ಉದ್ಯೋಗ

Karnataka PDO Recruitment 2024 : ಕರ್ನಾಟಕ ಗ್ರಾಮ ಪಂಚಾಯತಿ PDO ಹುದ್ದೆಗಳಿಗೆ ಅರ್ಜಿ ಆಹ್ವಾನ

WhatsApp Group Join Now
Telegram Group Join Now

Karnataka PDO Recruitment 2024 : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಹುದ್ದೆಗಳ ನಿರೀಕ್ಷೆಯಲ್ಲಿರುವ ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗವು ಸಿಹಿಸುದ್ದಿ ನೀಡಿದೆ. ರಾಜ್ಯದ ಗ್ರಾಮ ಪಂಚಾಯ್ತಿಗಳಲ್ಲಿ ಮಹತ್ವದ ಹುದ್ದೆಯಾಗಿರುವ PDO (Panchayat Development Officer) ಅರ್ಥಾತ್ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ಹೊಸ ನೇಮಕಾತಿಗೆ ಕೆಪಿಎಸ್‌ಸಿ ಅಧಿಕೃತ ಅಧಿಸೂಚನೆ ಹೊರಡಿಸಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ (Rural Development and Panchayat Raj Department) ಖಾಲಿ ಇರುವ ಉಳಿಕೆ ಮೂಲ ವೃಂದದ 150 ಹಾಗೂ ಹೈದ್ರಾಬಾದ್ ಕರ್ನಾಟಕ ವೃಂದದ 97 ಹುದ್ದೆಗಳು ಸೇರಿ ಒಟ್ಟು 247 ಪಿಡಿಒ ಹುದ್ದೆಗಳಿಗೆ ಪ್ರತ್ಯೇಕ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಇದೇ ಏಪ್ರಿಲ್ 15ರಿಂದ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: karnataka Heat Wave : ರಾಜ್ಯದ ಈ ಜಿಲ್ಲೆಗಳಲ್ಲಿ ಸುರಿಯಲಿದೆ ಬೆಂಕಿ ಬಿಸಿಲು | ಅಧಿಕ ಉಷ್ಣಾಂಶದ ಜಿಲ್ಲೆಗಳ ಪಟ್ಟಿ ಬಿಡುಗಡೆ

ಕರ್ನಾಟಕ ಪಿಡಿಒ ನೇಮಕಾತಿ ಸಂಕ್ಷಿಪ್ತ ವಿವರ

 •  ನೇಮಕಾತಿ ಪ್ರಾಧಿಕಾರ : ಕರ್ನಾಟಕ ಲೋಕಸೇವಾ ಆಯೋಗ-ಕೆಪಿಎಸ್‌ಸಿ
 • ಉದ್ಯೋಗ ಇಲಾಖೆ : ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
 • ಹುದ್ದೆ ಹೆಸರು : ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ)
 • ಒಟ್ಟು ಹುದ್ದೆಗಳ ಸಂಖ್ಯೆ : 150+97=247
 • ಅರ್ಜಿ ಸಲ್ಲಿಕೆ : ಆನ್‌ಲೈನ್ ಮುಖಾಂತರ
 • ಉದ್ಯೋಗ ಸ್ಥಳ : ಕರ್ನಾಟಕ ರಾಜ್ಯಾದ್ಯಂತ

ವಿದ್ಯಾರ್ಹತೆ ಎಷ್ಟು?

ಭಾರತದ ಕಾನೂನಿನ್ವಯ ಸ್ಥಾಪಿಸಲ್ಪಟ್ಟ ಅಂಗೀಕೃತ ವಿಶ್ವವಿದ್ಯಾಲಯದಿಂದ ಸ್ನಾತಕ ಪದವಿ ವಿದ್ಯಾರ್ಹತೆ ಪಡೆವರು ಪಿಡಿಒ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: Karnataka Apex Bank Recruitment 2024 : ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಖಾಯಂ ಹುದ್ದೆಗಳಿಗೆ ಅರ್ಜಿ ಆಹ್ವಾನ | ಸಂಬಳ ₹87,125 ರೂಪಾಯಿ

ವಯೋಮಿತಿ ಎಷ್ಟಿರಬೇಕು?

ಕರ್ನಾಟಕ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ವಯಸ್ಸು ನಿಗದಿಪಡಿಸಲಾಗಿದೆ. ಗರಿಷ್ಟ ವಯೋಮಿತಿಯನ್ನು ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ಹಾಗೂ ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷವನ್ನು ಸೂಚಿಸಲಾಗಿದೆ.

ಮಾಸಿಕ ಸಂಬಳ-ಸವಲತ್ತುಗಳೇನು?

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಪಿಡಿಒ ಹುದ್ದೆಗಳು ಮಹತ್ವದ ಹುದ್ದೆಗಳಾಗಿದ್ದು; ಗ್ರಾಮ ಆಡಳಿತದ ಬಹಮುಖ್ಯ ಕೊಂಡಿಯಾಗಿದ್ದಾರೆ. ಈ ಹುದ್ದೆಗಳಿಗೆ ನೇಮಕವಾದ ಅಭ್ಯರ್ಥಿಗಳಿಗೆ ಸರಕಾರ ಪಿಂಚಣಿ, ವೇತನ ಸಹಿತ ವಿವಿಧ ಸವಲತ್ತುಗಳನ್ನು ನಿಗದಿಪಡಿಸಿದೆ. ₹37,900 ರಿಂದ ₹70,850 ವರೆಗೂ ಪಿಡಿಒ ವೇತನ ಶ್ರೇಣಿ ಇರುತ್ತದೆ. ಆಕರ್ಷಕ ಪಿಂಚಣಿ ಸೌಲಭ್ಯ ಕೂ ಇರಲಿದೆ.

ಇದನ್ನೂ ಓದಿ: RPF Constable Recruitment 2024 : SSLC ಪಾಸಾದವರಿಗೆ ಕಾನ್‌ಸ್ಟೇಬಲ್ ಮತ್ತು ಸಬ್ಇನ್ಸ್‌ಪೆಕ್ಟರ್ ಹುದ್ದೆಗಳ ಬೃಹತ್ ನೇಮಕಾತಿ

ಅರ್ಜಿ ಶುಲ್ಕದ ವಿವರ

ಕರ್ನಾಟಕ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಹುದ್ದೆಗಳಿಗೆ ಅರ್ಜಿ ಶುಲ್ಕವಾಗಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 600 ರೂಪಾಯಿ ನಿಗದಿಪಡಿಸಲಾಗಿದೆ. ಇತರೆ ಹಿಂದುಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 300 ರೂಪಾಯಿ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50 ರೂಪಾಯಿ ಅರ್ಜಿ ಶುಲ್ಕವಿದೆ.

ಆದರೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ. ಈ ವರ್ಗದ ಅಭ್ಯರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಶುಲ್ಕವನ್ನು ನೆಟ್ ಬ್ಯಾಂಕಿ೦ಗ್, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಯುಪಿಐ ಮೂಲಕ ಆನ್‌ಲೈನ್‌ನಲ್ಲಿ ಪಾವತಿಸಬಹುದಾಗಿದೆ.

ಇದನ್ನೂ ಓದಿ: BMTC Conductor recruitment 2024 : ಪಿಯುಸಿ ಪಾಸಾದವರಿಗೆ ಬಿಎಂಟಿಸಿ ಕಂಡಕ್ಟರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ | ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ

ಆಯ್ಕೆ ವಿಧಾನ ಹೇಗೆ?

ರಾಜ್ಯದ ಗ್ರಾಮ ಪಂಚಾಯತ್‌ಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ನಡೆಸುವ ಎಲ್ಲಾ ಹುದ್ದೆಗಳಿಗೂ ಸಹ ಕಡ್ಡಾಯವಾಗಿ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ಇರುತ್ತದೆ. ಸ್ಪರ್ಧಾತ್ಮಕ ಪರೀಕ್ಷೆ ಮೂಲಕವೇ ಆಯ್ಕೆ ನಡೆಸಲಾಗುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿರುವ ಅಂಕಗಳ ಜೇಷ್ಠತೆ ಮತ್ತು ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳ ಅನುಸಾರ ಮತ್ತು ಅಭ್ಯರ್ಥಿಗಳು ನೀಡಿರುವ ಆದ್ಯತೆ ಪರಿಗಣಿಸಿ ಮೊದಲಿಗೆ ಪಿಡಿಒ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಸ್ಪರ್ಧಾತ್ಮಕ ಪರೀಕ್ಷೆ ಹೇಗಿರುತ್ತದೆ?

ಕರ್ನಾಟಕ ಪಿಡಿಒ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು (Competitive Exam)  ರಾಜ್ಯದ ಎಲ್ಲಾ ಜಿಲ್ಲಾ / ತಾಲ್ಲೂಕು ಕೇಂದ್ರಗಳಲ್ಲಿ ನಡೆಸಲಾಗುತ್ತದೆ. ತಲಾ 200 ಅಂಕಗಳ ಒಟ್ಟು 400 ಅಂಕಗಳಿಗೆ ಎರಡು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುತ್ತದೆ. ಒಂದೊ೦ದು ಪರೀಕ್ಷಾ ಅವಧಿಯು ಎರಡು ಗಂಟೆಗಳಾಗಿದ್ದು; ವಸ್ತುನಿಷ್ಠ ಬಹು ಆಯ್ಕೆ ಪ್ರಶ್ನೆಗಳು ಇರುತ್ತವೆ.

 • ಪತ್ರಿಕೆ-1 : ಈ ಪ್ರಶ್ನೆ ಪತ್ರಿಕೆಯು ಒಟ್ಟು 200 ಅಂಕಗಳಿಗೆ ಪರೀಕ್ಷೆ ನಡೆಯುತ್ತದೆ. ಸಾಮಾನ್ಯ ಕನ್ನಡ, ಸಾಮಾನ್ಯ ಜ್ಞಾನ, ಸಾಮಾನ್ಯ ಇಂಗ್ಲಿಷ್ ಕುರಿತ 100 ಅಂಕಗಳು ಇರುತ್ತದೆ.
 • ಪತ್ರಿಕೆ-2 : ಇದರಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಷಯಕ್ಕೆ ಸಂಬ೦ಧಿಸಿದ 100 ಪ್ರಶ್ನೆಗಳು ಇರುತ್ತವೆ. ಈ ಪತ್ರಿಕೆಯು 200 ಅಂಕಗಳಿಗೆ ಪರೀಕ್ಷೆ ಆಗಿರುತ್ತದೆ.

ಇದನ್ನೂ ಓದಿ: Land Surveyor Recruitment 2024 : ಸರ್ವೇಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಪಿಯುಸಿ ಪಾಸಾಗಿದ್ರೆ ಅರ್ಜಿ ಸಲ್ಲಿಸಿ | ₹47,650 ರೂಪಾಯಿ ಸಂಬಳ

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು

 • ಅರ್ಜಿ ಸಲ್ಲಿಕೆ ಪ್ರಾರಂಭಿಕ ದಿನಾಂಕ : 15-04-2024
 • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 15-05-2024
 • ಸ್ಪರ್ಧಾತ್ಮಕ ಪರೀಕ್ಷೆ ದಿನಾಂಕ : ಶೀಘ್ರ‍್ರದಲ್ಲಿ ಪ್ರಕಟಿಸಲಾಗುವುದು

ಅರ್ಜಿ ಸಲ್ಲಿಕೆಯ ಪ್ರಮುಖ ಲಿಂಕುಗಳು

ಇದನ್ನೂ ಓದಿ: Village accountant recruitment 2024 : ಪಿಯುಸಿ ಪಾಸಾದವರಿಂದ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ | ಅಧಿಕೃತ ಅಧಿಸೂಚನೆ ಬಿಡುಗಡೆ | 1000 ಹುದ್ದೆಗಳು

WhatsApp Group Join Now
Telegram Group Join Now

Related Posts

error: Content is protected !!