ಸುದ್ದಿಗಳುಹವಾಮಾನ

ಮುಂಗಾರು ಮಳೆ 2024 ಎಂಟ್ರಿ | ಹೇಗಿರಲಿದೆ ಈ ವರ್ಷ ಮಳೆ? Monsoon rain entry

WhatsApp Group Join Now
Telegram Group Join Now

Monsoon rain entry : ಮುಂಗಾರು ಮಳೆ ಪ್ರವೇಶವಾಗಿದೆ. ದೇಶದ ತುತ್ತತುದಿಯ ರಾಜ್ಯವಾದ ಕೇರಳ ಹಾಗೂ ಈಶಾನ್ಯ ರಾಜ್ಯವನ್ನು ಇಂದು (ಮೇ 30) ಪ್ರವೇಶ ಮಾಡಿರುವ ನೈರುತ್ಯ ಮಾನ್ಸೂನ್ ಮಾರುತಗಳು ನಿಗದಿಗಿಂತ ಒಂದು ದಿನ ಮೊದಲೇ ಭಾರತಕ್ಕೆ ಎಂಟ್ರಿ ಕೊಡಲಿವೆ ಎಂದು ಹವಾಮಾನ ಇಲಾಖೆ ಹೇಳಿದೆ.

ಮುಂಗಾರು ಮಾರುತಗಳು ಪ್ರತೀ ವರ್ಷ ಸಾಮಾನ್ಯವಾಗಿ ಮೇ 31 – ಜೂನ್ 1ರ ಅವಧಿಯಲ್ಲಿ ಕೇರಳ ಪ್ರವೇಶಿಸಲಿದೆ. ಬಳಿಕ ಮುಂದಿನ 5ರಿಂದ 10 ದಿನಗಳಲ್ಲಿ ದೇಶಾದ್ಯಂತ ವ್ಯಾಪಿಸುವ ನಿರೀಕ್ಷೆಯಿದೆ. ಈ ವರ್ಷ ರೆಮಲ್ ಚಂಡಮಾರುತ ಆರ್ಭಟದಿಂದಾಗಿ ಈಶಾನ್ಯ ಭಾರತದಲ್ಲೂ ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇದನ್ನೂ ಓದಿ: Rajiv Gandhi Housing Scheme 2024 : ರಾಜೀವ್ ಗಾಂಧಿ ವಸತಿ ನಿಗಮದಿಂದ ಸ್ವಂತ ಮನೆ ಕಟ್ಟಿಕೊಳ್ಳಲು ಸರ್ಕಾರದಿಂದ 6.5 ಲಕ್ಷ ರೂಪಾಯಿ ಸಹಾಯಧನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

ಹೇಗಿದೆ ಈ ವರ್ಷ ಮಳೆ?

ನೈಋತ್ಯದಿಂದ ಬೀಸುವ ಮಾನ್ಸೂನ್ (Southwest Monsoon) ಭಾರತಕ್ಕೆ ಪ್ರಮುಖ ಮಳೆಯನ್ನು ತರುವ ಕಾಲ. ದೇಶದ ಕೃಷಿ ಹಾಗೂ ಆರ್ಥಿಕತೆಯ ಜೀವನಾಡಿಯಾದ ಈ ಮಾರುತಗಳು ಸಾಮಾನ್ಯವಾಗಿ ಜೂನ್‌ನಲ್ಲಿ ಆರಂಭವಾಗಿ ಸೆಪ್ಟೆಂಬರ್ ಹೊತ್ತಿಗೆ ಕೊನೆಗೊಳ್ಳುತ್ತದೆ. ಈ ಬಾರಿ ದೀರ್ಘಕಾಲೀನ ಸರಾಸರಿಗಿಂತ ಹೆಚ್ಚಿ ಮಳೆ ಸುರಿಸಬಹುದು ಎಂದು ಕಳೆದ ತಿಂಗಳು ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿತ್ತು.

Monsoon rain entry

ಈ ಹಿನ್ನಲೆಯಲ್ಲಿ ಈ ವರ್ಷ ಈಶಾನ್ಯ ಭಾರತದಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ನಿರೀಕ್ಷೆ ಇದ್ದು; ವಾಯುವ್ಯದಲ್ಲಿ ಸಾಮಾನ್ಯ ಮತ್ತು ದೇಶದ ಮಧ್ಯ ಮತ್ತು ದಕ್ಷಿಣ ಪ್ರದೇಶಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗಲಿದೆ. ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದಲ್ಲಿ ಜೂನ್‌ನಲ್ಲಿ 166.9 ಮಿ.ಮೀ. ಅಥವಾ ಶೇ.92ರಿಂದ 108 ರಷ್ಟು ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.

ಕಳೆದ ವರ್ಷದ ಮಳೆ ಪ್ರಮಾಣಕ್ಕೆ ಹೋಲಿಸಿದರೆ ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆ ಆಗಲಿದೆ. ಕಳೆದ ವರ್ಷ 2023ರಲ್ಲಿ ಮುಂಗಾರು ಮಾರುತಗಳು ಜೂನ್ 8ರಂದು ಕೇರಳ ಪ್ರವೇಶ ಮಾಡಿದ್ದವು. ಅಂದರೆ ವಾಡಿಕೆಯ ಪ್ರವೇಶದ ದಿನಕ್ಕಿಂತ 7 ದಿನ ವಿಳಂಬವಾಗಿ ನೈಋಉತ್ಯ ಮಾರುತಗಳ ಆಗಮನವಾಗಿತ್ತು. ಕಳೆದ ವರ್ಷ ದೇಶದಲ್ಲಿ ದೀರ್ಘಕಾಲೀನ ಸರಾಸರಿಯ ಶೇ.93ರಷ್ಟು ಮಳೆ ಸುರಿದಿತ್ತು.

ಇದನ್ನೂ ಓದಿ: PM – Surya Ghar Muft Bijli Jojana : ಮನೆಮನೆಗೂ ಉಚಿತ ಸೋಲಾರ್ ವಿದ್ಯುತ್ | ಪ್ರಧಾನ್‌ಮಂತ್ರಿ ಸೂರ್ಯ ಘರ್ ಯೋಜನೆಗೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್

WhatsApp Group Join Now
Telegram Group Join Now

Related Posts

error: Content is protected !!