ಸರಕಾರಿ ಯೋಜನೆ

LPG cylinder subsidy extension : ಮುಂದಿನ ವರ್ಷದ ವರೆಗೂ ಇವರಿಗೆ ₹600 ರೂಪಾಯಿಗೆ ಸಿಲಿಂಡರ್ | ಎಲ್‌ಪಿಜಿ ಸಿಲಿಂಡರ್ ಸಬ್ಸಿಡಿ ವಿಸ್ತರಣೆ

WhatsApp Group Join Now
Telegram Group Join Now

LPG cylinder subsidy extension : ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಅಡಿಗೆ ಅನಿಲ ಬಳಕೆದಾರರಿಗೆ ಕೇಂದ್ರ ಸರಕಾರ ಸಿಹಿಸುದ್ದಿ ನೀಡಿದೆ. ಈ ಫಲಾನುಭವಿಗಳಿಗೆ ಇನ್ನೂ ಒಂದು ವರ್ಷ, ಅಂದರೆ ಮುಂದಿನ ವರ್ಷ ಮಾರ್ಚ್ ತಿಂಗಳ ವರೆಗೂ 14.2 ಕೆಜಿ ಎಲ್‌ಪಿಜಿ ಸಿಲಿಂಡರ್ (LPG cylinder) ಕೇವಲ 600 ರೂಪಾಯಿಗೆ ಸಿಗಲಿದೆ. ಈ ಕುರಿತು ಕೇಂದ್ರ ಸರ್ಕಾರ ಅಧಿಕೃತ ಘೋಷಣೆ ಮಾಡಿದೆ.

ಇದನ್ನೂ ಓದಿ: Free Horticulture training with stipend : ರೈತರಿಗೆ ಉಚಿತ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ | ತರಬೇತಿ ಜೊತೆಗೆ ₹17,500 ಶಿಷ್ಯವೇತನ

ಪ್ರಧಾನ ಮಂತ್ರಿ ಉಜ್ವಲ ಯೋಜನೆ

ಕೇಂದ್ರ ಸರ್ಕಾರವು ಬಡ ಕುಟುಂಬಗಳ ವಯಸ್ಕ ಮಹಿಳೆಯರಿಗೆ ಠೇವಣಿ ಮುಕ್ತ ಎಲ್‌ಪಿಜಿ ಸಂಪರ್ಕ ಒದಗಿಸುವ ‘ಪ್ರಧಾನಮಂತ್ರಿ ಉಜ್ವಲ ಯೋಜನೆ’ಯನ್ನು (Pradhan mantri Ujjwala Yojana- PMUY) 2016ರ ಮೇನಲ್ಲಿ ಆರಂಭಿಸಿದೆ. ದೇಶದಾದ್ಯಂತ ಉಜ್ವಲ ಯೋಜನೆಯಡಿಯಲ್ಲಿ ಈಗಾಗಲೇ ಬರೋಬ್ಬರಿ 10.35 ಕೋಟಿ ಫಲಾನುಭವಿಗಳು ಅಡುಗೆ ಅನಿಲ ಸಂಪರ್ಕ ಹೊಂದಿದ್ದಾರೆ.

ಉಜ್ವಲ ಯೋಜನೆಯಡಿ ಅರ್ಹ ಮಹಿಳೆಯರಿಗೆ ಗ್ಯಾಸ್ ಸಂಪರ್ಕದ ಜತೆಗೆ 800 ರೂಪಾಯಿಗಿಂತ ಹೆಚ್ಚು ಮೌಲ್ಯದ ಉಚಿತ ರಿಫೆಲ್, ಉಚಿತ ಸ್ಟೌ ಒದಗಿಸಲಾಗುತ್ತದೆ. 2022-23ಕ್ಕೆ, ಉಜ್ವಲ ಸಬ್ಸಿಡಿಗಾಗಿ ರೂ 6,100 ಕೋಟಿಗಳನ್ನು ಒದಗಿಸಲಾಗಿತ್ತು. 2023-24 ಹಣಕಾಸು ವರ್ಷದಲ್ಲಿ ರೂ 7,680 ಕೋಟಿಗೆ ಏರಿಕೆ ಮಾಡಲಾಗಿದೆ. ಈ ಸಹಾಯಧನವನ್ನು ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತದೆ.

ಇದನ್ನೂ ಓದಿ: Panchamitra whatsapp Chat Service : ವಾಟ್ಸಾಪ್‌ನಲ್ಲೇ ಸಿಗುತ್ತವೆ ಗ್ರಾಮ ಪಂಚಾಯತಿ ಹಲವು ಸೇವೆಗಳು | ಈ ವಾಟ್ಸಾಪ್ ನಂಬರ್‌ಗೆ ‘ಹಾಯ್’ ಅಂತ ಕಳಿಸಿ..

ಮತ್ತೊಂದು ವರ್ಷ ಸಬ್ಸಿಡಿ ವಿಸ್ತರಣೆ

ಉಜ್ವಲ ಫಲಾನುಭವಿಗಳಿಗೆ (Ujjwala Beneficiary) ಈಗ ನೀಡುತ್ತಿರುವ 300 ರೂಪಾಯಿ ಸಬ್ಸಿಡಿಯನ್ನು ಇನ್ನೂ ಒಂದು ವರ್ಷ ಕಾಲ ಮುಂದುವರೆಸಲು ಕೇಂದ್ರ ಸಚಿವ ಸಂಪುಟ ಅನುಮೋದಿಸಿದೆ. ಈ ಯೋಜನೆಯಡಿ ನೀಡುವ ಸಬ್ಸಿಡಿಯನ್ನು 2025ರ ಮಾರ್ಚ್ ತಿಂಗಳ ವರೆಗೆ ವಿಸ್ತರಿಸಲಾಗಿದ್ದು; ಈ ಕುರಿತು ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಸಚಿವ ಪಿಯೂಷ್ ಗೋಯೆಲ್, ಸಬ್ಸಿಡಿ ವಿಸ್ತರಣೆ ಘೋಷಣೆ ಮಾಡಿದ್ದಾರೆ.

2022ರ ಮೇ ತಿಂಗಳಲ್ಲಿ ಉಜ್ವಲ ಯೋಜನೆ ಫಲಾನುಭವಿಗಳಿಗೆ 200 ರೂಪಾಯಿ ಸಬ್ಸಿಡಿ ಘೋಷಸಲಾಗಿತ್ತು. 2023ರ ಅಕ್ಟೋಬರ್ ತಿಂಗಳಲ್ಲಿ ಇದನ್ನು 300 ರೂಪಾಯಿಗೆ ಏರಿಕೆ ಮಾಡಲಾಯಿತು. ಇದರಿಂದ ಉಜ್ವಲ ಫಲಾನುಭವಿಗಳಿಗೆ 603 ರೂಪಾಯಿಗೆ ಸಿಲಿಂಡರ್ ಲಭ್ಯವಾಗುತ್ತಿತ್ತು. ಕೇಂದ್ರ ಸಚಿವ ಸಂಪುಟವು ಇದೀಗ ಮುಂದಿನ ವರ್ಷ ಮಾರ್ಚ್ ತಿಂಗಳ ವರೆಗೆ ಈ ಸಬ್ಸಿಡಿಯನ್ನು ಮುಂದುವರೆಸಲು ಅನುಮೋದನೆ ನೀಡಿದೆ.

ಉಜ್ವಲ ಯೋಜನೆ ಅರ್ಜಿ ಸಲ್ಲಿಸಲು ಯಾರು ಅರ್ಹರು?

ಕೇಂದ್ರ ಸರಕಾರ Pradhan mantri Ujjwala ಯೋಜನೆಯಡಿಯಲ್ಲಿ ಹೊಸದಾಗಿ 75 ಲಕ್ಷ ಅರ್ಹತೆ ಹೊಂದಿರುವ ಮಹಿಳೆಯರಿಗೆ ಗ್ಯಾಸ್ ಸಂಪರ್ಕ ಒದಗಿಸಲು ಮುಂದಾಗಿದೆ. ಪ್ರಧಾನಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು 18 ವರ್ಷ ಮೇಲ್ಪಟ್ಟ ಬಿಪಿಎಲ್ ಕಾರ್ಡ್ ಹೊಂದಿದ ಮಹಿಳೆಯರು ಮಾತ್ರ ಅರ್ಹರಿರುತ್ತಾರೆ. ಕುಟುಂಬದ ಸದಸ್ಯರಲ್ಲಿ ಬೇರೆ ಯಾರೊಬ್ಬರ ಹೆಸರಿನಲ್ಲಿಯೂ ಎಲ್‌ಪಿಜಿ ಕನೆಕ್ಷನ್ ಇರಬಾರದು. ಈ ಅರ್ಹತೆಯುಳ್ಳ ಎಲ್ಲಾ ಮಹಿಳೆಯರು ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: PM Kisan 16th Installment : ಸಣ್ಣ ರೈತರ ಬ್ಯಾಂಕ್ ಖಾತೆಗೆ 2,000 ರೂಪಾಯಿ ಜಮಾ | ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…

ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲಾತಿಗಳು

  • ಅರ್ಜಿ ಸಲ್ಲಿಸುವ ಮಹಿಳೆಯ ಆಧಾರ್ ಕಾರ್ಡ್
  • ಬಿಪಿಎಲ್ ರೇಷನ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್
  • ಪಾಸ್ ಪೋರ್ಟ್ ಸೈಜ್ ಫೋಟೋ
  • ಜಾತಿ ಪ್ರಮಾಣ ಪತ್ರ
  • ವಿಳಾಸ ಪ್ರಮಾಣ ಪತ್ರ

ಈ ಎಲ್ಲಾ ಪ್ರಮುಖ ದಾಖಲಾತಿಗಳೊಂದಿಗೆ ಹತ್ತಿರವಿರುವ ಗ್ರಾಮ ಒನ್ ಕಂಪ್ಯೂಟರ್ ಕೇಂದ್ರ, ಇತರೆ ಕಂಪ್ಯೂಟರ್ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು ಅಥವಾ ಕೆಳಗೆ ನೀಡಿರುವ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅಭ್ಯರ್ಥಿಯ ಹೆಸರು, ವಿಳಾಸ, ಆಧಾರ್ ನಂಬರ್, ರೇಷನ್ ಕಾರ್ಡ್ ನಂಬರ್ ಭರ್ತಿ ಮಾಡಿ ನೇರವಾಗಿ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು.

ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಸಂಬ೦ಧಿಸಿದ ಯಾವುದೇ ಹೆಚ್ಚಿನ ಮಾಹಿತಿ ಬೇಕಾದರೆ ತಮ್ಮ ವ್ಯಾಪ್ತಿಯಲ್ಲಿ ಬರುವ ಹತ್ತಿರದ ಗ್ಯಾಸ್ ಏಜೆನ್ಸಿಗಳನ್ನು ಭೇಟಿ ಮಾಡಿ ಅರ್ಜಿ ಸಲ್ಲಿಸಲು ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.

ಅರ್ಜಿ ಸಲ್ಲಿಸುವ ವೆಬ್‌ಸೈಟ್ ಲಿಂಕ್ : 
https://www.pmuy.gov.in/ujjwala2.html

ಇದನ್ನೂ ಓದಿ:  Land Surveyor Recruitment 2024 : ಸರ್ವೇಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಪಿಯುಸಿ ಪಾಸಾಗಿದ್ರೆ ಅರ್ಜಿ ಸಲ್ಲಿಸಿ | ₹47,650 ರೂಪಾಯಿ ಸಂಬಳ

PM Surya Ghar Muft Bijli Jojana 2024 : ಮನೆಮನೆಗೂ ಉಚಿತ ಸೋಲಾರ್ ವಿದ್ಯುತ್ | ಪ್ರಧಾನ್‌ಮಂತ್ರಿ ಸೂರ್ಯ ಘರ್ ಯೋಜನೆಗೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್

WhatsApp Group Join Now
Telegram Group Join Now

Related Posts

error: Content is protected !!