ಉದ್ಯೋಗ

Village Accountant Recruitment 2024 |1,500 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಚಾಲನೆ | PUC ಪಾಸಾದವರಿಗೆ ಭರ್ಜರಿ ಅವಕಾಶ | ಕಂದಾಯ ಸಚಿವರ ಮಹತ್ವದ ಮಾಹಿತಿ…

WhatsApp Group Join Now
Telegram Group Join Now

ರಾಜ್ಯದಲ್ಲಿ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ರಾಜ್ಯ ಸರಕಾರ ಅಧಿಕೃತ ತಯಾರಿ ನಡೆಸಿದೆ. ಕಂದಾಯ ಸಚಿವರು ಈ ಬಗ್ಗೆ ನೀಡಿದ ಮಹತ್ವದ ಮಾಹಿತಿ ಇಲ್ಲಿದೆ….

Village Accountant Recruitment 2024 : ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ 1,500 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಜೊತೆಗೆ 357 ಸರ್ವೆಯರ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಇನ್ನೂ 590 ಹುದ್ದೆಗಳ ನೇಮಕಾತಿಗೆ ಸಂಪುಟ ಸಭೆಯಲ್ಲಿ ಅನುಮತಿ ಪಡೆಯಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಹೇಳಿದ್ದಾರೆ.

ಇದನ್ನೂ ಓದಿ: ಅಂಗನವಾಡಿ ಟೀಚರ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಮೊಬೈಲ್‌ನಲ್ಲೇ ಅರ್ಜಿ ಸಲ್ಲಿಸಿ… WCD Karnataka Anganwadi Recruitment 2024

ನೇಮಕಾತಿ ಪ್ರಕ್ರಿಯೆಗೆ ಚಾಲನೆ

ಸುಮಾರು ಏಳು ವರ್ಷಗಳ ಹಿಂದೆ ಅಂದರೆ 2015ರಲ್ಲಿ ನೇಮಕ ನಡೆದಿದ್ದನ್ನು ಬಿಟ್ಟರೆ ಇದುವರೆಗೆ ರಾಜ್ಯದಲ್ಲಿ ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗಳಿಗೆ ನೇಮಕಾತಿ ನಡೆದಿಲ್ಲ. ಇತ್ತೀಚೆಗಷ್ಟೆ ‘ಗ್ರಾಮ ಲೆಕ್ಕಾಧಿಕಾರಿ’ ಹುದ್ದೆಗೆ ‘ಗ್ರಾಮ ಆಡಳಿತ ಅಧಿಕಾರಿ’ ಎಂದು ಮರು ನಾಮಕರಣ ಮಾಡಿರುವ ಸರಕಾರ ಇದೀಗ ನೇಮಕಾತಿ ಪ್ರಕ್ರಿಯೆ ಅಧಿಕೃತ ತಯಾರಿಗೆ ಮುಂದಾಗಿದೆ.

ಸಂಪುಟ ಸಭೆಯಲ್ಲಿ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಂಡು, ಇದೇ ಫೆಬ್ರುವರಿಯಲ್ಲಿ ನೇಮಕಾತಿಗೆ ಚಾಲನೆ ನೀಡಲಾಗುತ್ತದೆ. ಜೊತೆಗೆ 357 ಸರ್ವೆಯರ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಇನ್ನೂ 590 ಹುದ್ದೆಗಳ ನೇಮಕಾತಿಗೆ ಸಂಪುಟ ಸಭೆಯಲ್ಲಿ ಅನುಮತಿ ಪಡೆಯಲಾಗುವುದು ಎಂದು ಕಂದಾಯ ಸಚಿವರು ಜನವರಿ 17ರಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Horticulture Subsidy Schemes : ತೋಟಗಾರಿಕೆ ಇಲಾಖೆಯ ಸಬ್ಸಿಡಿ ಯೋಜನೆಗಳು | ರೈತರಿಗಾಗಿಯೇ ಇವೆ ಈ ಹಣಕಾಸು ನೆರವಿನ ಯೋಜನೆಗಳು

ಖಾಲಿ ಹುದ್ದೆಗಳೆಷ್ಟು?

ರಾಜ್ಯ ಕಂದಾಯ ಇಲಾಖೆಯಲ್ಲಿ ಒಟ್ಟು 1,839 ಗ್ರಾಮ ಲೆಕ್ಕಾಧಿಕಾರಿ (ಗ್ರಾಮ ಆಡಳಿತಾಧಿಕಾರಿ) ಹುದ್ದೆಗಳು ಖಾಲಿ ಇದ್ದು, ಇವುಗಳ ನೇಮಕಾತಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಕಳೆದ 06-12-2023ರಂದು ಬೆಳಗಾವಿಯ ವಿಧಾನ ಮಂಡಲ ಅಧಿವೇಶನದಲ್ಲಿ ಜಿಲ್ಲಾವಾರು ಹುದ್ದೆಗಳ ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡಿದ್ದರು.

ಕೆಲವೇ ಕೆಲವು ತಾಲ್ಲೂಕುಗಳನ್ನು ಹೊರತುಪಡಿಸಿ ರಾಜ್ಯದ ಇನ್ನುಳಿದ ಬಹತೇಕ ತಾಲ್ಲೂಕುಗಳಲ್ಲಿ ಪೂರ್ಣ ಪ್ರಮಾಣದ ಗ್ರಾಮ ಲೆಕ್ಕಾಧಿಕಾರಿಗು ಇಲ್ಲದಾಗಿದೆ. ಪ್ರತಿ ಜಿಲ್ಲೆಯಲ್ಲಿ ಕಮ್ಮಿ ಎಂದರೂ 30 ಹುದ್ದೆಗಳು ಖಾಲಿ ಇವೆ. ಇದರಿಂದಾಗಿ ರೈತರ ಜಮೀನಿನ ದಾಖಲೆಗಳ ಸಿದ್ಧತೆ, ಬರ, ನೆರೆ, ಚುನಾವಣೆ, ಪಡಿತರ ಚೀಟಿ ವಿತರಣೆ ಹೀಗೆ ಹಲವು ಕಾರ್ಯಕ್ರಮಗಳನ್ನು ಫಲಾನುಭವಿಗಳಿಗೆ ಸಕಾಲಕ್ಕೆ ತಲುಪುತ್ತಿಲ್ಲ.

ಇದನ್ನೂ ಓದಿ: Kisan Credit Card loan : ಪಶುಪಾಲಕರಿಗೆ ಕಡಿಮೆ ಬಡ್ಡಿದರದಲ್ಲಿ ಆರ್ಥಿಕ ನೆರವು | ಹೈನುಗಾರಿಕೆ, ಕುರಿ-ಮೇಕೆ ಸಾಕಣೆಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಸಹಾಯಧನ

ನೇಮಕಾತಿ ಹೇಗೆ ನಡೆಯಲಿದೆ?

ಈ ಮೊದಲು ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳು ದ್ವಿತೀಯ ಪಿಯುಸಿಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತಿತ್ತು. ಇದೀಗ ಅಭ್ಯರ್ಥಿಯ PUC ಶಿಕ್ಷಣ ಅರ್ಹತೆ ಆಧರಿಸಿ ಅರ್ಹ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ, ಹೆಚ್ಚು ಅಂಕ ಗಳಿಸಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಈ ಬದಲಾವಣೆಗೆ ಕಾರಣ; ಕೋವಿಡ್ ನಂತರ ಪಿಯುಸಿಯಲ್ಲಿ ಅನೇಕ ವಿದ್ಯಾರ್ಥಿಗಳ ಫಲಿತಾಂಶ 100ಕ್ಕೆ 100 ಬಂದಿರುವುದರಿಂದ ಮತ್ತು ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳುವುದು ಸರಿಯಾದ ಮಾರ್ಗವಲ್ಲವೆಂದು, ಹೊಸ ಆಯ್ಕೆ ಪ್ರಕ್ರಿಯೆಯಿಂದ ನೇಮಕಾತಿ ನಡೆಯುತ್ತದೆ.

ಗ್ರಾಮ ಲೆಕ್ಕಾಧಿಕಾರಿಗಳ ಸಂಬಳ

ಗ್ರಾಮ ಲೆಕ್ಕಾಧಿಕಾರಿ ಅಥವಾ ಗ್ರಾಮ ಆಡಳಿತ ಅಧಿಕಾರಿಯಾಗಿ ಆಯ್ಕೆಯಾದವರಿಗೆ ಮಾಸಿಕ 21,000 ರಿಂದ 42,000 ರೂಪಾಯಿ ವರೆಗೆ ಸಂಬಳ ಇರುತ್ತದೆ. ಜತೆಗೆ ವಿವಿಧ ಸರಕಾರಿ ಸವಲತ್ತುಗಳು ಅನ್ವಯವಾಗುತ್ತವೆ.

ರಾಜ್ಯದ ವಿವಿಧ ಜಿಲ್ಲೆಗಳ ತಾಲ್ಲೂಕುವಾರು ಖಾಲಿ ಹುದ್ದೆಗಳ ಸಂಪೂರ್ಣ ಮಾಹಿತಿಗಾಗಿ 👉 ಇಲ್ಲಿ ಕ್ಲಿಕ್ ಮಾಡಿ..

BPNL Recruitment 2024 : ಪಶುಪಾಲನಾ ನಿಗಮದಲ್ಲಿ SSLC, PUC ಪಾಸಾದವರಿಗೆ 1884 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | ಈಗಲೇ ಅರ್ಜಿ ಸಲ್ಲಿಸಿ…

WhatsApp Group Join Now
Telegram Group Join Now

Related Posts

error: Content is protected !!