ಉದ್ಯೋಗ

RPF Constable Recruitment 2024 : SSLC ಪಾಸಾದವರಿಗೆ ಕಾನ್‌ಸ್ಟೇಬಲ್ ಮತ್ತು ಸಬ್ಇನ್ಸ್‌ಪೆಕ್ಟರ್ ಹುದ್ದೆಗಳ ಬೃಹತ್ ನೇಮಕಾತಿ

WhatsApp Group Join Now
Telegram Group Join Now

RPF Constable Recruitment 2024 ಭಾರತೀಯ ರೈಲ್ವೆ ರಕ್ಷಣಾ ಪಡೆಯಲ್ಲಿ ಖಾಲಿ ಇರುವ 4 ಸಾವಿರಕ್ಕೂ ಅಧಿಕ ಕಾನ್‌ಸ್ಟೇಬಲ್ ಮತ್ತು ಸಬ್ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ…

ಭಾರತೀಯ ರೈಲ್ವೆ ಇಲಾಖೆಯು ಒಂದರ ನಂತರ ಮತ್ತೊಂದು ನೇಮಕಾತಿಯನ್ನು ಮಾಡಿಕೊಳ್ಳುತ್ತಲೇ ಇದೆ. 9,000ಕ್ಕೂ ಹೆಚ್ಚು ಟೆಕ್ನಿಷಿಯನ್ (Technician) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದ ಬೆನ್ನಲ್ಲೇ ಇದೀಗ 4,000ಕ್ಕೂ ಹೆಚ್ಚು ಕಾನ್‌ಸ್ಟೇಬಲ್ ಮತ್ತು ಸಬ್ಇನ್ಸ್‌ಪೆಕ್ಟರ್ ಹುದ್ದೆಗಳ ಬೃಹತ್ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ.

10ನೇ ತರಗತಿ ಪಾಸಾಗಿ ಪೊಲೀಸ್ ಕಾನ್’ಸ್ಟೇಬಲ್ ಆಗಿ ಕೇಂದ್ರ ಸರ್ಕಾರಿ ಉದ್ಯೋಗ ಮಾಡಬಯಸುವ ಉದ್ಯೋಗ ಆಕಾಂಕ್ಷಿಗಳಿಗೆ ಇದೊಂದು ಸಿಹಿ ಸುದ್ದಿಯಾಗಿದೆ. ಈ ನೇಮಕಾತಿಯಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಎಲ್ಲಾ ಅರ್ಹತೆಗಳನ್ನು ಪರಿಶೀಲಿಸಿಕೊಂಡ ನಂತರ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: KLA Recruitment 2024 : ಎಸ್ಸೆಎಸ್ಸೆಲ್ಸಿ ಪಾಸಾದವರಿಂದ ಕರ್ನಾಟಕ ವಿಧಾನ ಪರಿಷತ್ ಹುದ್ದೆಗಳಿಗೆ ಅರ್ಜಿ ಆಹ್ವಾನ | 42,000 ರೂಪಾಯಿ ಸಂಬಳ

RPF Constable Recruitment 2024 ನೇಮಕಾತಿಯ ಸಂಕ್ಷಿಪ್ತ ವಿವರ

 • ನೇಮಕಾತಿಯ ಇಲಾಖೆ : ರೈಲ್ವೆ ನೇಮಕಾತಿ ಮಂಡಳಿ (Railway Recruitment Board)
 • ಒಟ್ಟು ಖಾಲಿ ಹುದ್ದೆಗಳು : 4,660 ಹುದ್ದೆಗಳು
 • ಖಾಲಿ ಹುದ್ದೆಗಳ ವಿವರ : ಕಾನ್‌ಸ್ಟೇಬಲ್ ಮತ್ತು ಸಬ್ಇನ್ಸ್‌ಪೆಕ್ಟರ್ ಹುದ್ದೆಗಳು
 • ಅರ್ಜಿ ಸಲ್ಲಿಕೆ ಪ್ರಕ್ರಿಯೆ : ಆನ್‌ಲೈನ್ ಮುಖಾಂತರ
 • ಉದ್ಯೋಗ ಸ್ಥಳ : ಭಾರತದಾದ್ಯಂತ

ಭಾರತೀಯ ರೈಲ್ವೆ ರಕ್ಷಣಾ ಪಡೆಯಲ್ಲಿ ಖಾಲಿ ಇರುವ ಸಬ್ಇನ್ಸ್‌ಪೆಕ್ಟರ್ ಮತ್ತು ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಆಸಕ್ತ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಹುದ್ದೆಗಳ ವಿವರಗಳು, ಶೈಕ್ಷಣಿಕ ಅರ್ಹತೆಗಳು, ವಯೋಮಿತಿ ಅರ್ಹತೆಗಳು, ಆಯ್ಕೆಯ ವಿಧಾನ, ಅರ್ಜಿ ಶುಲ್ಕ ವಿವರ ಹಾಗೂ ಅರ್ಜಿ ಸಲ್ಲಿಸುವ ಸಂಪೂರ್ಣ ವಿವರವನ್ನು ಸಂಪೂರ್ಣವಾಗಿ ಕೊನೆಯ ಭಾಗದವರೆಗೂ ಓದಿ, ನಂತರ ಅರ್ಜಿ ಸಲ್ಲಿಸಿ.

ಇದನ್ನೂ ಓದಿ: NWKRTC Driver recruitment 2024 : ಪಿಯುಸಿ ಪಾಸಾದವರಿಗೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಚಾಲಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ರೈಲ್ವೆ ರಕ್ಷಣಾ ಪಡೆಯಲ್ಲಿ ಖಾಲಿ ಇರುವ ಹುದ್ದೆಗಳ ವಿವರ Railway Protection Force Vacancy Details

ಅಧಿಕೃತ ಅಧಿಸೂಚನೆಯ ಪ್ರಕಾರ, ಭಾರತೀಯ ರೈಲ್ವೆ ಇಲಾಖೆಯ ರೈಲ್ವೆ ರಕ್ಷಣಾ ಪಡೆಯಲ್ಲಿ ಖಾಲಿ ಇರುವಂತಹ ಕಾನ್‌ಸ್ಟೇಬಲ್ ಮತ್ತು ಸಬ್ಇನ್ಸ್‌ಪೆಕ್ಟರ್ ಹುದ್ದೆಗಳ ಸಂಪೂರ್ಣ ವಿವರವು ಈ ಕೆಳಗಿನಂತಿದೆ.

 • ಸಬ್ಇನ್ಸ್‌ಪೆಕ್ಟರ್ ಹುದ್ದೆಗಳು (Sub Inspector) : 452 ಹುದ್ದೆಗಳು
 • ಕಾನ್‌ಸ್ಟೇಬಲ್ ಹುದ್ದೆಗಳು (Constable) : 4,208 ಹುದ್ದೆಗಳು
 • ಒಟ್ಟು ಹುದ್ದೆಗಳು : 4,660 ಹುದ್ದೆಗಳು

ಶೈಕ್ಷಣಿಕ ವಿದ್ಯಾರ್ಹತೆಗಳು Educational Qualification 

ಭಾರತೀಯ ರೈಲ್ವೆ ರಕ್ಷಣಾ ಪಡೆಯಲ್ಲಿ ಖಾಲಿ ಇರುವ ಕಾನ್‌ಸ್ಟೇಬಲ್ ಮತ್ತು ಸಬ್ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಶೈಕ್ಷಣಿಕ ವಿದ್ಯಾರ್ಹತೆಯನ್ನು ಅಧಿಕೃತ ಅಧಿಸೂಚನೆಯ ಪ್ರಕಾರ ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.

 • ಸಬ್ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಆಸಕ್ತ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದಾದರೂ ಒಂದು ವಿಷಯದಲ್ಲಿ ಪದವಿ (Degree) ಮುಗಿಸಿರುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ.
 • ರೈಲ್ವೆ ರಕ್ಷಣಾ ಪಡೆಯಲ್ಲಿ ಖಾಲಿ ಇರುವಂತಹ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಆಸಕ್ತ ಅಭ್ಯರ್ಥಿಗಳು ಯಾವುದಾದರೂ ಅಂಗಿಕೃತ ಶಿಕ್ಷಣ ಮಂಡಳಿಯಿ೦ದ SSLC ಪಾಸಾದವರು ಅರ್ಜಿ ಸಲ್ಲಿಸಲು ಅರ್ಹತೆಯನ್ನು ಹೊಂದಿರುತ್ತಾರೆ.

ಇದನ್ನೂ ಓದಿ: Land Surveyor Recruitment 2024 : ಸರ್ವೇಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಪಿಯುಸಿ ಪಾಸಾಗಿದ್ರೆ ಅರ್ಜಿ ಸಲ್ಲಿಸಿ | ₹47,650 ರೂಪಾಯಿ ಸಂಬಳ

ಮಾಸಿಕ ವೇತನ ವಿವರ Monthly Salary

ಭಾರತೀಯ ರೈಲ್ವೆ ರಕ್ಷಣಾ ಪಡೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಮಂಡಳಿಯ ವೇತನ ನಿಯಮಗಳ ಅನುಸಾರ ಮಾಸಿಕ ವೇತನವನ್ನು ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ನೀಡಲಾಗುತ್ತದೆ.

 • ಸಬ್ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಮಾಸಿಕ ವೇತನ – 35,400 ರೂಪಾಯಿ
 • ಕಾನ್‌ಸ್ಟೇಬಲ್ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಮಾಸಿಕ ವೇತನ – 21,700 ರೂಪಾಯಿ

ವಯೋಮಿತಿ ಅರ್ಹತೆಗಳು Age limit

ಭಾರತೀಯ ರೈಲ್ವೆ ರಕ್ಷಣಾ ಪಡೆಯ ನೇಮಕಾತಿಯ ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕಕ್ಕೆ (01-07-2024) ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ವಯೋಮಿತಿ ಹೊಂದಿರಬೇಕು.

 • ಸಬ್ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳ ಕನಿಷ್ಠ ವಯಸ್ಸು 20 ವರ್ಷ ತುಂಬಿರಬೇಕು ಮತ್ತು ಗರಿಷ್ಠ ವಯಸ್ಸು 28 ವರ್ಷದ ಒಳಗಿರಬೇಕು.
 • ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ತುಂಬಿರಬೇಕು ಮತ್ತು ಗರಿಷ್ಠ ವಯಸ್ಸು 28 ವರ್ಷದ ಒಳಗಿರಬೇಕು.
 • ಮೀಸಲಾತಿ ವ್ಯಾಪ್ತಿಯಲ್ಲಿ ಬರುವಂತಹ ಅರ್ಹ ಅಭ್ಯರ್ಥಿಗಳಿಗೆ ನಿಯಮಗಳ ಅನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.

ಇದನ್ನೂ ಓದಿ: BMTC Conductor recruitment 2024 : ಪಿಯುಸಿ ಪಾಸಾದವರಿಗೆ ಬಿಎಂಟಿಸಿ ಕಂಡಕ್ಟರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ | ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ

ಅರ್ಜಿ ಶುಲ್ಕ ವಿವರ Application Fees details

 • ಸಾಮಾನ್ಯ ವರ್ಗದ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ – 500 ರೂಪಾಯಿ
 • ಪ. ಜಾತಿ, ಪ. ಪಂಗಡ, ಎಲ್ಲಾ ವರ್ಗದ ಮಹಿಳೆಯರು, ಇWS, ಅಂಗವಿಕಲ ಅಭ್ಯರ್ಥಿಗಳಿಗೆ – 250 ರೂಪಾಯಿ

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು

 • ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 15-04-2024
 • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 14-05-2024

ಅರ್ಜಿ ಸಲ್ಲಿಸಲು ಪ್ರಮುಖ ಲಿಂಕುಗಳು

 • ಅಧಿಸೂಚನೆ : Download
 • ಅರ್ಜಿ ಸಲ್ಲಿಸುವ ಲಿಂಕ್ : Click here
 • ಸಹಾಯವಾಣಿ : 9004410701

ಇದನ್ನೂ ಓದಿ: RTC aadhar card link : ಜಮೀನು ಪಹಣಿಗೆ ಮೊಬೈಲ್‌ನಲ್ಲೇ ಮಾಡಿ ಆಧಾರ್ ಲಿಂಕ್ | ಇದರಿಂದ ರೈತರಿಗೆ ಸಿಗಲಿದೆ ಹಲವು ಪ್ರಯೋಜನ

WhatsApp Group Join Now
Telegram Group Join Now

Related Posts

error: Content is protected !!