Karnataka Animal Husbandry Subsidy Schemes : ಪಶುಪಾಲನಾ ಇಲಾಖೆ ಸಬ್ಸಿಡಿ ಯೋಜನೆಗಳು
ಹೈನುಗಾರಿಕೆ, ಕುರಿ-ಮೇಕೆ ಸಾಕಾಣಿಕೆಯ ಸರ್ಕಾರಿ ಯೋಜನೆಗಳ ಪಟ್ಟಿ ಇಲ್ಲಿದೆ...
ಪಶುಪಾಲನೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹಲವು ಸಬ್ಸಿಡಿ ಯೋಜನೆಗಳನ್ನು ಅನುಷ್ಠಾನಗೊಳಿಸಿವೆ. ಅದರಲ್ಲೂ ರಾಜ್ಯ ಸರ್ಕಾರ ಹೈನುಗಾರಿಕೆ, ಕುರಿ-ಮೇಕೆ ಸಾಕಾಣಿಕೆಗೆ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ.
ಕರ್ನಾಟಕ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ (Animal Husbandry and Veterinary Services Department) ವತಿಯಿಂದ ಪ್ರಸ್ತುತ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆದಾರರಿಗೆ ಈ ಕೆಳಕಂಡ ಯೋಜನೆಗಳು ಜಾರಿಯಲ್ಲಿವೆ:
- ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ
- ನಾಟಿ ಕೋಳಿ ಮರಿಗಳ ವಿತರಣೆ
- ಜಾನುವಾರುಗಳ ಆಕಸ್ಮಿಕ ಸಾವಿಗೆ ಪರಿಹಾರ
- ಕುರಿ-ಮೇಕೆ ಸಾಕಾಣಿದಾರರಿಗೆ ಅನುಗ್ರಹ ಯೋಜನೆ
- ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ
- ಮೇವು ಕತ್ತರಿಸುವ ಯಂತ್ರ ವಿತರಣೆ
- ಮೇವಿನ ಬೀಜ ಕಿರು ಪೊಟ್ಟಣ ವಿತರಣೆ
- ಸಂಚಾರಿ ಪಶು ಚಿಕಿತ್ಸಾ ಘಟಕ
- ರಾಸುಗಳಿಗೆ ಉಚಿತ ಲಸಿಕೆ ಕಾರ್ಯಕ್ರಮ
ಇದನ್ನೂ ಓದಿ: Online Mobile App Loan : ಆನ್ಲೈನ್ ಲೋನ್ ಪಡೆಯುವ ಮುನ್ನ ಈ ವಿಷಯ ತಿಳಿದಿರಿ
ಹಾಲು ಪ್ರೋತ್ಸಾಹಧನ, ಬಡ್ಡಿ ಸಹಾಯಧನ
ಕೆಎಂಎಫ್ ಡೈರಿಗಳಿಗೆ ಹಾಲು ಹಾಕುವ ಹೈನುಗಾರರಿಗೆ ಪ್ರತಿ ಲೀಟರ್’ಗೆ ತಲಾ 5 ರೂಪಾಯಿ ಪ್ರೋತ್ಸಾಹಧನ ನೀಡಲಾಗುತ್ತದೆ. ಜೊತೆಗೆ ಹಸು ಹಾಗೂ ಎಮ್ಮೆಯನ್ನು ಖರೀದಿ ಮಾಡಿ, ಸಕಾಲಕ್ಕೆ ಸಾಲ ತೀರಿಸಿದ ಮಹಿಳೆಯರಿಗೆ ಶೇ.6ರ ಬಡ್ಡಿ ಸಹಾಯಧನ ಕೂಡ ಒದಗಿಸಲಾಗುತ್ತದೆ.
ನಾಟಿ ಕೋಳಿ ಮರಿಗಳ ವಿತರಣೆ
ಗ್ರಾಮೀಣ ಭಾಗದ ಮಹಿಳಾ ಸ್ವ-ಸಹಾಯ ಗುಂಪಿನ ಸದಸ್ಯರಿಗೆ 20 ನಾಟಿ ಕೋಳಿ ಮರಿಗಳನ್ನು ಉಚಿತವಾಗಿ ನೀಡಲಾಗುತ್ತದೆ.
ಜಾನುವಾರುಗಳ ಆಕಸ್ಮಿಕ ಸಾವಿಗೆ ಪರಿಹಾರ
ಆರು ತಿಂಗಳ ಮೇಲ್ಪಟ್ಟ ಹಸು, ಎಮ್ಮೆ, ಎತ್ತು, ಕೋಣ, ಹೋರಿಗಳು ಆಕಸ್ಮಿಕವಾಗಿ ಮರಣ ಹೊಂದಿದರೆ ಗರಿಷ್ಟ 1 ಲಕ್ಷ ರೂಪಾಯಿ ವರೆಗೆ ಪರಿಹಾರ ನೀಡಲಾಗುತ್ತದೆ.
ಕುರಿ-ಮೇಕೆ ಸಾಕಾಣಿದಾರರಿಗೆ ಅನುಗ್ರಹ ಯೋಜನೆ
ಆರು ತಿಂಗಳು ಮೇಲ್ಪಟ್ಟ ಕುರಿ-ಮೇಕೆಗಳು ಆಕಸ್ಮಿಕವಾಗಿ ಮರಣ ಹೊಂದಿದ್ದಲ್ಲಿ 5,000 ರೂಪಾಯಿ ಹಾಗೂ 3 ರಿಂದ 6 ತಿಂಗಳ ಆಡು-ಕುರಿಗಳ ಸಾವಿಗೆ ರೂ 3,500 ರೂಪಾಯಿ ಪರಿಹಾರದ ಸಿಗುತ್ತದೆ.
ಇದನ್ನೂ ಓದಿ: E-Swathu : ಗ್ರಾಮ ಪಂಚಾಯತಿಯಲ್ಲಿ ಆಸ್ತಿ ಇ-ಸ್ವತ್ತು ಮಾಡಿಸುವುದು ಹೇಗೆ?
ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ
‘ಅಮೃತ ಸ್ವಾಭಿಮಾನಿ ಯೋಜನೆ’ಯಡಿ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಸದಸ್ಯರಿಗೆ 20+1 ಕುರಿ-ಮೇಕೆ ಘಟಕಗಳ ಸ್ಥಾಪನೆಗೆ ಪ್ರತಿ ಫÀಲಾನುಭವಿಗೆ 1.75 ಲಕ್ಷ ಆರ್ಥಿಕ ನೆರವು ನೀಡಗುತ್ತದೆ.
ಮೇವು ಕತ್ತರಿಸುವ ಯಂತ್ರ ವಿತರಣೆ
ಶೇ.50ರ ಸಹಾಯಧನದಲ್ಲಿ ಮೇವು ಕತ್ತರಿಸುವ ಯಂತ್ರವನ್ನು (ಚಾಪ್ ಕಟ್ಟರ್) ಅರ್ಹ ಫಲಾನುಭವಿಗಳಿಗೆ ವಿತರಿಸಲಾಗುತ್ತದೆ.
ಮೇವಿನ ಬೀಜ ಕಿರು ಪೊಟ್ಟಣ ವಿತರಣೆ
ಹಾಲು ಉತ್ಪಾದಕರ ಸಹಕಾರ ಸಂಘಗಳ ಮೂಲಕ ಹಾಲು ಉತ್ಪಾದಕರಿಗೆ ಉಚಿತ ಮೇವಿನ ಬೀಜಗಳ ಕಿರು ಪೊಟ್ಟಣ ವಿತರಣೆ ಮಾಡಲಾಗುತ್ತದೆ.
ಸಂಚಾರಿ ಪಶು ಚಿಕಿತ್ಸಾ ಘಟಕ
‘1962’ ಸಹಾಯವಾಣಿ ಕರೆ ಮಾಡಿ ಸಂಚಾರಿ ಪಶು ಚಿಕಿತ್ಸಾ ವಾಹನಗಳ ಮೂಲಕ ಮನೆ ಬಾಗಿಲಲ್ಲೇ ಜಾನುವಾರುಗಳಿಗೆ ತುರ್ತು ಪಶುವೈದ್ಯಕೀಯ ಸೇವೆ ಪಡೆಯಬಹುದಾಗಿದೆ.
ಇದನ್ನೂ ಓದಿ: Horticulture Subsidy Schemes : ತೋಟಗಾರಿಕೆ ಇಲಾಖೆ ಸಬ್ಸಿಡಿ ಯೋಜನೆಗಳು
ರಾಸುಗಳಿಗೆ ಉಚಿತ ಲಸಿಕೆ ಕಾರ್ಯಕ್ರಮ
ಜಾನುವಾರುಗಳಿಗೆ ಕಾಡುವ ಕಾಲುಬಾಯಿ ರೋಗ, ಕಂದುರೋಗ, ಪಿ.ಪಿ,ಆರ್ ರೋಗ, ಹಂದಿಜ್ವರ, ಗಳಲೆ ರೋಗ, ಕರಳು ಬೇನೆ ರೋಗ, ಚರ್ಮಗಂಟು ರೋಗಗಳ ವಿರುದ್ಧ ಉಚಿತ ಲಸಿಕೆ ನೀಡಲಾಗುತ್ತದೆ.
ಈ ಯೋಜನೆಗಳ ಪ್ರಯೋಜನ ಪಡೆಯುವುದು ಹೇಗೆ?
ರೈತರು, ಹೈನುಗಾರರು ಹಾಗೂ ಆಡು ಕುರಿ ಸಾಕಾಣಿಕೆದಾರರು ಈ ಎಲ್ಲಾ ಯೋಜನೆಗಳ ಪ್ರಯೋಜನ ಪಡೆಯಬಹುದು. ಈ ಕುರಿತ ಮಾಹಿತಿಗೆ ಹತ್ತಿರದ ತಾಲ್ಲೂಕು ಪಶುಪಾಲನಾ ಇಲಾಖೆ ಕಚೇರಿ ಸಂಪರ್ಕಿಸಿ. ಪಶುಪಾಲನಾ ಇಲಾಖೆಯ ಉಚಿತ ಸಹಾಯವಾಣಿ : 8277200300
ಇದನ್ನೂ ಓದಿ: Sheep-Goat Farming Schemes : ಕುರಿ-ಮೇಕೆ ಸಾಕಾಣಿಕೆ ಸಬ್ಸಿಡಿ ಯೋಜನೆಗಳು
2 Comments