ಸರಕಾರಿ ಯೋಜನೆಹಣಕಾಸು

Rajiv Gandhi Housing Scheme 2024 : ರಾಜೀವ್ ಗಾಂಧಿ ವಸತಿ ನಿಗಮದಿಂದ ಸ್ವಂತ ಮನೆ ಕಟ್ಟಿಕೊಳ್ಳಲು ಸರ್ಕಾರದಿಂದ 6.5 ಲಕ್ಷ ರೂಪಾಯಿ ಸಹಾಯಧನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now
Telegram Group Join Now

Rajiv Gandhi Housing Scheme 2024 : ಮನೆ ಕಟ್ಟಿಕೊಳ್ಳಲು ಸಾಧ್ಯವಾಗದ ಆರ್ಥಿಕವಾಗಿ ದುರ್ಬಲರಾಗಿರುವವರಿಗೆ ಸರ್ಕಾರ ರಾಜೀವ್ ಗಾಂಧಿ ವಸತಿ ಯೋಜನೆಯಡಿ (Rajiv Gandhi Housing Scheme) ಮನೆ ನಿರ್ಮಾಣಕ್ಕೆ ಸಹಾಯಧನ ನೀಡುತ್ತದೆ. ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಇತರೆ ಸಂಪೂರ್ಣ ಮಾಹಿತಿ ಈ ಕೆಳಗಿನ ಲೇಖನದಲ್ಲಿದೆ.

ಪ್ರಧಾನ ಮಂತ್ರಿ ಆವಾಸ್ ಯೋಜನೆ ಮತ್ತು ರಾಜೀವ್ ಗಾಂಧಿ ವಸತಿ ಯೋಜನೆಯ ಅಡಿಯಲ್ಲಿ ಬಡವರಿಗೆ ಸ್ವಂತ ಮನೆ ಕಟ್ಟಿಕೊಳ್ಳಲು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಅರ್ಹ ಫಲಾನುಭವಿಗಳಿಗೆ ಒಟ್ಟು 6.5 ಲಕ್ಷ ರೂಪಾಯಿ ಸಹಾಯಧನ ನೀಡುತ್ತವೆ. ಅಂದರೆ ಒಂದು ಸಾಧಾರಣ ಮನೆ ನಿರ್ಮಾಣದ ಅಂದಾಜು ವೆಚ್ಚ 7.5 ಲಕ್ಷ ರೂಪಾಯಿ ಮೊತ್ತವಾಗಿದ್ದು; ಅದಲ್ಲಿ ಕೇಂದ್ರ ಸರ್ಕಾರವು 3.5 ಲಕ್ಷ ರೂಪಾಯಿ ಮತ್ತು ರಾಜ್ಯ ಸರ್ಕಾರ 3 ಲಕ್ಷ ರೂಪಾಯಿ ಸಹಾಯಧನ ನೀಡಲಿದೆ. ಉಳಿದ 1 ಲಕ್ಷ ರೂಪಾಯಿಯನ್ನು ಫಲಾನುಭವಿಗಳೇ ಪಾವತಿಸಿದರೆ ಮನೆ ನಿರ್ಮಾಣವಾಗಲಿದೆ.

ಅರ್ಜಿ ಸಲ್ಲಿಸಲು ಯಾರು ಅರ್ಹರು?

  • ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಸಲ್ಲಿಸುವ ಅರ್ಜಿದಾರರು ಕಡ್ಡಾಯವಾಗಿ ಮಹಿಳೆಯಾಗಿರಬೇಕು ಹಾಗೂ ಒಂದು ವೇಳೆ ಅರ್ಜಿದಾರರು ವಿಶೇಷ ಚೇತನರ, ಮಾಜಿ ಯೋಧ ಅಥವಾ ಹಿರಿಯ ನಾಗರಿಕರಾಗಿದ್ದಲ್ಲಿ ಪುರುಷರು ಸಹ ಅರ್ಜಿ ಸಲ್ಲಿಸಬಹುದಾಗಿದೆ.
  • ಅರ್ಜಿದಾರನ ಕುಟುಂಬದ ವಾರ್ಷಿಕ ವರಮಾನವು 32,000 ರೂಪಾಯಿಗಿಂತ ಕಡಿಮೆ ಇರಬೇಕು ಮತ್ತು ಕುಟುಂಬವು ವಸತಿ ರಹಿತವಾಗಿದ್ದು ಯಾವುದೇ ಸದಸ್ಯರ ಹೆಸರಿನಲ್ಲಿ ಸ್ವಂತ ಮನೆ ಇರಬಾರದು.
  • ಅರ್ಜಿದಾರನ ಹೆಸರಿನಲ್ಲಿ ಸ್ವಂತ ಖಾಲಿ ಜಾಗವಿದ್ದು ಖಾತೆ ಹೊಂದಿರಬೇಕು.
  • ಅರ್ಜಿ ಸಲ್ಲಿಸುವುದಕ್ಕಿಂತ ಮೊದಲು ಬೇರೆ ಯಾವುದೇ ರೀತಿಯ ಯೋಜನೆ ಅಥವಾ ಇಲಾಖೆಯಿಂದ ವಸತಿ ಯೋಜನೆಯ ಸೌಲಭ್ಯ ಪಡೆದಿರಬಾರದು.
  • ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಸೌಲಭ್ಯ ಪಡೆಯಲು ಕೇಂದ್ರ ಸರ್ಕಾರದ 2011ರ ಸಾಮಾಜಿಕ ಆರ್ಥಿಕ ಮತ್ತು ಜನಗಣತಿಯ ಪಟ್ಟಿಯಲ್ಲಿ ಹೆಸರು ಇರಬೇಕು.

PM – Surya Ghar Muft Bijli Jojana : ಮನೆಮನೆಗೂ ಉಚಿತ ಸೋಲಾರ್ ವಿದ್ಯುತ್ | ಪ್ರಧಾನ್‌ಮಂತ್ರಿ ಸೂರ್ಯ ಘರ್ ಯೋಜನೆಗೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್

ಆನ್‌ಲೈನ್ ಅರ್ಜಿ ಸಲ್ಲಿಸುವ ವಿಧಾನ

ಈ ಯೋಜನೆಗೆ ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ. ನಂತರ ಅಲ್ಲಿ ಕೇಳಲಾಗುವ ನಿಮ್ಮ ವಿಧಾನಸಭಾ ಕ್ಷೇತ್ರ ಹಾಗೂ ಪ್ರದೇಶವನ್ನು ಆಯ್ಕೆ ಮಾಡಿ. ನಂತರ ನಿಮಗೆ ಸಂಬ೦ಧಿಸಿದ ವಲಯ, ವಾರ್ಡ್ ಸಂಖ್ಯೆ ಹಾಗೂ ಪ್ರಸ್ತುತ ವಿಳಾಸದ ಜೊತೆಗೆ ಪೋಸ್ಟ್ ಪಿನ್‌ಕೋಡ್ ನಮೂದಿಸಿ ಮುಂದುವರೆಯಿರಿ.

ನ೦ತರ ಅಲ್ಲಿ ನಿಮಗೆ ಆಧಾರ್ ಸಂಖ್ಯೆ, ಆಧಾರ್’ನಲ್ಲಿರುವಂತೆ ಹೆಸರನ್ನು ನಮೂದಿಸಲು ಕೇಳುತ್ತದೆ. ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್’ನಲ್ಲಿರುವಂತೆ ನಿಮ್ಮ ಹೆಸರನ್ನು ನಮೂದಿಸಿ ಮುಂದುವರೆಯಿರಿ.

ಬಳಿಕ ರೇಷನ್ ಕಾರ್ಡ್ ನಂಬರ್ ನಮೂದಿಸಬೇಕು. ಆಗ ಪಡಿತರ ಚೀಟಿಯಲ್ಲಿರುವ ಕುಟುಂಬ ಸದಸ್ಯರ ವಿವರಗಳು ಕಾಣಿಸಿಕೊಳ್ಳುತ್ತವೆ. ಯಾವ ಸದಸ್ಯರ ಹೆಸರಿನಲ್ಲಿ ಅರ್ಜಿ ಸಲ್ಲಿಸಬೇಕು ಎಂಬುವುದನ್ನು ಆ ಹೆಸರಿನ ಮುಂದೆ ಇರುವ ಚೆಕ್ ಬಾಕ್ಸ್ ಅನ್ನು ಆಯ್ಕೆ ಮಾಡಿ. ಅರ್ಜಿದಾರನ ಸ್ವ ವಿವರಗಳನ್ನು ನಮೂದಿಸಿ, ‘ಮುಂದುವರೆಯಿರಿ’ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ.

ಬಳಿಕ ಅರ್ಜಿದಾರನ ಜಾತಿ ಮತ್ತು ಆದಾಯ ಪತ್ರದ ಆರ್.ಡಿ ಸಂಖ್ಯೆಯನ್ನು ನಮೂದಿಸಬೇಕು. ಮುಖ್ಯವಾದ ಮಾಹಿತಿ ಏನೆಂದರೆ ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಜಿದಾರನ ವಾರ್ಷಿಕ ಆದಾಯವು ಮೂರು ಲಕ್ಷಕ್ಕಿಂತ ಕಡಿಮೆ ಇರಬೇಕು. ಇಂಥವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

ಸಾರಿಗೆ ಇಲಾಖೆ ವೆಹಿಕಲ್ ಇನ್ಸ್’ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಎಸ್‌ಎಸ್‌ಎಲ್‌ಸಿ, ಡಿಪ್ಲೋಮಾ ಪಾಸಾಗಿದ್ರೆ ಅರ್ಜಿ ಹಾಕಿ KPSC Motor Vehicle Inspector Recruitment 2024

ಅರ್ಜಿ ಸಲ್ಲಿಸುವ ಅರ್ಜಿದಾರನು ಯಾವುದೇ ಮೀಸಲಾತಿಯಲ್ಲಿ ಅರ್ಜಿ ಸಲ್ಲಿಸಲು ಇಚ್ಚಿಸಿದಲ್ಲಿ ಪೂರಕ ಮಾಹಿತಿಯನ್ನು ನಮೂದಿಸುವುದು ಕಡ್ಡಾಯವಾಗಿರುತ್ತದೆ. ಅರ್ಜಿದಾರನ ಉದ್ಯೋಗ ಸ್ಥಿತಿಯನ್ನು ಆಯ್ಕೆ ಮಾಡಿ ಸೇವ್ ಬಟನ್ ಮೇಲೆ ಕ್ಲಿಕ್ ಮಾಡಿ.

ಅರ್ಜಿಯನ್ನು ಸೇವ್ ಮಾಡಿದ ಮೇಲೆ ಅರ್ಜಿದಾರರು ಅರ್ಜಿಯಲ್ಲಿ ನಮೂದಿಸಿದ ಮೊಬೈಲ್ ಸಂಖ್ಯೆಗೆ ಒಟಿಪಿ ಬರುತ್ತದೆ. ಅದನ್ನು ನಮೂದಿಸಿ ಮುಂದುವರೆಯಿರಿ. ಒಟಿಪಿ ನಮೂದಿಸಿದ ನಂತರ ಆನ್ಲೈನ್ ಪೇಮೆಂಟ್ ಗೆ (Online payment) ಅಥವಾ ಚಲನ್ ಪುಟ ತೆರೆಯುತ್ತದೆ.

ಅರ್ಜಿದಾರರ ಅರ್ಜಿಯ ಸ್ಥಿತಿಯ ಬಗ್ಗೆ ರಾಜೀವ್ ಗಾಂಧಿ ವಸತಿ ನಿಗಮದಿಂದ ಸಂದೇಶವನ್ನು ಅರ್ಜಿದಾರರ ಮೊಬೈಲ್ ಸಂಖ್ಯೆಗೆ ರವಾನಿಸಲಾಗುತ್ತದೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಬ್ಯಾಂಕ್ ಖಾತೆ ಪುಸ್ತಕ
  • ಆಧಾರ್ ಲಿಂಕ್ ಇರುವ ಮೊಬೈಲ್ ಸಂಖ್ಯೆ

ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ : Click here
ಸಂಪೂರ್ಣ ಮಾಹಿತಿಯುಳ್ಳ ಮಾರ್ಗಸೂಚಿ : Download

Bara Parihara 2024 : ರೈತರ ಖಾತೆಗೆ ಬರ ಪರಿಹಾರದ ಹಣ ಜಮಾ ಆಗದೇ ಇರುವುದಕ್ಕೆ ಕಾರಣಗಳು ಇಲ್ಲಿವೆ…

WhatsApp Group Join Now
Telegram Group Join Now

Related Posts

error: Content is protected !!