ಮತ್ತೆ ಬಂಗಾಳಕೊಲ್ಲಿಯ ನೈಋತ್ಯ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು; ಇದರ ಪ್ರಭಾವ ಕರ್ನಾಟಕಕ್ಕೂ ವ್ಯಾಪಿಸಲಿದೆ. ಡಿಸೆಂಬರ್ 27ರಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ವಿಜ್ಞಾನಿ ಮತ್ತು ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.
ಇದನ್ನೂ ಓದಿ: PM-Surya Ghar Muft Bijli Jojana : ಮನೆಗೆ ಸೋಲಾರ್ ಕರೆಂಟ್ ಪಡೆಯಲು ₹78,000 ಆರ್ಥಿಕ ನೆರವು | ಹೀಗೆ ಅರ್ಜಿ ಸಲ್ಲಿಸಿ…
ಈ ಜಿಲ್ಲೆಗಳಲ್ಲಿ ಎರಡು ದಿನ ಮಳೆ
ಡಿಸೆಂಬರ್ 27ರಂದು ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಡಿಸೆಂಬರ್ 28ರಂದು ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕನಿಷ್ಟ-ಗರಿಷ್ಟ ಉಷ್ಣಾಂಶ
ಡಿಸೆAಬರ್ 26ರಂದು ರಾಜ್ಯದ ರಾಮನಗರ, ಬೆಂಗಳೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗಿದೆ. ರಾಜ್ಯದಲ್ಲಿ ಡಿಸೆಂಬರ್ 27ರಂದು ಕನಿಷ್ಠ ತಾಪಮಾನ 17 ರಿಂದ 19 ಡಿ.ಸೆ.ನಷ್ಟಿರುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಕನಿಷ್ಠ 19 ಹಾಗೂ ಗರಿಷ್ಠ 25 ಡಿ.ಸೆ. ಇರಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ: Google pay instant loan: ತ್ವರಿತವಾಗಿ ಗೂಗಲ್ ಪೇ ಲೋನ್ ಪಡೆಯುವುದು ಹೇಗೆ? | ₹8 ಲಕ್ಷ ರೂಪಾಯಿ ವರೆಗೆ ಸಿಗುತ್ತೆ ಸಾಲ ಸೌಲಭ್ಯ