ಸರಕಾರಿ ಯೋಜನೆ

bara parihara release : ಈ ರೈತರಿಗೆ ಬರ ಪರಿಹಾರ ಹಣ ಜಮಾ | ನಿಮ್ಮ ಹೆಸರನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ…

WhatsApp Group Join Now
Telegram Group Join Now

bara parihara release

ರಾಜ್ಯ ಸರಕಾರ ಮೊದಲ ಕಂತಿನ ಬರ ಪರಿಹಾರ ಹಣವನ್ನು ರೈತರ ಖಾತೆಗೆ ನೇರವಾಗಿ ಜಮಾ ಮಾಡಿದೆ. ಫಲಾನುಭವಿ ರೈತರ ಪಟ್ಟಿ ಇಲ್ಲಿದೆ…

ಕಡೆಗೂ ಬರ ಪರಿಹಾರದ ಮೊದಲ ಕಂತಿನ ಹಣ ರೈತರ ಖಾತೆಗೆ ಜಮಾ ಆಗಿದೆ. ರಾಜ್ಯ ಸರಕಾರ ಈಚೆಗೆ ಘೋಷಿಸಿದಂತೆ ಬರ ಪರಿಹಾರವಾಗಿ ರೈತರ ಖಾತೆಗೆ ಹಣ ಸಂದಾಯ ಮಾಡಿದ್ದು; ಫಲಾನುಭವಿ ರೈತರ ಪಟ್ಟಿಯನ್ನು ಗ್ರಾಮ ಪಂಚಾಯತಿಯಲ್ಲಿ ಪ್ರಕಟಿಸಲಾಗಿದೆ. ಪಟ್ಟಿಯಲ್ಲಿ ಹೆಸರಿಲ್ಲದ ರೈತರು ಏನು ಮಾಡಬೇಕು? ಎಂಬ ಬಗ್ಗೆಯೂ ಕಂದಾಯ ಸಚಿವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Udyoga Mela Govt of Karnataka 2024 : ಸರಕಾರಿ ಉದ್ಯೋಗ ಮೇಳದಲ್ಲಿ ಭರ್ಜರಿ ಉದ್ಯೋಗಾವಕಾಶ | ಎಲ್ಲಾ ರೀತಿ ವಿದ್ಯಾರ್ಹತೆಯ ಉದ್ಯೋಗಾಕಾಂಕ್ಷಿಗಳಿಗೂ ಅವಕಾಶ

ಜಮೆಯಾದ ಪರಿಹಾರ ಹಣವೆಷ್ಟು?

ರಾಜ್ಯಾದ್ಯಂತ ಬರ ಪೀಡಿತ ಪ್ರದೇಶಗಳಲ್ಲಿ ಪ್ರತಿ ರೈತರಿಗೆ ತಲಾ 2,000 ರೂಪಾಯಿಯಂತೆ ಒಟ್ಟು 33 ಲಕ್ಷ ರೈತರಿಗೆ ಈವರೆಗೆ 628 ಕೋಟಿ ರೂಪಾಯಿ ಹಣವನ್ನು ಪರಿಹಾರದ ರೂಪದಲ್ಲಿ ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ತಿಳಿಸಿದ್ದಾರೆ.

ಕಳೆದ ಫೆಬ್ರವರಿ 11ರಂದು ಮಾತನಾಡಿದ ಸಚಿವರು ರಾಜ್ಯದ ಭಾಗಶಃ ರೈತರಿಗೆ ಮೊದಲ ಕಂತಿನ ಪರಿಹಾರ ಬಿಡುಗಡೆ ಮಾಡಿದ್ದು, 1.6 ಲಕ್ಷ ರೈತರ ಬ್ಯಾಂಕ್ ಖಾತೆಗಳನ್ನು ಸರಳೀಕರಿಸುವ ಪ್ರಕ್ರಿಯೆ ನಡೆಯುತ್ತಿದೆ. ಅದು ಮುಗಿದ ನಂತರ ಈ ರೈತರಿಗೂ ಸರ್ಕಾರ ಹಣ ಬಿಡುಗಡೆ ಮಾಡಲಿದೆ ಎಂದಿದ್ದಾರೆ.

ಇದನ್ನೂ ಓದಿ: Coconut Farming : ಮೂರೇ ವರ್ಷಕ್ಕೆ ಭರ್ಜರಿ ಇಳುವರಿ ಕೊಡುವ ಗಿಡ್ಡ ತಳಿ ತೆಂಗು | Malaysian Green Dwarf High Yielding Coconut

ನ್ಯಾಯಯುತ ಪರಿಹಾರಕ್ಕೆ ಕಠಿಣ ಕ್ರಮ

ಹಿಂದಿನ ಹಲವು ಬಾರಿ ಬರ ಪರಿಹಾರ, ಬೆಳೆಹಾನಿ ಪರಿಹಾರ ಸೇರಿದಂತೆ ಸರಕಾರದಿಂದ ವಿತರಣೆಯಾಗುವ ಪರಿಹಾರ ಹಣ ಸಾಕಷ್ಟು ದುರುಪಯೋಗವಾಗಿದೆ. ಈ ದುರುಪಯೋಗವನ್ನು ತಪ್ಪಿಸುವ ಹಿನ್ನಲೆಯಲ್ಲಿ ಸರಕಾರ ಈ ಬಾರಿ ಹಲವು ಕಠಿಣ ನಿಯಮಗಳನ್ನು ಜಾರಿಗೊಳಿಸಿತ್ತು.

ಅರ್ಹ ರೈತರಿಗೆ ನ್ಯಾಯವಾಗಿ ಪರಿಹಾರ ತಲುಪಿಸಬೇಕು ಎಂಬ ಉದ್ದೇಶದಿಂದ ಸರಕಾರ ಫ್ರೂಟ್ಸ್ ತಂತ್ರಾ೦ಶದಲ್ಲಿ ರೈತರ ನೋಂದಣಿಯನ್ನು ಕಡ್ಡಾಯಗೊಳಿಸಿತ್ತು. ಆ ಪ್ರಕಾರ ನೋಂದಣಿಯಾದ ಅಷ್ಟೂ ರೈತರ ಖಾತೆಗೆ ಇದೀಗ ಫ್ರೂಟ್ಸ್ ತಂತ್ರಾ೦ಶದ ಮೂಲಕ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಪರಿಹಾರ ಹಣ ಜಮಾ ಮಾಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ: Animal Husbandry Success formulas : ಹೊಸದಾಗಿ ಪಶುಪಾಲನೆ ಮಾಡುವವರಿಗೆ ಕಿವಿಮಾತು | ಪಶುಪಾಲನೆಯಲ್ಲಿ ಹೆಚ್ಚಿನ ಆದಾಯ ಗಳಿಕೆಗೆ ಪಾಲಿಸಬೇಕಾದ ಸೂತ್ರಗಳು…

ಗ್ರಾಮ ಪಂಚಾಯ್ತಿಯಲ್ಲಿ ರೈತರ ಪಟ್ಟಿ

ಅರ್ಹ ರೈತರಿಗೆ ಬರ ಪರಿಹಾರ ತಲುಪಿಸಲು ವ್ಯವಸ್ಥೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವ ಹಿತದೃಷ್ಟಿಯಿಂದ ಗ್ರಾಮ ಪಂಚಾಯತಿಯಲ್ಲಿ ಬರ ಪರಿಹಾರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕಂದಾಯ ಸಚಿವರು ತಿಳಿಸಿದ್ದಾರೆ.

ರೈತರು ಸಂಬAಧಿಸಿದ ಗ್ರಾಮ ಪಂಚಾಯಿತಿಗಳಲ್ಲಿ ಪಟ್ಟಿ ಪರಿಶೀಲಿಸಬಹುದು. ಪಟ್ಟಿಯಿಂದ ಹೆಸರು ಬಿಟ್ಟು ಹೋಗಿದ್ದರೆ ಅಂತಹ ರೈತರು ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಕಂದಾಯ ಇಲಾಖೆಯ ಸ್ಥಳೀಯ ಕಚೇರಿಗೆ ಭೇಟಿ ನೀಡಿ ಸೇರ್ಪಡೆ ಮಾಡಿಸಿಕೊಳ್ಳಬೇಕು ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: PMFME – PM Micro Food Processing Scheme : ಸಣ್ಣ ಉದ್ಯಮ ಸ್ಥಾಪನೆಗೆ ₹15 ಲಕ್ಷ ರೂಪಾಯಿ ಸಹಾಯಧನ : ರೈತರು, ಮಹಿಳೆಯರಿಗೆ ಸುವರ್ಣಾವಕಾಶ

ಈ ರೈತರ ಖಾತೆಗೆ ಹಣ ಜಮಾ

ಎಫ್‌ಐಡಿ ಹೊಂದಿರುವ ರೈತರಿಗೆ ಮಾತ್ರ ಈ ಪರಿಹಾರ ಜಮಾ ಆಗಿದೆ. ಇನ್ನೂ ಎಫ್‌ಐಡಿ ಹೊಂದಿರದ ರೈತರು ಕೂಡಲೇ ಫ್ರೂಟ್ಸ್ ನೋಂದಣಿ ಮಾಡಿಕೊಳ್ಳುವುದು ಉತ್ತಮ.ರೈತರು ಫ್ರೂಟ್ಸ್ ತಂತ್ರಾ೦ಶಕ್ಕೆ ಭೇಟಿ ನೀಡಿ ಆಧಾರ್ ನಂಬರ್ ಹಾಕಿ ತಮ್ಮ ನೊಂದಣಿಯನ್ನು ಖಚಿತಪಡಿಸಿಕೊಳ್ಳಬಹುದು.

ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ. ಆಗ ಫ್ರೂಟ್ಸ್ ತಂತ್ರಾ೦ಶದ Farmer Details ಪುಟ ತೆರೆದಕೊಳ್ಳುತ್ತದೆ. ಅಲ್ಲಿ ಫಲಾನುಭವಿ ರೈತರು ತಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿ Search ಬಟನ್ ಮೇಲೆ ಕ್ಲಿಕ್ ಮಾಡಿದರೆ ಹೊಸ ಪುಟ ತೆರೆದುಕೊಳ್ಳುತ್ತದೆ.

ಅದರಲ್ಲಿ 13 ಸಂಖ್ಯೆಯ FruitID FID1104xxxxxxxxx ಹೀಗೆ ಕಾಣಿಸುತ್ತದೆ. ಅದರೆ ಕೆಳಗೆ ರೈತರ ಹೆಸರು ತೋರಿಸಿದರೆ ನೀವು ಬರ ಪರಿಹಾರ ಪಡೆಯಲು ಅರ್ಹರು ಎಂದರ್ಥ. ಅಂದರೆ ನಿಮಗೆ ಖಚಿತವಾಗಿಯೂ ಮೊದಲ ಕಂತಿನ 2000 ರೂಪಾಯಿ ಪರಿಹಾರ ಜಮಾ ಆಗಿದೆ.

ರೈತರೇ ನಿಮ್ಮ ಆಧಾರ್ ನಂಬರ್ ಹಾಕಿ ಬರ ಪರಿಹಾರ ಖಚಿತಪಡಿಸಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:HDFC Bank Dairy Farming Loan : ಹೈನುಗಾರಿಕೆ, ಕೋಳಿ ಸಾಕಣೆ, ಮೀನುಗಾರಿಕೆಗೆ 10 ಲಕ್ಷದ ವರೆಗೂ ಮೇಲಾಧಾರ ಮುಕ್ತ ಸಾಲ ಸೌಲಭ್ಯ!

Google Pay loan up to 8 lakh : 2 ನಿಮಿಷದಲ್ಲಿ ಸಿಗುತ್ತೆ ₹8 ಲಕ್ಷ ರೂಪಾಯಿ ವರೆಗೆ ಗೂಗಲ್ ಪೇ ಲೋನ್ | ಮೊಬೈಲ್‌ನಲ್ಲೇ ಅರ್ಜಿ ಸಲ್ಲಿಸಿ…

WhatsApp Group Join Now
Telegram Group Join Now

Related Posts

error: Content is protected !!