ಸುದ್ದಿಗಳುಹವಾಮಾನ

Rain Forecast Karnataka : ಮೇ 7ರಿಂದ ಮಳೆ | ಯಾವೆಲ್ಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ?

WhatsApp Group Join Now
Telegram Group Join Now

Rain Forecast Karnataka : ಭಾರತೀಯ ಹವಾಮಾನ ಇಲಾಖೆಯು ನೆತ್ತಿ ಸುಡುವ ಬಿಸಿಲಿನ ಭೇಗೆಯಿಂದ ಕಂಗಾಲಾಗಿರುವ ಜನತೆಗೆ ಸಿಹಿಸುದ್ದಿ ನೀಡಿದೆ. ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಇದೇ ಮೇ 7ರಿಂದ ಮಳೆಯಾಗಲಿದ್ದು; ಬಿಸಿ ಗಾಳಿ ತಹಬಂದಿಗೆ ಬರಲಿದೆ ಎಂಬ ಮುನ್ಸೂಚನೆ ನೀಡಿದೆ.

ಮೇ 04ರ ಶನಿವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿ ಗಾಳಿ ಕಾಣಿಸಿಕೊಂಡಿದೆ. ಒಂದು ಡಜನ್‌ಗೂ ಹೆಚ್ಚು ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ ದಾಟಿದ್ದು; ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶ 45.2 ಡಿಗ್ರಿ ಸೆಲ್ಸಿಯಸ್ ವರದಿಯಾಗಿದೆ ಎಂದು ಇಲಾಖೆ ತಿಳಿಸಿದೆ.

ರಾಜ್ಯ ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ ಮತ್ತು ತುಮಕೂರು ಜಿಲ್ಲೆಯ ಕೆಲವೆಡೆ ಇಂದು (ಮೇ 05) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಮಳೆಯ ಜೊತೆಗೆ ಬಿಸಿ ಗಾಳಿಯೂ ಕಾಣಿಸಿಕೊಳ್ಳುವ ಸಂಭವವಿದೆ.

Monsoon 2024: ಈ ಬಾರಿ ಭರ್ಜರಿ ಮುಂಗಾರು ಮಳೆ | 45 ದಿನ ಮೊದಲೇ ‘ಮಳೆ ಮೂಡು’ ಬಿಚ್ಚಿಟ್ಟ ಹವಾಮಾನ ಇಲಾಖೆ

ಮೇ 05ರಂದು ಕೂಡ ಕೆಲವು ಜಿಲ್ಲೆಗಳಲ್ಲಿ ಬಿಸಿ ಗಾಳಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಬೆಂಗಳೂರು ನಗರ, ಮಂಡ್ಯ, ಮೈಸೂರು, ಬೀದರ್, ಬೆಳಗಾವಿ, ಧಾರವಾಡ, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಬಳ್ಳಾರಿ ಜಿಲ್ಲೆಯಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗಿರುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮೇ 07ರಂದು ರಾಜಧಾನಿ ಬೆಂಗಳೂರು ಸೇರಿದಂತೆ 15 ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಈ ಮಳೆ ಯಥಾಪ್ರಕಾರ ರಾಜ್ಯದಾದ್ಯಂತ ವಿಸ್ತರಿಸಲಿದ್ದು, ಮಳೆಯ ತೀವ್ರತೆಯೂ ಹೆಚ್ಚಾಗಲಿದೆ.

ಮೇ 08 ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮೈಸೂರು, ಕೊಡಗು ಮತ್ತು ಮಂಡ್ಯ ಜಿಲ್ಲೆಯಲ್ಲಿ ಬಿರುಗಾಳಿ ಹಾಗೂ ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ.

Male nakshatragalu-2024 : 2024ರ ಮಳೆ ನಕ್ಷತ್ರಗಳು | ಹೇಗಿದೆ ಈ ವರ್ಷದ ಮಳೆಗಾಲ?

WhatsApp Group Join Now
Telegram Group Join Now

Related Posts

error: Content is protected !!