JobsNews

IDBI Bank Recruitment- ಪದವೀಧರರಿಗೆ ಬ್ಯಾಂಕ್ ಉದ್ಯೋಗ | ಐಡಿಬಿಐ ಬ್ಯಾಂಕ್ 650 ಹುದ್ದೆಗೆ ಅರ್ಜಿ

ಯಾವುದೇ ವಿಷಯದಲ್ಲಿ ಪದವಿ ಪಡೆದವರಿಗೆ ಬ್ಯಾಂಕ್ ಮ್ಯಾನೇಜರ್ ಹುದ್ದೆಗಳು

ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ (Industrial Development Bank of India -IDBI) ಕರ್ನಾಟಕ ಸೇರಿದಂತೆ ದೇಶದ ವಿವಿಧೆಡೆ ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. 650 ಹುದ್ದೆಗಳ ನೇಮಕಾತಿ ನಡೆಯಲಿದ್ದು; ಯಾವುದೇ ವಿಷಯದಲ್ಲಿ ಪದವಿ ಪಡೆದಿದ್ದರೂ ಬ್ಯಾಂಕ್ ಮ್ಯಾನೇಜರ್ ಹುದ್ದೆ ಪಡೆಯುವ ಅವಕಾಶ ಇಲ್ಲಿದೆ.

ವಿದ್ಯಾರ್ಹತೆ ಮತ್ತು ವೇತನ

ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಶೈಕ್ಷಣಿಕ ಸಂಸ್ಥೆಯಿAದ ಪದವಿ ಪೂರ್ಣಗೊಳಿಸಿರಬೇಕು. ಅಭ್ಯರ್ಥಿಗಳು ಕಂಪ್ಯೂಟರ್‌ನಲ್ಲಿ ಪ್ರಾವೀಣ್ಯತೆ ಹೊಂದಿರಬೇಕು. ಹುದ್ದೆಗಳಿಗೆ ಆಯ್ಕೆಯಾದ ಅರ್ಹ ಅಭ್ಯರ್ಥಿಗಳಿಗೆ ವಾರ್ಷಿಕವಾಗಿ 6.14 ಲಕ್ಷ ರೂ.ಗಳಿಂದ 6.50 ಲಕ್ಷ ರೂ.ವರೆಗೆ ವೇತನ ನಿಗದಿಪಡಿಸಲಾಗಿದೆ.

ಇದನ್ನೂ ಓದಿ: Old Pension Scheme Relaunch- ಸರ್ಕಾರಿ ನೌಕರರಿಗೆ ಮತ್ತೆ ಹಳೇ ಪಿಂಚಣಿ ಗಿಫ್ಟ್ | ಒಪಿಎಸ್ ಮರುಜಾರಿಗೆ ಸಿದ್ಧತೆ

ವಯೋಮಿತಿ ವಿವರ

ಅಭ್ಯರ್ಥಿಗಳಿಗೆ 2025ರ ಮಾರ್ಚ್ 1ಕ್ಕೆ ಅನ್ವಯವಾಗುವಂತೆ ಕನಿಷ್ಠ ವಯಸ್ಸು 20 ಆಗಿರಬೇಕು. ಗರಿಷ್ಠ 25 ವರ್ಷ ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ-ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

IDBI Bank Junior Assistant Manager Recruitment

ನೇಮಕ ಪ್ರಕ್ರಿಯೆ ಹೇಗೆ?

ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಆನ್‌ಲೈನ್ ಪರೀಕ್ಷೆ, ವೈಯಕ್ತಿಕ ಸಂದರ್ಶನ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ. ಆನ್‌ಲೈನ್ ಪರೀಕ್ಷೆಯು ಇಂಗ್ಲಿಷ್ ಅಥವಾ ಹಿಂದಿ ಭಾಷೆಯಲ್ಲಿ ನಡೆಯಲಿದೆ. ಆನ್‌ಲೈನ್ ಪರೀಕ್ಷೆಯ ಸಂಭಾವ್ಯ ದಿನಾಂಕ: 06-04-2025.

ಇದನ್ನೂ ಓದಿ: 500 ರೂಪಾಯಿಗೆ 10 ಲಕ್ಷ ವಿಮೆ ಪರಿಹಾರ | ಅಂಚೆ ಇಲಾಖೆಯ ಈ ಅವಕಾಶ ಮಿಸ್ ಮಾಡದೇ ಬಳಸಿಕೊಳ್ಳಿ…

ಅರ್ಜಿ ಶುಲ್ಕ ಮತ್ತು ಅರ್ಜಿ ಸಲ್ಲಿಕೆ

ಎಸ್‌ಸಿ, ಎಸ್‌ಟಿ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 250 ರೂ. ಅರ್ಜಿ ಶುಲ್ಕ ನಿಗದಿಪಡಿಸಿದ್ದು, ಇತರ ಎಲ್ಲ ವರ್ಗದ ಅಭ್ಯರ್ಥಿಗಳು 1,050 ರೂ. ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು. ಐಡಿಬಿಐ ಬ್ಯಾಂಕಿನ ವೆಬ್‌ಸೈಟ್ iಜbibಚಿಟಿಞ.iಟಿನಲ್ಲಿ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಪರಿಶೀಲಿಸಿ, ನಂತರ ಆನ್‌ಲೈನ್ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬೇಕು.

ಅರ್ಜಿ ಸಲ್ಲಿಕೆ ಕೊನೇ ದಿನಾಂಕ: 12-03-2025
ಅಧಿಸೂಚನೆ: Download

ಇದನ್ನೂ ಓದಿ: Karnataka Arogya Sanjeevini Scheme- ಇನ್ಮುಂದೆ ರಾಜ್ಯ ಸರ್ಕಾರಿ ನೌಕರರಿಗೆ ಸಿಗಲಿದೆ ಉಚಿತ ಚಿಕಿತ್ಸೆ

Raitapi Jagattu

#ಮಾಲತೇಶ_ಮಾಳಮ್ಮನವರ್, ಸಂಪಾದಕರು ಮಾಲತೇಶ ಅವರು ಅನುಭವಿ ಪತ್ರಕರ್ತರಾಗಿದ್ದು, 2010ರಿಂದ ಪತ್ರಿಕೋಧ್ಯಮದಲ್ಲಿ ತೊಡಗಿಸಿಕೊಂಡಿದ್ದಾರೆ. ನಾಡಿನ ಹೆಸರಾಂತ ಪತ್ರಿಕೆಗಳಲ್ಲಿ ವರದಿಗಾರರಾಗಿ, ಸಹ ಸಂಪಾದಕರಾಗಿ, ಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. 2022ರಿಂದ ಡಿಜಿಟಲ್ ಪತ್ರಿಕೋಮಧ್ಯಮದಲ್ಲಿ ನಿರತರಾಗಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!