ಸರಕಾರಿ ಯೋಜನೆಹಣಕಾಸು

Rajiv Gandhi Housing Scheme 2024 : ಸ್ವಂತ ಮನೆ ಕಟ್ಟಿಕೊಳ್ಳಲು ಸರ್ಕಾರದಿಂದ 6.5 ಲಕ್ಷ ರೂಪಾಯಿ ಸಹಾಯಧನ | ರಾಜೀವ್ ಗಾಂಧಿ ವಸತಿ ನಿಗಮದಿಂದ ಅರ್ಜಿ ಆಹ್ವಾನ

WhatsApp Group Join Now
Telegram Group Join Now

ರಾಜೀವ್ ಗಾಂಧಿ ವಸತಿ ಯೋಜನೆ ಅಡಿಯಲ್ಲಿ ಸ್ವಂತ ಮನೆ ಕಟ್ಟಿಕೊಳ್ಳಲು ಸರ್ಕಾರವು 6.5 ಲಕ್ಷ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಿದೆ. ಈ ಯೋಜನೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

Rajiv Gandhi Housing Scheme 2024 : ಮನೆ ಕಟ್ಟಿಕೊಳ್ಳಲು ಸಾಧ್ಯವಾಗದ ಆರ್ಥಿಕವಾಗಿ ದುರ್ಬಲರಾಗಿರುವವರಿಗೆ ಸರ್ಕಾರ ರಾಜೀವ್ ಗಾಂಧಿ ವಸತಿ ಯೋಜನೆಯಡಿ ಮನೆ ನಿರ್ಮಾಣಕ್ಕೆ ಸಹಾಯಧನ (Subsidy for house construction) ನೀಡುತ್ತದೆ. ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಇತರೆ ಸಂಪೂರ್ಣ ಮಾಹಿತಿ ಈ ಕೆಳಗಿನ ಲೇಖನದಲ್ಲಿದೆ.

ಪ್ರಧಾನ ಮಂತ್ರಿ ಆವಾಸ್ ಯೋಜನೆ (Pradhan Mantri Awas Yojana) ಮತ್ತು ರಾಜೀವ್ ಗಾಂಧಿ ವಸತಿ ಯೋಜನೆಯ (Rajiv Gandhi Housing Scheme) ಅಡಿಯಲ್ಲಿ ಬಡವರಿಗೆ ಸ್ವಂತ ಮನೆ ಕಟ್ಟಿಕೊಳ್ಳಲು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಅರ್ಹ ಫಲಾನುಭವಿಗಳಿಗೆ ಒಟ್ಟು 6.5 ಲಕ್ಷ ರೂಪಾಯಿ ಸಹಾಯಧನ ನೀಡುತ್ತವೆ. ಅಂದರೆ ಒಂದು ಸಾಧಾರಣ ಮನೆ ನಿರ್ಮಾಣದ ಅಂದಾಜು ವೆಚ್ಚ 7.5 ಲಕ್ಷ ರೂಪಾಯಿ ಮೊತ್ತವಾಗಿದ್ದು; ಅದಲ್ಲಿ ಕೇಂದ್ರ ಸರ್ಕಾರವು 3.5 ಲಕ್ಷ ರೂಪಾಯಿ ಮತ್ತು ರಾಜ್ಯ ಸರ್ಕಾರ 3 ಲಕ್ಷ ರೂಪಾಯಿ ಸಹಾಯಧನ ನೀಡಲಿದೆ. ಉಳಿದ 1 ಲಕ್ಷ ರೂಪಾಯಿಯನ್ನು ಫಲಾನುಭವಿಗಳೇ ಪಾವತಿಸಿದರೆ ಮನೆ ನಿರ್ಮಾಣವಾಗಲಿದೆ.

ಇದನ್ನೂ ಓದಿ: Mgnrega Personal Work Subsidy : ದನದ ಕೊಟ್ಟಿಗೆ, ಕುರಿ-ಮೇಕೆ ಶೆಡ್, ಕೃಷಿ ಹೊಂಡ, ಬದು ನಿರ್ಮಾಣಕ್ಕೆ ಸಹಾಯಧನ | ₹5 ಲಕ್ಷದ ವರೆಗೆ ನೆರವು

ಅರ್ಜಿ ಸಲ್ಲಿಸಲು ಯಾರು ಅರ್ಹರು?

  • ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಸಲ್ಲಿಸುವ ಅರ್ಜಿದಾರರು ಕಡ್ಡಾಯವಾಗಿ ಮಹಿಳೆಯಾಗಿರಬೇಕು ಹಾಗೂ ಒಂದು ವೇಳೆ ಅರ್ಜಿದಾರರು ವಿಶೇಷ ಚೇತನರ, ಮಾಜಿ ಯೋಧ ಅಥವಾ ಹಿರಿಯ ನಾಗರಿಕರಾಗಿದ್ದಲ್ಲಿ ಪುರುಷರು ಸಹ ಅರ್ಜಿ ಸಲ್ಲಿಸಬಹುದಾಗಿದೆ.
  • ಅರ್ಜಿದಾರನ ಕುಟುಂಬದ ವಾರ್ಷಿಕ ವರಮಾನವು 32,000 ರೂಪಾಯಿಗಿಂತ ಕಡಿಮೆ ಇರಬೇಕು ಮತ್ತು ಕುಟುಂಬವು ವಸತಿ ರಹಿತವಾಗಿದ್ದು ಯಾವುದೇ ಸದಸ್ಯರ ಹೆಸರಿನಲ್ಲಿ ಸ್ವಂತ ಮನೆ ಇರಬಾರದು.
  • ಅರ್ಜಿದಾರನ ಹೆಸರಿನಲ್ಲಿ ಸ್ವಂತ ಖಾಲಿ ಜಾಗವಿದ್ದು ಖಾತೆ ಹೊಂದಿರಬೇಕು.
  • ಅರ್ಜಿ ಸಲ್ಲಿಸುವುದಕ್ಕಿಂತ ಮೊದಲು ಬೇರೆ ಯಾವುದೇ ರೀತಿಯ ಯೋಜನೆ ಅಥವಾ ಇಲಾಖೆಯಿಂದ ವಸತಿ ಯೋಜನೆಯ ಸೌಲಭ್ಯ ಪಡೆದಿರಬಾರದು.
  • ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಸೌಲಭ್ಯ ಪಡೆಯಲು ಕೇಂದ್ರ ಸರ್ಕಾರದ 2011ರ ಸಾಮಾಜಿಕ ಆರ್ಥಿಕ ಮತ್ತು ಜನಗಣತಿಯ ಪಟ್ಟಿಯಲ್ಲಿ ಹೆಸರು ಇರಬೇಕು.

ಇದನ್ನೂ ಓದಿ: Horticulture Subsidy Schemes : ತೋಟಗಾರಿಕೆ ಇಲಾಖೆಯ ಸಬ್ಸಿಡಿ ಯೋಜನೆಗಳು | ರೈತರಿಗಾಗಿಯೇ ಇವೆ ಈ ಹಣಕಾಸು ನೆರವಿನ ಯೋಜನೆಗಳು

ಆನ್‌ಲೈನ್ ಅರ್ಜಿ ಸಲ್ಲಿಸುವ ವಿಧಾನ

ಈ ಯೋಜನೆಗೆ ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ. ನಂತರ ಅಲ್ಲಿ ಕೇಳಲಾಗುವ ನಿಮ್ಮ ವಿಧಾನಸಭಾ ಕ್ಷೇತ್ರ ಹಾಗೂ ಪ್ರದೇಶವನ್ನು ಆಯ್ಕೆ ಮಾಡಿ. ನಂತರ ನಿಮಗೆ ಸಂಬ೦ಧಿಸಿದ ವಲಯ, ವಾರ್ಡ್ ಸಂಖ್ಯೆ ಹಾಗೂ ಪ್ರಸ್ತುತ ವಿಳಾಸದ ಜೊತೆಗೆ ಪೋಸ್ಟ್ ಪಿನ್‌ಕೋಡ್ ನಮೂದಿಸಿ ಮುಂದುವರೆಯಿರಿ.

ನ೦ತರ ಅಲ್ಲಿ ನಿಮಗೆ ಆಧಾರ್ ಸಂಖ್ಯೆ, ಆಧಾರ್’ನಲ್ಲಿರುವಂತೆ ಹೆಸರನ್ನು ನಮೂದಿಸಲು ಕೇಳುತ್ತದೆ. ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್’ನಲ್ಲಿರುವಂತೆ ನಿಮ್ಮ ಹೆಸರನ್ನು ನಮೂದಿಸಿ ಮುಂದುವರೆಯಿರಿ.

ಬಳಿಕ ರೇಷನ್ ಕಾರ್ಡ್ ನಂಬರ್ ನಮೂದಿಸಬೇಕು. ಆಗ ಪಡಿತರ ಚೀಟಿಯಲ್ಲಿರುವ ಕುಟುಂಬ ಸದಸ್ಯರ ವಿವರಗಳು ಕಾಣಿಸಿಕೊಳ್ಳುತ್ತವೆ. ಯಾವ ಸದಸ್ಯರ ಹೆಸರಿನಲ್ಲಿ ಅರ್ಜಿ ಸಲ್ಲಿಸಬೇಕು ಎಂಬುವುದನ್ನು ಆ ಹೆಸರಿನ ಮುಂದೆ ಇರುವ ಚೆಕ್ ಬಾಕ್ಸ್ ಅನ್ನು ಆಯ್ಕೆ ಮಾಡಿ. ಅರ್ಜಿದಾರನ ಸ್ವ ವಿವರಗಳನ್ನು ನಮೂದಿಸಿ, ‘ಮುಂದುವರೆಯಿರಿ’ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ.

ಇದನ್ನೂ ಓದಿ: WCD Karnataka Anganwadi Recruitment 2024 : ಅಂಗನವಾಡಿ ಟೀಚರ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಮೊಬೈಲ್‌ನಲ್ಲೇ ಅರ್ಜಿ ಸಲ್ಲಿಸಿ…

ಬಳಿಕ ಅರ್ಜಿದಾರನ ಜಾತಿ ಮತ್ತು ಆದಾಯ ಪತ್ರದ ಆರ್.ಡಿ ಸಂಖ್ಯೆಯನ್ನು ನಮೂದಿಸಬೇಕು. ಮುಖ್ಯವಾದ ಮಾಹಿತಿ ಏನೆಂದರೆ ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಜಿದಾರನ ವಾರ್ಷಿಕ ಆದಾಯವು ಮೂರು ಲಕ್ಷಕ್ಕಿಂತ ಕಡಿಮೆ ಇರಬೇಕು. ಇಂಥವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

ಅರ್ಜಿ ಸಲ್ಲಿಸುವ ಅರ್ಜಿದಾರನು ಯಾವುದೇ ಮೀಸಲಾತಿಯಲ್ಲಿ ಅರ್ಜಿ ಸಲ್ಲಿಸಲು ಇಚ್ಚಿಸಿದಲ್ಲಿ ಪೂರಕ ಮಾಹಿತಿಯನ್ನು ನಮೂದಿಸುವುದು ಕಡ್ಡಾಯವಾಗಿರುತ್ತದೆ. ಅರ್ಜಿದಾರನ ಉದ್ಯೋಗ ಸ್ಥಿತಿಯನ್ನು ಆಯ್ಕೆ ಮಾಡಿ ಸೇವ್ ಬಟನ್ ಮೇಲೆ ಕ್ಲಿಕ್ ಮಾಡಿ.

ಅರ್ಜಿಯನ್ನು ಸೇವ್ ಮಾಡಿದ ಮೇಲೆ ಅರ್ಜಿದಾರರು ಅರ್ಜಿಯಲ್ಲಿ ನಮೂದಿಸಿದ ಮೊಬೈಲ್ ಸಂಖ್ಯೆಗೆ ಒಟಿಪಿ ಬರುತ್ತದೆ. ಅದನ್ನು ನಮೂದಿಸಿ ಮುಂದುವರೆಯಿರಿ. ಒಟಿಪಿ ನಮೂದಿಸಿದ ನಂತರ ಆನ್ಲೈನ್ ಪೇಮೆಂಟ್ ಗೆ (Online payment) ಅಥವಾ ಚಲನ್ ಪುಟ ತೆರೆಯುತ್ತದೆ.

ಅರ್ಜಿದಾರರ ಅರ್ಜಿಯ ಸ್ಥಿತಿಯ ಬಗ್ಗೆ ರಾಜೀವ್ ಗಾಂಧಿ ವಸತಿ ನಿಗಮದಿಂದ ಸಂದೇಶವನ್ನು ಅರ್ಜಿದಾರರ ಮೊಬೈಲ್ ಸಂಖ್ಯೆಗೆ ರವಾನಿಸಲಾಗುತ್ತದೆ.

 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಬ್ಯಾಂಕ್ ಖಾತೆ ಪುಸ್ತಕ
  • ಆಧಾರ್ ಲಿಂಕ್ ಇರುವ ಮೊಬೈಲ್ ಸಂಖ್ಯೆ

ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ : Click here
ಸಂಪೂರ್ಣ ಮಾಹಿತಿಯುಳ್ಳ ಮಾರ್ಗಸೂಚಿ : Download 
ಸಹಾಯವಾಣಿ : 91-080-22106888, 91-080-23118888, 91-080-22247317

ಇದನ್ನೂ ಓದಿ: Kisan Credit Card loan : ಪಶುಪಾಲಕರಿಗೆ ಕಡಿಮೆ ಬಡ್ಡಿದರದಲ್ಲಿ ಆರ್ಥಿಕ ನೆರವು | ಹೈನುಗಾರಿಕೆ, ಕುರಿ-ಮೇಕೆ ಸಾಕಣೆಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಸಹಾಯಧನ

WhatsApp Group Join Now
Telegram Group Join Now

Related Posts

error: Content is protected !!