NewsWeather

Karnataka Rainfall- ಈ ಜಿಲ್ಲೆಗಳಲ್ಲಿ ಏಪ್ರಿಲ್ 3ರ ವರೆಗೂ ಪೂರ್ವ ಮುಂಗಾರು ಮಳೆ

ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚು ಸುರಿದ ಮಳೆ...

ರಾಜ್ಯದಲ್ಲಿ ಕಳೆದೊಂದು ವಾರದಿಂದ ಸುರಿಯುತ್ತಿರುವ ಮುಂಗಾರು ಪೂರ್ವ ಮಳೆ ಭರವಸೆ ಮೂಡಿಸುತ್ತಿದೆ. ಕಾದ ಕಾವಲಿಯಂತಾಗಿದ್ದ ಭೂಮಿಗೆ ಜೀವ ಕಳೆ ಬಂದಿದ್ದು; ಅನ್ನದಾತರು ಮುಂಗಾರು ಮಳೆಯ ನಿರೀಕ್ಷೆಯಲ್ಲಿದ್ದಾರೆ.

WhatsApp Group Join Now
Telegram Group Join Now

ಮುಂದಿನ ನಾಲ್ಕೈದು ದಿನ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದ್ದು, ರಾಜ್ಯದ 12 ಜಿಲ್ಲೆಗಳಲ್ಲಿ ಏಪ್ರಿಲ್ 3ರ ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ: Surya Ghar Rooftop Scheme-10 ಲಕ್ಷ ಮನೆಗಳಿಗೆ ಸೋಲಾರ್ ಕರೆಂಟ್

ವಾಡಿಕೆಗಿಂತ ಹೆಚ್ಚು ಮಳೆ

ಮಾರ್ಚ್ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ ಎಂದು ಇಲಾಖೆ ಹೇಳಿದೆ. ವಾಡಿಕೆಯಂತೆ ರಾಜ್ಯದಲ್ಲಿ ಸರಾಸರಿ 8.8 ಸೆಂ.ಮೀ. ಮಳೆಯಾಗಬೇಕು. ಆದರೆ, ಈ ಬಾರಿ 14.8 ಸೆಂ.ಮೀ. ಮಳೆಯಾಗಿದೆ ಎಂದು ತಿಳಿಸಿದೆ.

ಕಳೆದ ಗುರುವಾರ ಕೊಡಗು ಜಿಲ್ಲೆಯಲ್ಲಿ 5 ಸೆಂ.ಮೀ ಮಳೆಯಾಗಿದ್ದು; ಮುಂದಿನ ದಿನಗಳಲ್ಲಿ ಕೊಡಗು ಸೇರಿದಂತೆ ಮಲೆನಾಡು ಪ್ರದೇಶದಲ್ಲಿ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆಗಳಿವೆ.

Pre-monsoon refers to the period before the onset of the monsoon season, typically spanning from March to May in Karnataka. During this time, the region experiences rising temperatures, increased humidity, and occasional thunderstorms, often accompanied by strong winds and lightning. These pre-monsoon showers, commonly known as "Mango Showers," help in lowering temperatures and provide much-needed relief from the intense summer heat. This period also plays a crucial role in agricultural activities, as the early rains aid in soil preparation for the upcoming monsoon crops.
Karnataka Rainfall

ಇದನ್ನೂ ಓದಿ: Male nakshatragalu 2025- 2025ರ ಮಳೆ ನಕ್ಷತ್ರಗಳು | ಹೇಗಿದೆ ಈ ವರ್ಷದ ಮಳೆಗಾಲ?

ಈ ಜಿಲ್ಲೆಗಳಲ್ಲಿ ಮಳೆ

ಮಾರ್ಚ್ ತಿಂಗಳ ಅಂತ್ಯ ಮತ್ತು ಏಪ್ರಿಲ್ ಆರಂಭದಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯ ಪ್ರಕಾರ ಮುಂಗಾರು ಪೂರ್ವ ಮಳೆ ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಈ ಕೆಳಕಂಡ ಜಿಲ್ಲೆಗಳಲ್ಲಿ ಏಪ್ರಿಲ್ 3ರ ವರೆಗೆ ಮಳೆಯಾಗಲಿದೆ:

  • ದಕ್ಷಿಣ ಕನ್ನಡ
  • ಉಡುಪಿ
  • ಉತ್ತರ ಕನ್ನಡ
  • ಚಿಕ್ಕಮಗಳೂರು
  • ಹಾಸನ
  • ಕೊಡಗು
  • ಮೈಸೂರು
  • ಶಿವಮೊಗ್ಗ
  • ಬೆಳಗಾವಿ
  • ಧಾರವಾಡ
  • ಗದಗ
  • ಹಾವೇರಿ

ಇದನ್ನೂ ಓದಿ: ಪ್ರೊಸೆಸಿಂಗ್ ಶುಲ್ಕವಿಲ್ಲದೇ ₹30 ಲಕ್ಷದ ವರೆಗೆ ಲೋನ್ Zero Processing Fee Home Loan

WhatsApp Group Join Now
Telegram Group Join Now

Raitapi Jagattu

#ಮಾಲತೇಶ_ಮಾಳಮ್ಮನವರ್, ಸಂಪಾದಕರು ಮಾಲತೇಶ ಅವರು ಅನುಭವಿ ಪತ್ರಕರ್ತರಾಗಿದ್ದು, 2010ರಿಂದ ಪತ್ರಿಕೋಧ್ಯಮದಲ್ಲಿ ತೊಡಗಿಸಿಕೊಂಡಿದ್ದಾರೆ. ನಾಡಿನ ಹೆಸರಾಂತ ಪತ್ರಿಕೆಗಳಲ್ಲಿ ವರದಿಗಾರರಾಗಿ, ಸಹ ಸಂಪಾದಕರಾಗಿ, ಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. 2022ರಿಂದ ಡಿಜಿಟಲ್ ಪತ್ರಿಕೋಮಧ್ಯಮದಲ್ಲಿ ನಿರತರಾಗಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!