Sainik School : ಸೈನಿಕ ಶಾಲೆ ಪ್ರವೇಶಾತಿ ಪರೀಕ್ಷೆಗೆ ಅರ್ಜಿ ಆಹ್ವಾನ
ಸೈನಿಕ ಶಾಲೆ 6 ಮತ್ತು 9ನೇ ತರಗತಿ ಪ್ರವೇಶಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ...
2025ನೇ ಸಾಲಿನ ಅಖಿಲ ಭಾರತೀಯ ಸೈನಿಕ ಪ್ರವೇಶ ಪರೀಕ್ಷೆಗೆ (AISSEE 2025) ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ಅರ್ಜಿ ಆಹ್ವಾನಿಸಿದೆ. 2025-26ನೇ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ದೇಶಾದ್ಯಂತ ಸೈನಿಕ ಶಾಲೆಗಳಲ್ಲಿ (Sainik School) 6 ಹಾಗೂ 9ನೇ ತರಗತಿಗೆ ಪ್ರವೇಶಾತಿ ಪಡೆಯಲು ಜನವರಿ 13ರ ವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ದೇಶಾದ್ಯಂತ ಒಟ್ಟು 33 ಸೈನಿಕ ಶಾಲೆಗಳಿದ್ದು; ಕರ್ನಾಟಕದ ಸದ್ಯಕ್ಕೆ ನಾಲ್ಕು ಸೈನಿಕ ಶಾಲೆಗಳಿವೆ. ಕೊಡಗು ಮತ್ತು ವಿಜಯಪುರದಲ್ಲಿ ಎರಡು ಶಾಲೆಗಳಿದ್ದು; ಖಾಸಗಿ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ ಬೆಳಗಾವಿಯ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಮತ್ತು ಮೈಸೂರು ಜಿಲ್ಲೆ ಸರಗೂರಿನಲ್ಲಿ ವಿವೇಕಾನಂದ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಸೈನಿಕ ಶಾಲೆಗಳು ಆರಂಭವಾಗಿವೆ. ರಾಜ್ಯದಲ್ಲಿ 5ನೇ ಸೈನಿಕ ಶಾಲೆ ಬೀದರ್ ಜಿಲ್ಲೆಯಲ್ಲಿ ಆರಂಭವಾಗುತ್ತಿದೆ.
ಇದನ್ನೂ ಓದಿ: Co-operative Central Bank Recruitment 2025 : ಕೋ-ಅಪರೇಟಿವ್ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ವಯೋಮಿತಿ ಮತ್ತು ಅರ್ಜಿ ಶುಲ್ಕವೆಷ್ಟು?
6ನೇ ತರಗತಿ ವಿದ್ಯಾರ್ಥಿಗಳಿಗೆ 2025ರ ಮಾರ್ಚ್ 31ಕ್ಕೆ ಅನ್ವಯವಾಗುವಂತೆ 10 ಹಾಗೂ 12 ವರ್ಷ ವಯೋಮಿತಿ ಇರಲಿದೆ. ಅದೇ ರೀತಿ 9ನೇ ತರಗತಿ ವಿದ್ಯಾರ್ಥಿಗಳಿಗೆ 13 ಹಾಗೂ 15 ವರ್ಷ ವಯಸ್ಸಾಗಿರಬೇಕು.
ಸಾಮಾನ್ಯ/ಡಿಫೆನ್ಸ್/ಒಬಿಸಿ (ಎನ್‌ಸಿಎಲ್) ಅಭ್ಯರ್ಥಿಗಳಿಗೆ 800 ರೂ., ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 650 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದ್ದು, ಜ.14ರ ಒಳಗಾಗಿ ಪಾವತಿಸಬೇಕು.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಬಹು ಆಯ್ಕೆಯ ಪ್ರಶ್ನೆಗಳನ್ನೊಳಗೊಂಡ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು https://aissee2025.ntaonline.in/ಗೆ ಭೇಟಿ ನೀಡಿ.
ಇದನ್ನೂ ಓದಿ: ತ್ವರಿತವಾಗಿ ಗೂಗಲ್ ಪೇ ಲೋನ್ ಪಡೆಯುವುದು ಹೇಗೆ? | ₹8 ಲಕ್ಷ ರೂಪಾಯಿ ವರೆಗೆ ಸಿಗುತ್ತೆ ಸಾಲ ಸೌಲಭ್ಯ