News

Free School Hostel Admission- ಉಚಿತ ಶಾಲೆ ಮತ್ತು ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

ಕನ್ನಡ ಮತ್ತು ಇಂಗ್ಲೀಷ್ ಮಿಡಿಯಂ ಶಾಲೆ ಪ್ರವೇಶಕ್ಕೆ ಅವಕಾಶ

ರಾಜ್ಯದ ಪ್ರಸಿದ್ಧ ಸುತ್ತೂರು ಶ್ರೀಕ್ಷೇತ್ರದ ಜೆಎಸ್‌ಎಸ್ ಸಂಸ್ಥೆಯಡಿಯಲ್ಲಿ (JSS Institute) ನಡೆಯುವ ಉಚಿತ ಶಾಲೆ ಮತ್ತು ಹಾಸ್ಟೆಲ್’ಗೆ 2025-26ನೇ ಶೈಕ್ಷಣಿಕ ವರ್ಷದ ಪ್ರವೇಶಕ್ಕಾಗಿ ಗ್ರಾಮೀಣ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ…

WhatsApp Group Join Now
Telegram Group Join Now

ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಪ್ರಸಿದ್ಧ ಸುತ್ತೂರು ಶ್ರೀಕ್ಷೇತ್ರವು ದಕ್ಷಿಣ ಭಾರತದ ಪ್ರಮುಖ ಧಾರ್ಮಿಕ ಕೇಂದ್ರಗಳಲ್ಲಿ ಒಂದಾಗಿದ್ದು; ಇದು ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಕಪಿಲಾ ನದಿಯ ದಡದಲ್ಲಿದೆ. ಈ ಕ್ಷೇತ್ರಕ್ಕೆ ಸಾವಿರ ವರ್ಷಗಳ ಇತಿಹಾಸವಿದೆ.

ಇದನ್ನೂ ಓದಿ: Surya Ghar Rooftop Scheme-10 ಲಕ್ಷ ಮನೆಗಳಿಗೆ ಸೋಲಾರ್ ಕರೆಂಟ್

ಆದಿಜಗದ್ಗುರು ಶ್ರೀ ಶಿವರಾತ್ರಿ ಶಿವಯೋಗಿಗಳು ಸುತ್ತೂರಿನಲ್ಲಿ ಸ್ಥಾಪಿಸಿದ ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠವು ಸಹಸ್ರಾರು ವರ್ಷಗಳ ಸುದೀರ್ಘ ಪರಂಪರೆಯನ್ನು ಹೊಂದಿದೆ. ಸುತ್ತೂರು ಶ್ರೀಕ್ಷೇತ್ರವು ಶಿಕ್ಷಣ ಮತ್ತು ಸಾಂಸ್ಕೃತಿಕ ಬೆಳವಣಿಗೆಯ ಕೇಂದ್ರವಾಗಿದೆ.

ಸದರಿ ಸಂಸ್ಥೆಯ ವತಿಯಿಂದ ನಡೆಯುವ ಶಾಲೆಯು ಗ್ರಾಮೀಣ ಪ್ರದೇಶದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಹಾಗೂ ಹಾಸ್ಟೆಲ್ ವ್ವಸ್ಥೆಯನ್ನು ಉಚಿತವಾಗಿ ಒದಗಿಸುತ್ತಿದೆ. ಅರ್ಹ ಗ್ರಾಮೀಣ ವಿದ್ಯಾರ್ಥಿಗಳು ಇದರ ಸದುಪಯೋಗ ಮಾಡಿಕೊಳ್ಳಬಹುದಾಗಿದೆ.

ಯಾವೆಲ್ಲ ತರಗತಿಗಳ ಪ್ರವೇಶಕ್ಕೆ ಅವಕಾಶವಿದೆ?

ಕನ್ನಡ ಮಾಧ್ಯಮ 1ರಿಂದ 8ನೇ ತರಗತಿಗೆ ಪ್ರವೇಶ ಪಡೆಯಬಹುದಾಗಿದೆ. ಇನ್ನು ಇಂಗ್ಲಿಷ್ ಮಾಧ್ಯಮಕ್ಕೆ 1, 5, 6 ಮತ್ತು 8ನೇ ತರಗತಿಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮೀಣ ಪ್ರದೇಶದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಬಾಲಕ ಮತ್ತು ಬಾಲಕಿಯರು ಉಚಿತ ಶಾಲೆ ಹಾಗೂ ಹಾಸ್ಟೆಲ್ ವ್ಯವಸ್ಥೆ ಪಡೆಯಬಹುದಾಗಿದೆ.

ಇದನ್ನೂ ಓದಿ: ಪ್ರೊಸೆಸಿಂಗ್ ಶುಲ್ಕವಿಲ್ಲದೇ ₹30 ಲಕ್ಷದ ವರೆಗೆ ಲೋನ್ Zero Processing Fee Home Loan

Free School Hostel Admission
Free School Hostel Admission

ಅರ್ಜಿ ಸಲ್ಲಿಕೆ ಹೇಗೆ?

ಅರ್ಜಿ ನಮೂನೆಯನ್ನು ಏಪ್ರಿಲ್ 2ರಿಂದ ಶಾಲೆಯ ಕಚೇರಿಯಲ್ಲಿ ಖುದ್ದಾಗಿ ಪಡೆಯಬಹುದು. ಅಥವಾ ನಾವು ಕೆಳಗೆ ನೀಡಿದ ಲಿಂಕ್ ಬಳಸಿಕೊಂಡು ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ನಂತರ ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳ ಜೆರಾಕ್ಸ್ ಪ್ರತಿಗಳನ್ನು ಲಗತ್ತಿಸಿ ಕೆಳಗಿನ ವಿಳಾಸಕ್ಕೆ ಮೇ 15ರೊಳಗೆ ಕಳುಹಿಸಬೇಕು.

ಅರ್ಜಿ ಕಳಿಸುವ ವಿಳಾಸ: ಆಡಳಿತಾಧಿಕಾರಿ, ಜೆಎಸ್‌ಎಸ್ ಸಂಸ್ಥೆಗಳು, ಸುತ್ತೂರು, ನಂಜನಗೂಡು ತಾಲ್ಲೂಕು, ಮೈಸೂರು ಜಿಲ್ಲೆ – 571129

ಅರ್ಜಿ ಸಲ್ಲಿಕೆಯ ಸೂಚನೆಗಳು

2025-26ನೇ ಸಾಲಿನ ಪ್ರವೇಶ ಬಯಸುವ ವಿದ್ಯಾರ್ಥಿಗಳು ತರಗತಿ ಮತ್ತು ಮಾಧ್ಯಮಗಳನ್ನು ಅರ್ಜಿಯಲ್ಲಿ ಸೂಚಿಸಿರುವ ಸ್ಥಳದಲ್ಲಿ ಸ್ಪಷ್ಟವಾಗಿ ನಮೂದಿಸಬೇಕು. ಅರ್ಜಿ ಭರ್ತಿ ಮಾಡುವಾಗ ಮನೆ ಸಂಖ್ಯೆ, ಬೀದಿ, ರಸ್ತೆ, ಮೊಹಲ್ಲ, ಪಟ್ಟಣ, ತಾಲ್ಲೂಕು, ಜಿಲ್ಲೆ ಇತ್ಯಾದಿ ಸಂಪೂರ್ಣ ವಿಳಾಸವನ್ನು ನಮೂದಿಸಬೇಕು. ಸ್ಥಿರ ದೂರವಾಣಿ, ಮೊಬೈಲ್, ಇ-ಮೈಲ್ ಇತ್ಯಾದಿ ವಿವರಗಳನ್ನು ನಮೂದಿಸಬೇಕು.

ಇದನ್ನೂ ಓದಿ: Bank ATM withdrawal fee- ಇನ್ಮುಂದೆ ಎಟಿಎಂ ಹಣ ವಿತ್ ಡ್ರಾ ಶುಲ್ಕ ದುಬಾರಿ

ಅರ್ಜಿ ಜೊತೆಗೆ ಬೇಕಾಗುವ ದಾಖಲಾತಿಗಳು

  • ಜನ್ಮದಿನಾಂಕ ದೃಢೀಕರಣ ಪತ್ರ (1ನೆಯ ತರಗತಿಗೆ ಮಾತ)
  • ಹಿಂದಿನ ತರಗತಿಯ ಅಂಕಪಟ್ಟಿ
  • ಜಾತಿ ದೃಢೀಕರಣ ಪತ್ರ
  • ವಾರ್ಷಿಕ ವರಮಾನ ಪತ್ರ
  • ವೈದ್ಯಕೀಯ ಪ್ರಮಾಣಪತ್ರ
  • ವಿದ್ಯಾರ್ಥಿ, ತಂದೆ-ತಾಯಿ ಅಥವಾ ಪೋಷಕರ ಆಧಾರ್ ಕಾರ್ಡ್
  • ವಿದ್ಯಾರ್ಥಿಯ ಬ್ಯಾಂಕ್ ಖಾತೆ ಪಾಸ್ ಬುಕ್ ಪ್ರತಿ
  • ಪಡಿತರ ಚೀಟಿ (ರೇಷನ್ ಕಾರ್ಡ್)

ಹೆಚ್ಚಿನ ವಿವರಗಳಿಗಾಗಿ ಅಥವಾ ಪ್ರವೇಶ ಸಂಬ೦ಧಿತ ಯಾವುದೇ ಪ್ರಶ್ನೆಗಳಿಗಾಗಿ, ಕೆಳಗಿನ 74114 86938 ಈ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು.

ಅರ್ಜಿ ಸಲ್ಲಿಕೆಯ ಕೊನೇ ದಿನಾಂಕ: 15-04-2025
ಅರ್ಜಿ ನಮೂನೆ: Download

ಇದನ್ನೂ ಓದಿ: Male nakshatragalu 2025- 2025ರ ಮಳೆ ನಕ್ಷತ್ರಗಳು | ಹೇಗಿದೆ ಈ ವರ್ಷದ ಮಳೆಗಾಲ?

WhatsApp Group Join Now
Telegram Group Join Now

Raitapi Jagattu

#ಮಾಲತೇಶ_ಮಾಳಮ್ಮನವರ್, ಸಂಪಾದಕರು ಮಾಲತೇಶ ಅವರು ಅನುಭವಿ ಪತ್ರಕರ್ತರಾಗಿದ್ದು, 2010ರಿಂದ ಪತ್ರಿಕೋಧ್ಯಮದಲ್ಲಿ ತೊಡಗಿಸಿಕೊಂಡಿದ್ದಾರೆ. ನಾಡಿನ ಹೆಸರಾಂತ ಪತ್ರಿಕೆಗಳಲ್ಲಿ ವರದಿಗಾರರಾಗಿ, ಸಹ ಸಂಪಾದಕರಾಗಿ, ಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. 2022ರಿಂದ ಡಿಜಿಟಲ್ ಪತ್ರಿಕೋಮಧ್ಯಮದಲ್ಲಿ ನಿರತರಾಗಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!