಗಾಗಿ ಕೋಲಾರ ಜಿಲ್ಲಾ ಹಾಲು ಒಕ್ಕೂಟವು (Kolar Co-operative Milk Union) ಪ್ರೋತ್ಸಾಹ ಧನವನ್ನು ಹೆಚ್ಚಿಸುವ ತೀರ್ಮಾನ ತೆಗೆದುಕೊಂಡಿದೆ. ಇದೇ ಮಾರ್ಚ್ 20 ರಿಂದ 2 ರೂ. ಹೆಚ್ಚುವರಿ ಪ್ರೋತ್ಸಾಹ ಧನವನ್ನು ನೀಡುತ್ತಿದ್ದು; ಜಿಲ್ಲೆಯ ಸುಮಾರು 45,000 ಕುಟುಂಬಗಳಿಗೆ ಸಹಾಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಮೊದಲಿದ್ದ ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟವು (Kochimul) ಕಳೆದ ಜನವರಿ 1ರಿಂದ ವಿಭಜನೆಯಾಗಿದ್ದು; ಇದೀಗ ಕೋಲಾರ ಜಿಲ್ಲಾ ಸಹಕಾರ ಹಾಲು ಒಕ್ಕೂಟವು (komul) ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಿದೆ. ಜಿಲ್ಲೆಯಲ್ಲಿ 951 ಹಾಲು ಉತ್ಪಾದಕರ ಸಹಕಾರ ಸಂಘಗಳಿದ್ದು, ಕಳೆದ 3 ತಿಂಗಳಲ್ಲಿ 34 ನೂತನ ಪ್ರಾಥಮಿಕ ಹಾಲು ಉತ್ಪಾದಕರ ಸಹಕಾರ ಸಂಘಗಳನ್ನು ಕೋಲಾರ ಜಿಲ್ಲಾ ಹಾಲು ಒಕ್ಕೂಟದಲ್ಲಿ ಸೇರಿಸಲಾಗಿದೆ.

ಇದನ್ನೂ ಓದಿ: Bagar Hukum-ಬಗರ್‌ಹುಕುಂ ಸರ್ಕಾರಿ ಜಮೀನಿನಲ್ಲಿ ಸಾಗುವಳಿ ಮಾಡುವ ರೈತರಿಗೆ ವಿನಾಯಿತಿ
ಯುಗಾದಿ ಹಬ್ಬಕ್ಕೆ ಸರ್ಕಾರದ ಕೊಡುಗೆ
ರಾಜ್ಯದ ಇತರೆ ಜಿಲ್ಲೆಗಳ ಹಾಲು ಒಕ್ಕೂಟಗಳ ಪ್ರೋತ್ಸಾಹಧನಕ್ಕೆ ಹೋಲಿಸಿದರೆ ಕೋಲಾರ ಜಿಲ್ಲಾ ಹಾಲು ಒಕ್ಕೂಟ 2 ರೂ. ಹೆಚ್ಚಿಗೆ ನೀಡಲಾಗುತ್ತಿದ್ದು, ಅಂದರೆ ಹಾಲು ಉತ್ಪಾದಕರಿಂದ ಪ್ರತಿ ಲೀಟರ್ ಹಾಲನ್ನು ರೂ 33.40 ಪೈಸೆಗಳಿಗೆ ಖರೀದಿಸಲಾಗುತ್ತದೆ. ಇದು ಯುಗಾದಿ ಹಬ್ಬಕ್ಕೆ ನಮ್ಮ ಸರ್ಕಾರ ಹಾಲು ಉತ್ಪಾದಕರಿಗೆ ನೀಡಿದ ಕೊಡುಗೆ ಎಂದು ಸಚಿವರು ಹೇಳಿದ್ದಾರೆ.
ಪ್ರಸ್ತುತ 6.64 ಲಕ್ಷ ಲೀಟರ್ ಹಾಲನ್ನು ಕೋಲಾರ ಜಿಲ್ಲಾ ಹಾಲು ಒಕ್ಕೂಟದಿಂದ ಶೇಖರಣೆಯಾಗುತ್ತಿದ್ದು, 2025-26ನೇ ಸಾಲಿಗೆ 7.50 ಲಕ್ಷ ಲೀಟರ್ ಹಾಲು ಶೇಖರಣೆ ಗುರಿಯನ್ನು ಒಕ್ಕೂಟವು ಹೊಂದಿದೆ ಎಂದು ಕೋಲಾರ ಜಿಲ್ಲಾ ಉಸತುವಾರಿ ಸಚಿವರೂ ಆಗಿರುವ ಸುರೇಶ್ ಅವರು ತಿಳಿಸಿದ್ದಾರೆ.
ಇದನ್ನೂ ಓದಿ: Free horticulture training-ತೋಟಗಾರಿಕೆ ಇಲಾಖೆಯಿಂದ ಉಚಿತ ತರಬೇತಿಗೆ ಅರ್ಜಿ ಆಹ್ವಾನ