ಉದ್ಯೋಗ

KLA Recruitment 2024 : ಎಸ್ಸೆಎಸ್ಸೆಲ್ಸಿ ಪಾಸಾದವರಿಂದ ಕರ್ನಾಟಕ ವಿಧಾನ ಪರಿಷತ್ ಹುದ್ದೆಗಳಿಗೆ ಅರ್ಜಿ ಆಹ್ವಾನ | 42,000 ರೂಪಾಯಿ ಸಂಬಳ

WhatsApp Group Join Now
Telegram Group Join Now

KLA Recruitment 2024 :  ಎಸ್ಸೆಎಸ್ಸೆಲ್ಸಿ ಪಾಸಾದವರಿಗೆ ಕರ್ನಾಟಕ ವಿಧಾನ ಪರಿಷತ್‌ನಲ್ಲಿ ಖಾಲಿ ಇರುವ ಗ್ರೂಪ್ ‘ಡಿ’ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ನೇಮಕಾತಿಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿ ಇಲ್ಲಿದೆ…

ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಪ್ರಕಟಗೊಂಡಿದೆ. 10ನೇ ತರಗತಿ ಪಾಸ್ ಆಗಿ ಸರ್ಕಾರಿ ಉದ್ಯೋಗ ನಿರೀಕ್ಷೆಯಲ್ಲಿರುವವರಿಗೆ ಇದೊಂದು ಸಂತಸದ ಸುದ್ದಿಯಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾರು ಅರ್ಹರು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ ಮತ್ತು ಅರ್ಹತೆ ಸೇರಿದಂತೆ ಸಂಪೂರ್ಣ ಮಾಹಿತಿ ಈ ಕೆಳಗಿನ ಲೇಖನದಲ್ಲಿದೆ.

ಇದನ್ನೂ ಓದಿ: NWKRTC Driver recruitment 2024 : ಪಿಯುಸಿ ಪಾಸಾದವರಿಗೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಚಾಲಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ನೇಮಕಾತಿ ಸಂಕ್ಷಿಪ್ತ ವಿವರ

 • ನೇಮಕಾತಿ ಸಂಸ್ಥೆ : ಕರ್ನಾಟಕ ವಿಧಾನ ಪರಿಷತ್ತು (Karnataka Legislative Assembly – KLA)
 • ಖಾಲಿ ಹುದ್ದೆಗಳ ಸಂಖ್ಯೆ : 32 ಹುದ್ದೆಗಳು
 • ಹುದ್ದೆಗಳ ಹೆಸರು : ಚಾಲಕರು ಮತ್ತು ಗ್ರೂಪ್ ಡಿ ಹುದ್ದೆಗಳು
 • ಅರ್ಜಿ ಸಲ್ಲಿಕೆ : ಆಫ್‌ಲೈನ್ ಮುಖಾಂತರ
 • ಉದ್ಯೋಗ ಸ್ಥಳ : ಬೆಂಗಳೂರು

ಹುದ್ದೆಗಳ ವಿವರ

ಕರ್ನಾಟಕ ವಿಧಾನ ಪರಿಷತ್ ಸಚಿವಾಲಯ ಬೆಂಗಳೂರಿನಲ್ಲಿ ವಾಹನ ಚಾಲಕರು ಮತ್ತು ಗ್ರೂಪ್ ‘ಡಿ’ ಹುದ್ದೆಗಳು ಸೇರಿ ಒಟ್ಟು 32 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ ಈ ಕೆಳಗಿನಂತಿದೆ:

 • ಗ್ರೂಪ್ ಡಿ (Group D) : 29 ಹುದ್ದೆಗಳು
 • ವಾಹನ ಚಾಲಕರು (Driver) : 03 ಹುದ್ದೆಗಳು

ಇದನ್ನೂ ಓದಿ: Land Surveyor Recruitment 2024 : ಸರ್ವೇಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಪಿಯುಸಿ ಪಾಸಾಗಿದ್ರೆ ಅರ್ಜಿ ಸಲ್ಲಿಸಿ | ₹47,650 ರೂಪಾಯಿ ಸಂಬಳ

ಶೈಕ್ಷಣಿಕ ವಿದ್ಯಾರ್ಹತೆ Educational Qualification

ಕರ್ನಾಟಕ ವಿಧಾನ ಪರಿಷತ್ ಸಚಿವಾಲಯ ಬೆಂಗಳೂರಿನಲ್ಲಿ ಖಾಲಿ ಇರುವ ಚಾಲಕರು ಮತ್ತು ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿAದ 10ನೇ ತರಗತಿ ಪಾಸ್ ಆಗಿರಬೇಕು. ಚಾಲಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ವಿದ್ಯಾರ್ಹತೆಯೊಂದಿಗೆ ಮೋಟಾರ್ ಕಾರು ಅಥವಾ ಭಾರಿ ವಾಹನಗಳ ಚಾಲನೆಯ ಪರವಾನಗಿ (Driving license) ಹೊಂದಿರುವುದು ಕಡ್ಡಾಯವಾಗಿದೆ.

ವಯೋಮಿತಿ ವಿವರ

ಅಧಿಕೃತ ಅಧಿಸೂಚನೆಯ ಪ್ರಕಾರ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಕನಿಷ್ಠ 18 ವರ್ಷ ಪೂರೈಸಿರಬೇಕು. ಗರಿಷ್ಠ ವಯೋಮಿತಿಯನ್ನು ವರ್ಗಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ನಿಗದಿಪಡಿಸಲಾಗಿದೆ:

 • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 35 ವರ್ಷ
 • 2a, 2b, 3a, 3b ಪ್ರವರ್ಗ ಅಭ್ಯರ್ಥಿಗಳಿಗೆ : 38 ವರ್ಷ
 • ವರ್ಗ 1, ಪ.ಜಾತಿ, ಪ.ಪಂಗಡ ಅಭ್ಯರ್ಥಿಗಳಿಗೆ : 40 ವರ್ಷ

ಇದನ್ನೂ ಓದಿ: KPSC Recruitment 2024 : ತಹಶೀಲ್ದಾರ್ ಸೇರಿ 384 ಕೆಎಎಸ್ ಹುದ್ದೆಗಳಿಗೆ ಅರ್ಜಿ | ಕೆಪಿಎಸ್‌ಸಿ ಅಧಿಕೃತ ಅಧಿಸೂಚನೆ ಪ್ರಕಟಣೆ

ಮಾಸಿಕ ಸಂಬಳ ಎಷ್ಟಿರುತ್ತದೆ?

ಕರ್ನಾಟಕ ವಿಧಾನ ಪರಿಷತ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ಸಂಬಳವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.

 • ವಾಹನ ಚಾಲಕರು ಹುದ್ದೆಗಳಿಗೆ : ₹21,400 ರಿಂದ ₹42,000
 • ಗ್ರೂಪ್ ಡಿ ಹುದ್ದೆಗಳಿಗೆ : ₹17,000 ರಿಂದ ₹28,950

ಅರ್ಜಿ ಸಲ್ಲಿಸುವ ವಿಧಾನ ಹೇಗೆ?

ಕರ್ನಾಟಕ ವಿಧಾನ ಪರಿಷತ್ ಸಚಿವಾಲಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸರ್ಕಾರಿ ಮುದ್ರಣಾಲಯದಿಂದ ಅರ್ಜಿ ನಮೂನೆಯನ್ನು ಪಡೆದುಕೊಂಡು ಸಂಬAಧಿಸಿದ ಸ್ವಯಂ ದೃಢೀಕರಿಸಿದ ದಾಖಲಾತಿಗಳೊಂದಿಗೆ ಅಂಚೆ ಮುಖಾಂತರ ಅಥವಾ ಖುದ್ದಾಗಿ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.

ಅಂಚೆ ಮುಕಾಂತರ ಕಳುಹಿಸುವ ವಿಳಾಸ : ಕಾರ್ಯದರ್ಶಿ, ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯ, ಅಂಚೆ ಪೆಟ್ಟಿಗೆ ಸಂಖ್ಯೆ: 5079, ಮೊದಲನೇ ಮಹಡಿ, ವಿಧಾನಸೌಧ, ಬೆಂಗಳೂರು-560 001

ಖುದ್ದಾಗಿ ಅರ್ಜಿ ಸಲ್ಲಿಸುವ ವಿಳಾಸ : ವಿಧಾನ ಸೌಧದ 2ನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ: 216, ಪತ್ರ ಸ್ವೀಕಾರ ಮತ್ತು ರವಾನೆ ಶಾಖೆಗೆ ತಲುಪಿಸತಕ್ಕದ್ದು.

ಇದನ್ನೂ ಓದಿ: Village accountant recruitment 2024 : ಪಿಯುಸಿ ಪಾಸಾದವರಿಂದ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ | ಅಧಿಕೃತ ಅಧಿಸೂಚನೆ ಬಿಡುಗಡೆ | 1000 ಹುದ್ದೆಗಳು

ಅರ್ಜಿ ಶುಲ್ಕ Application fee

 • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 600 ರೂಪಾಯಿ
 • ಪ್ರವರ್ಗ 2a, 2b, 3a, 3b ಅಭ್ಯರ್ಥಿಗಳಿಗೆ : 300 ರೂಪಾಯಿ
 • ಮಾಜಿ ಸೈನಿಕ ಅಭ್ಯರ್ಥಿಗಳಿಗೆ : 50 ರೂಪಾಯಿ
 • ಪ್ರವರ್ಗ 1, ಪ.ಜಾತಿ, ಪ.ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ : ಯಾವುದೇ ಅರ್ಜಿ ಶುಲ್ಕವಿಲ್ಲ

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು

 • ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 04-03-2024
 • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 05-04-2024

ಪ್ರಮುಖ ಲಿಂಕುಗಳು

 • ಅಧಿಸೂಚನೆ : Download
 • ಅಧಿಕೃತ ಜಾಲತಾಣ : www.kla.kar.nic.in
 • ಸಹಾಯವಾಣಿ : 080-22258569

ಇದನ್ನೂ ಓದಿ: FDA SDA Recruitment 2024 : ಪ್ರಥಮ ಮತ್ತು ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿ | ಖಾಲಿ ಇರುವ 300 ಹುದ್ದೆಗಳ ನೇಮಕಾತಿಗೆ ಜಿಲ್ಲಾವಾರು ಪಟ್ಟಿ ಬಿಡುಗಡೆ

Rain Information 2024 : ಮಾರ್ಚ್’ನಿಂದ ಮೇ ವರೆಗೂ ರಣ ಬಿಸಿಲು; ಜೂನ್‌ನಿಂದ ಭರ್ಜರಿ ಮುಂಗಾರು ಮಳೆ | ಸಿಹಿಕಹಿ ಸುದ್ದಿಕೊಟ್ಟ ಹವಾಮಾನ ಇಲಾಖೆ

WhatsApp Group Join Now
Telegram Group Join Now

Related Posts

error: Content is protected !!