ಕರ್ನಾಟಕದಲ್ಲಿ ಚಳಿ ವಾತಾವಾರಣ (cold weather) ತೀವ್ರವಾಗುತ್ತಿದ್ದು; ತಾಪಮಾನ ಕುಸಿಯುತ್ತಿದೆ. ಬೆಳಗಿನ ವೇಳೆಯಲ್ಲಿ ಬಿಸಿ ವಾತಾವರಣವಿದ್ದು; ಸಂಜೆಯಾಗುತ್ತಿದ್ದ೦ತೆ ಥಂಡಿ (Cold) ವಾತಾವರಣ ಸೃಷ್ಟಿಯಾಗತ್ತಿದೆ. ಇದರ ಜೊತೆಗೆ ಜನವರಿ 30ರಿಂದ ರಾಜ್ಯದ ಕೆಲವೆಡೆ ತುಂತುರು ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನಲ್ಲಿ ಚಳಿ ಹೆಚ್ಚು
ಉತ್ತರ ಒಳನಾಡಿನ ವಿಜಯಪುರದಲ್ಲಿ ಕಳೆದ 24 ಗಂಟೆಗಳಲ್ಲಿ 11.8 ಡಿಗ್ರಿ ಕನಿಷ್ಠ ಉಷ್ಣಾಂಶ ದಾಖಲಾಗಿತ್ತು. ಇದನ್ನು ಹೊರತುಪಡಿಸಿದರೆ ಉತ್ತರ ಒಳನಾಡಿನ ಹಾವೇರಿ 12, ಬೀದರ್ 13, ಗದಗ 13.4, ಬೆಂಗಳೂರು 14, ರಾಯಚೂರು 15, ಬೆಳಗಾವಿ ವಿಮಾನ ನಿಲ್ದಾಣ 15 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಇತ್ತ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಚಳಿ ಇರಲಿದೆ. ದಕ್ಷಿಣ ಒಳನಾಡಿನಲ್ಲಿ ಅಲ್ಪ ಪ್ರಮಾಣದಲ್ಲಿ ಚಳಿಯ ವಾತಾವರಣ ಮುಂದುವರೆಯಲಿದೆ.
ಇದನ್ನೂ ಓದಿ: Legal protection for Loan Repayment : ಬ್ಯಾಂಕ್ ಮತ್ತು ಫೈನಾನ್ಸ್’ಗಳಿಂದ ಪಡೆದ ಸಾಲ ಕಟ್ಟದಿದ್ದರೆ ಏನಾಗುತ್ತದೆ?
ಜನವರಿ 30ರಂದು ಮಳೆ
ಬಂಗಾಳ ಕೊಲ್ಲಿಯ ಮೇಲ್ಮೈಯಲ್ಲಿ ಸುಳಿಗಾಳಿಯ ವಾತಾವರಣ ಸೃಷ್ಟಿಯಾಗಿರುವುದರಿಂದ ಜನವರಿ 30ರಂದು ರಾಜಧಾನಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ರಾಮನಗರ ಜಿಲ್ಲೆಗಳ ವ್ಯಾಪ್ತಿಯಲ್ಲಿ ಮಳೆಯಾಗಲಿದೆ.
ಇನ್ನು ಜನವರಿ 31 ಮತ್ತು ಫೆಬ್ರವರಿ 1ರಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬಾಗಲಕೋಟೆ, ಗದಗ, ಧಾರವಾಡ, ವಿಜಯಪುರ, ಹಾವೇರಿ, ಮೈಸೂರು, ಮಂಡ್ಯ, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ಕೊಡಗು, ಕೋಲಾರ, ಬೆಂಗಳೂರು, ಚಾಮರಾಜನಗರ, ರಾಮನಗರ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
CIBIL Score Complete Details : ಕಡಿಮೆ ಬಡ್ಡಿ ಸಾಲ ಪಡೆಯುವ ಸರಳ ಮಾರ್ಗ