ಸರಕಾರಿ ಯೋಜನೆಸಾಲ ಯೋಜನೆ

Self Employment Govt Loan-Subsidy Scheme 2024 : ಸ್ವಯಂ ಉದ್ಯೋಗಕ್ಕೆ 1 ಲಕ್ಷ ರೂಪಾಯಿ ಸಹಾಯಧನ | ಈಗಲೇ ಅರ್ಜಿ ಸಲ್ಲಿಸಿ…

WhatsApp Group Join Now
Telegram Group Join Now

Self Employment Govt Loan-Subsidy Scheme 2024 : ಅನೇಕರಿಗೆ ಸ್ವ ಉದ್ಯೋಗ ಮಾಡಲು ಸಾಮರ್ಥ್ಯ ಮತ್ತು ಆಸಕ್ತಿ ಇದ್ದರೂ ಕೂಡ ಆರ್ಥಿಕ ಸಮಸ್ಯೆಗಳಿಂದ ಸ್ವಯಂ ಉದ್ಯೋಗ ಮಾಡಲು ಸಾಧ್ಯವಾಗುವಾಗುತ್ತಿಲ್ಲ. ಇಂಥವರಿಗೆ ಉತ್ತೇಜನ ನೀಡಲು ರಾಜ್ಯ ಸರ್ಕಾರವು ಈ ಯೋಜನೆಯಡಿ ಸಹಾಯಧನ ನೀಡುತ್ತಿದೆ.

ವ್ಯಾಪಾರ, ಸೇವಾ ಕ್ಷೇತ್ರ, ಕೃಷಿ ಹಾಗೂ ಸಣ್ಣ ಪ್ರಮಾಣದ ಕೈಗಾರಿಕೆ ಮುಂತಾದ ಚಟುವಟಿಕೆಗಳನ್ನು ಪ್ರಾರಂಭಿಸಲು ಸರ್ಕಾರವು ಅರ್ಹ ಫಲಾನುಭವಿಗಳಿಗೆ ಸಾಲ ಮತ್ತು ಸಹಾಯಧನವನ್ನು ನೀಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಕೂಡಲೇ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಉಪಯೋಗಿಸಿಕೊಳ್ಳಬಹುದಾಗಿದೆ.

ಇದನ್ನೂ ಓದಿ: FDA SDA Recruitment 2024 : ಪ್ರಥಮ ಮತ್ತು ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿ | ಖಾಲಿ ಇರುವ 300 ಹುದ್ದೆಗಳ ನೇಮಕಾತಿಗೆ ಜಿಲ್ಲಾವಾರು ಪಟ್ಟಿ ಬಿಡುಗಡೆ

ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಬುದ್ಧ, ಜೈನ, ಮುಸ್ಲಿಂ, ಕ್ರೈಸ್ತ, ಸಿಖ್ ಹಾಗೂ ಪಾರ್ಸಿ ಜನಾಂಗದ೦ತಹ ಅಲ್ಪಸಂಖ್ಯಾತ ಸಮುದಾಯಗಳ ಅಭಿವೃದ್ಧಿಗಾಗಿ ರಾಜ್ಯ ಸರಕಾರವು ಹಲವು ಯೋಜನೆಗಳನ್ನು ಕೈಗೊಂಡಿರುತ್ತದೆ. ಈ ಪೈಕಿ ಸ್ವಯಂ ಉದ್ಯೋಗ ಸಾಲ ಮತ್ತು ಸಹಾಯಧನ ಯೋಜನೆ ಕೂಡ ಒಂದಾಗಿದೆ. ಈ ಯೋಜನೆಯಡಿ ಸ್ವಯಂ ಉದ್ಯೋಗ ಕೈಗೊಳ್ಳುವ ಮೇಲ್ಕಾಣಿಸಿದ ಸಮುದಾಯಗಳ ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.

ಈ ಯೋಜನೆಯು ಅಲ್ಪಸಂಖ್ಯಾತರ (Minority) ಸಮುದಾಯದವರಿಗೆ ಮೀಸಲಿದ್ದು; ಕನಿಷ್ಠ 18 ವರ್ಷ ಮತ್ತು ಗರಿಷ್ಠ 55 ವರ್ಷ ವಯೋಮಿತಿಯವರು ಅರ್ಜಿ ಸಲ್ಲಿಸಬಹುದು. ಘಟಕ ವೆಚ್ಚದ ಶೇಕಡ 33ರಷ್ಟು ಅಥವಾ ಗರಿಷ್ಠ ಒಂದು ಲಕ್ಷ ರುಪಾಯಿ ಸಹಾಯಧನವನ್ನು ನೀಡಲಾಗುತ್ತದೆ.

ಇದನ್ನೂ ಓದಿ: Dairy Farming loan Interest subsidy : ಹಸು, ಎಮ್ಮೆ ಖರೀದಿ ಸಾಲಕ್ಕೆ ಬಡ್ಡಿ ಸಬ್ಸಿಡಿ | ಹೈನುಗಾರಿಕೆ ಉತ್ತೇಜನಕ್ಕೆ ಹೊಸ ಯೋಜನೆ

Self Employment Govt Loan-Subsidy Scheme 2024 Eligibility

  • ಅರ್ಜಿದಾರರು ಸರ್ಕಾರದ ನಿಯಮಗಳ ಪ್ರಕಾರ ಧಾರ್ಮಿಕ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು.
  • ಅರ್ಜಿದಾರ ಕನಿಷ್ಠ ವಯಸ್ಸು 18 ವರ್ಷವಾಗಿರಬೇಕು ಮತ್ತು ಗರಿಷ್ಠ 55 ವರ್ಷ.
  • ಅರ್ಜಿದಾರರು ಗ್ರಾಮೀಣ (Rural) ಪ್ರದೇಶದಲ್ಲಿ ಇದ್ದರೆ ಅವರು ಕುಟುಂಬದ ಒಟ್ಟು ವಾರ್ಷಿಕ ಆದಾಯ 81,000ಕ್ಕಿಂತ ಕಡಿಮೆ ಇರಬೇಕು.
  • ಅರ್ಜಿದಾರರು ನಗರ (Urban) ಪ್ರದೇಶದಲ್ಲಿ ಇದ್ದರೆ ಅವರ ಕುಟುಂಬದ ಒಟ್ಟು ವಾರ್ಷಿಕ ಆದಾಯ 1,03,000ಕ್ಕಿಂತ ಕಡಿಮೆ ಇರಬೇಕು.
  • ಅಭ್ಯರ್ಥಿಗಳು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಲ್ಲಿ ಸುಸ್ತಿದಾರರಾಗಿರಬಾರದು.
  • ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಉದ್ಯೋಗಿ ಆಗಿರಬಾರದು.

ಇದನ್ನೂ ಓದಿ: Google Pay loan : ತ್ವರಿತವಾಗಿ ಗೂಗಲ್ ಪೇ ಲೋನ್ ಪಡೆಯುವುದು ಹೇಗೆ? | 8 ಲಕ್ಷ ರೂಪಾಯಿ ವರೆಗೆ ಸಿಗುತ್ತೆ ಸಾಲ ಸೌಲಭ್ಯ

Self Employment Govt Loan-Subsidy Scheme 2024 ದಾಖಲಾತಿಗಳು

  • ಸಕ್ಷಮ ಪ್ರಧಿಕಾರದಿಂದ ಪಡೆದ ಜಾತಿ/ ಅಲ್ಪಸಂಖ್ಯಾತರ ಪ್ರಮಾಣ ಪತ್ರ (minority certificate)
  • ಸಕ್ಷಮ ಪ್ರಧಿಕಾರದಿಂದ ಪಡೆದ ಆದಾಯ ಪ್ರಮಾಣ ಪತ್ರ (income certificate)
  • ಆಧಾರ್ ಕಾರ್ಡ್ (Aadhar card)
  • ಕೈಗೊಳ್ಳಲಿರುವ ಸ್ವ ಉದ್ಯೋಗದ ಯೋಜನಾ ವರದಿ

ಸ್ವಯಂ ಉದ್ಯೋಗ ಸಹಾಯಧನ ಅರ್ಜಿ ಸಲ್ಲಿಸುವ ವಿಧಾನ

ಅರ್ಜಿ ಸಲ್ಲಿಸಲು ಅರ್ಹರಿರುವ ಫಲಾನುಭವಿಗಳು ಎಲ್ಲಾ ಸೂಕ್ತ ದಾಖಲಾತಿಗಳೊಂದಿಗೆ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಆನ್‌ಲೈನ್ ಮುಖಾಂತರ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: PMFME – PM Micro Food Processing Scheme : ಸಣ್ಣ ಉದ್ಯಮ ಸ್ಥಾಪನೆಗೆ ₹15 ಲಕ್ಷ ರೂಪಾಯಿ ಸಹಾಯಧನ : ರೈತರು, ಮಹಿಳೆಯರಿಗೆ ಸುವರ್ಣಾವಕಾಶ

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕ

ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು ಅರ್ಹರಿರುವ ಎಲ್ಲಾ ಅಭ್ಯರ್ಥಿಗಳು ಕೊನೆಯ ಇದೇ 29-02-2024ರ ಒಳಗಾಗಿ ಅರ್ಜಿ ಸಲ್ಲಿಸಬೇಕು.

ಇದನ್ನೂ ಓದಿ: NLM Scheme Loan : ಕುರಿ-ಮೇಕೆ, ಕೋಳಿ, ಹಂದಿ ಸಾಕಾಣೆಗೆ ₹20 ಲಕ್ಷದಿಂದ ₹1 ಕೋಟಿ ಸಾಲ ಸೌಲಭ್ಯ | ಸಾಲದ ಅರ್ಧ ಭಾಗ ಸಬ್ಸಿಡಿ

WhatsApp Group Join Now
Telegram Group Join Now

Related Posts

error: Content is protected !!