ಉದ್ಯೋಗ

Village accountant recruitment 2024 :1000 ಗ್ರಾಮ ಲೆಕ್ಕಾಧಿಕಾರಿ ನೇಮಕಾತಿಗೆ ಅಧಿಕೃತ ಪ್ರಕಟಣೆ | ಕಂದಾಯ ಸಚಿವರಿಂದ ಅಧಿಕೃತ ಮಾಹಿತಿ

WhatsApp Group Join Now
Telegram Group Join Now

Village accountant recruitment 2024 : ರಾಜ್ಯದಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡರು (Krishna Byregowda) ಇದೀಗ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಪ್ರಕಟಣೆ ಬಿಡುಗಡೆ ಮಾಡಿದ್ದು ಇದರ ಸಂಪೂರ್ಣ ಮಾಹಿತಿ ಇಲ್ಲಿದೆ…

ಕರ್ನಾಟಕ ರಾಜ್ಯದ ಕಂದಾಯ ಇಲಾಖೆಯಲ್ಲಿ (Revenue Department) ಖಾಲಿ ಇರುವಂತಹ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ  ಕಳೆದ ಹಲವು ತಿಂಗಳುಗಳಿ೦ದ ರಾಜ್ಯದಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ (Village accountant) ಹುದ್ದೆಗಳ ನೇಮಕಾತಿ ಶೀಘ್ರದಲ್ಲಿಯೇ ನಡೆಯಲಿದೆ ಎಂಬ ಮಾಹಿತಿಯನ್ನು ಹಂಚಿಕೊ೦ಡಿತ್ತು. ಆದರೆ ಇದೀಗ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡರು ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಮಾಹಿತಿಯನ್ನು ಹಂಚಿಕೊ೦ಡಿದ್ದಾರೆ.

ಈ ಹೊಸ ಪ್ರಕಟಣೆಯಲ್ಲಿ ಏನಿದೆ?

ಕಳೆದ ಫೆಬ್ರವರಿ, 14, 2024ರಂದು ವಿಧಾನ ಪರಿಷತ್ ಸದಸ್ಯ ಶಶಿಲ್ ಜಿ. ನಮೋಶಿ ಅವರ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡರು ರಾಜ್ಯದ ಕಂದಾಯ ಇಲಾಖೆ ವ್ಯಾಪ್ತಿಯಲ್ಲಿ ಖಾಲಿ ಇರುವ 1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಪರೀಕ್ಷೆಯ ನೇಮಕಾತಿಯನ್ನು ಸ್ಪರ್ಧಾತ್ಮಕ ಪರೀಕ್ಷೆ (Competitive Exam) ಮೂಲಕ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ವಹಿಸಲಾಗಿರುತ್ತದೆ ಮತ್ತು ನೇಮಕ ಮಾಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಉತ್ತರಿಸಿದ್ದಾರೆ.

ನೇಮಕಾತಿಗೆ ವಯೋಮಿತಿಯ ಅಧಿಕೃತ ಮಾಹಿತಿ

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗೆ ವಯೋಮಿತಿ ವಿವರ ನೀಡಿರುವ ಕೃಷ್ಣ ಬೈರೇಗೌಡರು ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಇರಬೇಕು ಮತ್ತು ಗರಿಷ್ಟ ವಯಸ್ಸು ವರ್ಗಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.

  • ಸಾಮಾನ್ಯ ವರ್ಗ – 35 ವರ್ಷ
  • 2ಎ, 2ಬಿ, 3ಎ, 3ಬಿ – 38 ವರ್ಷ
  • ಪ. ಜಾತಿ, ಪ. ಪಂಗಡ ಮತ್ತು ಪ್ರ. ವರ್ಗ 1 – 40 ವರ್ಷ

ಜಿಲ್ಲಾವಾರು ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ವಿವರ

ನೇಮಕಾತಿಗೆ ಪ್ರಕ್ರಿಯೆಯಲ್ಲಾದ ಬದಲಾವಣೆಗಳು

ಕರ್ನಾಟಕ ಸರ್ಕಾರ ಕಂದಾಯ ಇಲಾಖೆಯು ಗ್ರಾಮ ಲೆಕ್ಕಾಧಿಕಾರಿ ಹುದ್ದೆಯನ್ನು ಅಧಿಕೃತವಾಗಿ ಬದಲಾವಣೆ ಮಾಡಿ ‘ಗ್ರಾಮ ಆಡಳಿತಾಧಿಕಾರಿ’ (Village Administrative Officer) ಎಂದು ಮರುನಾಮಕರಣ ಮಾಡಿದೆ. ಹೆಸರಷ್ಟೇ ಅಲ್ಲದೇ ನೇಮಕಾತಿ ಪ್ರಕ್ರಿಯೆಯಲ್ಲಿ ಕೆಲವು ಬದಲಾವಣೆ ಮಾಡಿದ್ದು, ಈ ಮೊದಲು ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲು, ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳು PUCಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತಿತ್ತು.

ಆದರೆ ಈಗ ಹೊಸ ಬದಲಾವಣೆಯ ಪ್ರಕಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಪಿಯುಸಿ ಶಿಕ್ಷಣ ಅರ್ಹತೆ ಆಧರಿಸಿ ಅರ್ಹ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ನಂತರ ಹೆಚ್ಚು ಅಂಕ ಗಳಿಸಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.

ಮಾಸಿಕ ಸಂಬಳವೆಷ್ಟು?

ಗ್ರಾಮ ಆಡಳಿತ ಅಧಿಕಾರಿಯಾಗಿ ಆಯ್ಕೆಯಾದವರಿಗೆ ಪ್ರತಿ ತಿಂಗಳು ₹21,000 ರಿಂದ ₹42,000 ವರೆಗೆ ಸಂಬಳ ಇರುತ್ತದೆ. ಜತೆಗೆ ಸರಕಾರದ ಸಮಸ್ತ ಸೌಲಭ್ಯಗಳು ಅನ್ವಯವಾಗುತ್ತವೆ.

ಶೀಘ್ರದಲ್ಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಯ ಅಧಿಕೃತ ಅಧಿಸೂಚನೆ ಹೊರ ಬೀಳಲಿದೆ. ಆದ್ದರಿಂದ ಸ್ಪರ್ಧಾರ್ಥಿಗಳು ಈಗಿನಿಂದಲೇ ಪರೀಕ್ಷೆ ತಯಾರಿಗೆ ಸಂಪೂರ್ಣ ಸಿದ್ಧತೆಯನ್ನು ಆರಂಭಿಸಿ. ಈ ನೇಮಕಾತಿಗೆ ಸಂಬ೦ಧಿಸಿದ ಮುಂದಿನ ಹಂತದ ಪ್ರತಿಯೊಂದು ಹೊಸ ಮಾಹಿತಿಯನ್ನು ಪಡೆಯಲು ನಮ್ಮ ಜಾಲತಾಣಕ್ಕೆ ಭೇಟಿ ನೀಡಿ.

ಗ್ರಾಮ ಆಡಳಿತಾಧಿಕಾರಿ ಪರೀಕ್ಷೆಯ ಪಠ್ಯ ಕ್ರಮ

ಇದನ್ನೂ ಓದಿ:

Udyoga Mela Govt of Karnataka 2024 : ಸರಕಾರಿ ಉದ್ಯೋಗ ಮೇಳದಲ್ಲಿ ಭರ್ಜರಿ ಉದ್ಯೋಗಾವಕಾಶ | ಎಲ್ಲಾ ರೀತಿ ವಿದ್ಯಾರ್ಹತೆಯ ಉದ್ಯೋಗಾಕಾಂಕ್ಷಿಗಳಿಗೂ ಅವಕಾಶ

Village Administrative Officer Recruitment 2024 : ಗ್ರಾಮ ಲೆಕ್ಕಾಧಿಕಾರಿ ನೇಮಕಾತಿಗೆ ಗೆಜೆಟ್ ಅಧಿಸೂಚನೆ ಬಿಡುಗಡೆ | ನೇಮಕ ಬದಲಾವಣೆ ಕುರಿತ ಕರ್ನಾಟಕ ರಾಜ್ಯಪತ್ರ ರಿಲೀಸ್

Village Accountant Recruitment 2024 |1,500 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಚಾಲನೆ | PUC ಪಾಸಾದವರಿಗೆ ಭರ್ಜರಿ ಅವಕಾಶ | ಕಂದಾಯ ಸಚಿವರ ಮಹತ್ವದ ಮಾಹಿತಿ…

Google Pay loan up to 8 lakh : 2 ನಿಮಿಷದಲ್ಲಿ ಸಿಗುತ್ತೆ ₹8 ಲಕ್ಷ ರೂಪಾಯಿ ವರೆಗೆ ಗೂಗಲ್ ಪೇ ಲೋನ್ | ಮೊಬೈಲ್‌ನಲ್ಲೇ ಅರ್ಜಿ ಸಲ್ಲಿಸಿ…

WhatsApp Group Join Now
Telegram Group Join Now

Related Posts

error: Content is protected !!