ಸುದ್ದಿಗಳು

Kotak Suraksha Scholarship Program 2024 : 1 ಲಕ್ಷ ರೂಪಾಯಿ ವಿದ್ಯಾರ್ಥಿವೇತನ | ಅರ್ಹ ಅಭ್ಯರ್ಥಿಗಳೇ ಈಗಲೇ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now

Kotak Suraksha Scholarship Program 2024 : ಕೋಟಕ್ ಬ್ಯಾಂಕ್ ಅರ್ಹ ವಿದ್ಯಾರ್ಥಿಗಳಿಗೆ 1 ಲಕ್ಷ ರೂಪಾಯಿ ವರೆಗಿನ ವಿದ್ಯಾರ್ಥಿವೇತನ ನೀಡುತ್ತಿದೆ. ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾಗಿರುವ ಸಂಪೂರ್ಣ ಮಾಹಿತಿ ಇಲ್ಲಿದೆ..

Kotak Suraksha Scholarship Program 2024 ವಿದ್ಯಾರ್ಥಿವೇತನ ಮಾಹಿತಿ

ಭಾರತದ ಸ್ಟಾಕ್ ಬ್ರೋಕಿಂಗ್ ಕಂಪನಿಗಳಲ್ಲಿ ಒಂದಾಗಿರುವ ಕೊಟಕ್ ಸೆಕ್ಯುರಿಟೀಸ್ ಲಿಮಿಟೆಡ್ (KSL) ‘ಕೊಟಕ್ ಸುರಕ್ಷಾ ವಿದ್ಯಾರ್ಥಿವೇತನ’ (Kotak Suraksha Scholarship) ಹೆಸರಿನಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ಅವರ ಅಧ್ಯಯನಕ್ಕಾಗಿ 1 ಲಕ್ಷ ರೂಪಾಯಿ ವರೆಗೆ ಹಣದ ಸಹಾಯವನ್ನು ನೀಡಲಾಗುತ್ತದೆ. ಇದು ದೇಶದ ಅರ್ಹ PwD (Persons with Disabilities) ವಿದ್ಯಾರ್ಥಿಗಳಿಗೆ ಶಿಕ್ಷಣ ಮುಂದುವರಿಸಲು ಆರ್ಥಿಕವಾಗಿ ಬೆಂಬಲಿಸುವ ಗುರಿಯನ್ನು ಹೊಂದಿದೆ.

ಕೊಟಕ್ ಸುರಕ್ಷಾ ವಿದ್ಯಾರ್ಥಿ ವೇತನ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಯಾರು ಅರ್ಹರು? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳೇನು? ಯಾವ ವಿದ್ಯಾರ್ಥಿಗಳಿಗೆ ಎಷ್ಟು ವಿದ್ಯಾರ್ಥಿ ವೇತನ ಸಿಗಲಿದೆ? ಎಂಬ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ನೀಡಲಾಗಿದೆ.

ಇದನ್ನೂ ಓದಿ:  Tumakuru district court recruitment 2024 : SSLC ಪಾಸಾದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಹೊಸ ನೇಮಕಾತಿ | ಸಂಬಳ ₹52,650

ಯಾರಿಗೆ ಎಷ್ಟು ವಿದ್ಯಾರ್ಥಿವೇತನ ಸಿಗಲಿದೆ?

Kotak Suraksha Scholarship Program 2024 ಸಹಾಯಧನವನ್ನು ಈ ಕೆಳಗಿನಂತೆ ವಿದ್ಯಾರ್ಥಿಗಳು ಕಲಿಯುತ್ತಿರುವ ತರಗತಿ ಹಾಗೂ ಕೋರ್ಸ್ ಆಧಾರದ ಮೇಲೆ ವಿತರಿಸಲಾಗುತ್ತಿದ್ದು;

 • 9ನೇ ತರಗತಿಯಿಂದ 12ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಗೆ – ಪ್ರತಿ ವರ್ಷ 50,000 ರೂಪಾಯಿ
 • ಸಾಮಾನ್ಯ ಅಥವಾ ವೃತ್ತಿಪರ ಪದವಿ ಕೋರ್ಸ್’ಗಳಿಗೆ – 1,00,000 ರೂಪಾಯಿ

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹತೆಗಳೇನು?

 • ಅರ್ಜಿದಾರರು ಭಾರತೀಯನಾಗಿರಬೇಕು.
 • ಅಂಗವಿಕಲ ಅಭ್ಯರ್ಥಿಯಾಗಿದ್ದು, ಮಾನ್ಯ ಪ್ರಮಾಣ ಪತ್ರ ಹೊಂದಿರಬೇಕು.
 • ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆ, ಮಂಡಳಿ ಅಥವಾ ವಿಶ್ವವಿದ್ಯಾಲಯದಲ್ಲಿ 9ನೇ ತರಗತಿಯಿಂದ ಪದವಿ ಶಿಕ್ಷಣ ಪಡೆಯುತ್ತಿರಬೇಕು.
 • ಅರ್ಜಿದಾರರು ಹಿಂದಿನ ಅರ್ಹತಾ ಪರೀಕ್ಷೆಯಲ್ಲಿ ಕನಿಷ್ಠ 55% ಅಂಕಗಳೊAದಿಗೆ ಉತ್ತೀರ್ಣರಾಗಿರಬೇಕು.
 • ಕುಟುಂಬದ ವಾರ್ಷಿಕ ಆದಾಯವು 3.2 ಲಕ್ಷ ರೂಪಾಯಿಗಿಂತ ಕಡಿಮೆ ಅಥವಾ ಸಮನಾಗಿರಬೇಕು.

ಇದನ್ನೂ ಓದಿ: Labour department scholarship 2024 : ಕಾರ್ಮಿಕ ಇಲಾಖೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | ಈ ವಿದ್ಯಾರ್ಥಿಗಳಿಗೆ 10 ಸಾವಿರ ರೂ. ಆರ್ಥಿಕ ನೆರವು

ಅರ್ಜಿ ಸಲ್ಲಿಕೆಗೆ ಅಗತ್ಯ ದಾಖಲೆಗಳೇನು ಬೇಕು?

 • ವಿದ್ಯಾರ್ಥಿಯ ಪಾಸ್ಪೋರ್ಟ್ ಅಳತೆಯ ಭಾವಚಿತ್ರ
 • ಗುರುತಿನ ಪುರಾವೆ (ಆಧಾರ್ ಕಾರ್ಡ್/ ಪಡಿತರ ಚೀಟಿ/ ಮತದಾರರ ಗುರುತಿನ ಚೀಟಿ)
 • ಪ್ರಸ್ತುತ ವರ್ಷದ ಪ್ರವೇಶ ಪುರಾವೆ ದಾಖಲೆ
 • 10 ಮತ್ತು 12 ನೇ ತರಗತಿಯ ಅಂಕಪಟ್ಟಿಗಳು
 • ಹಿಂದಿನ ಶೈಕ್ಷಣಿಕ ವರ್ಷದ ಅಂಕಪಟ್ಟಿಗಳು
 • ಕುಟುಂಬದ ಆದಾಯ ಪ್ರಮಾಣ ಪತ್ರ (Income Certificate)
 • ಕೃಷಿ, ತೋಟಗಾರಿಕೆ ಮತ್ತು ಪಶುವೈದ್ಯಕೀಯ ಮೂಲಗಳಿಂದ ಆದಾಯ ಹೊಂದಿರುವ ವ್ಯಕ್ತಿಗೆ ಸಂಬAಧಿಸಿದ ಅಧಿಕಾರಿಗಳಿಂದ ಪ್ರಮಾಣಪತ್ರ
 • ಬಿಪಿಎಲ್ / ರೇಷನ್ ಕಾರ್ಡ್
 • ಅರ್ಜಿದಾರರ ಅಥವಾ ಪೋಷಕರ ಬ್ಯಾಂಕ್ ಖಾತೆ ವಿವರಗಳು

ಅರ್ಜಿ ಸಲ್ಲಿಸುವುದು ಹೇಗೆ?

Kotak Suraksha Scholarship Program 2024 ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಿಂಕ್ ನೀಡಲಾಗಿದೆ. ಆ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ Kotak Suraksha Scholarship Program 2024-25 ವೆಬ್‌ಪುಟ ತೆರೆದುಕೊಳ್ಳುತ್ತದೆ. ಅದರಲ್ಲಿ Apply Now ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು ದಿನಾಂಕ : 30-04-2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅರ್ಹರಿರುವ ಎಲ್ಲಾ ಆಸಕ್ತ ವಿದ್ಯಾರ್ಥಿಗಳು ಕೊನೆಯ ದಿನಾಂಕದ ವರೆಗೆ ಕಾಯದೇ ಈ ಕೂಡಲೇ ಅರ್ಜಿ ಸಲ್ಲಿಸುವ ಮೂಲಕ ಈ ಅವಕಾಶ ಬಳಸಿಕೊಳ್ಳಬಹುದಾಗಿದೆ.

ಅರ್ಜಿ ಸಲ್ಲಿಸುವ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  PM Surya Ghar Muft Bijli Jojana 2024 : ಮನೆಮನೆಗೂ ಉಚಿತ ಸೋಲಾರ್ ವಿದ್ಯುತ್ | ಪ್ರಧಾನ್‌ಮಂತ್ರಿ ಸೂರ್ಯ ಘರ್ ಯೋಜನೆಗೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್

WhatsApp Group Join Now
Telegram Group Join Now

Related Posts

error: Content is protected !!