ಉದ್ಯೋಗ

Village Administrative Officer Recruitment 2024 : ಗ್ರಾಮ ಲೆಕ್ಕಾಧಿಕಾರಿ ನೇಮಕಾತಿಗೆ ಗೆಜೆಟ್ ಅಧಿಸೂಚನೆ ಬಿಡುಗಡೆ | ನೇಮಕ ಬದಲಾವಣೆ ಕುರಿತ ಕರ್ನಾಟಕ ರಾಜ್ಯಪತ್ರ ರಿಲೀಸ್

WhatsApp Group Join Now
Telegram Group Join Now

Village Administrative Officer Recruitment 2024

ಗ್ರಾಮ ಲೆಕ್ಕಾಧಿಕಾರಿ ಅಥವಾ ವಿಲೇಜ್ ಅಕೌಂಟೆಂಟ್ ನೇಮಕಾತಿ ಪ್ರಕ್ರಿಯೆಯಲ್ಲಿ ಮಾಡಿದ ಬದಲಾವಣೆ ಕುರಿತು ರಾಜ್ಯ ಸರಕಾರ ಅಧಿಕೃತ ಗೆಜೆಟ್ ಅಧಿಸೂಚನೆ (Gazette Notification) ಹೊರಡಿಸಿದೆ. ಸದರಿ ಅಧಿಸೂಚನೆಯಲ್ಲಿ ಗ್ರಾಮ ಲೆಕ್ಕಾಧಿಕಾರಿ ಅರ್ಜಿ ಸಲ್ಲಿಕೆಯ ವಿದ್ಯಾರ್ಹತೆ, ಸ್ಪರ್ಧಾತ್ಮಕ ಪರೀಕ್ಷೆ ವಿಧಾನ ಹಾಗೂ ತರಬೇತಿ ಕುರಿತ ಅಧಿಕೃತ ಮಾಹಿತಿಯನ್ನು ನೀಡಲಾಗಿದೆ.

ಸುದೀರ್ಘ ಕಾಲದ ನಂತರ ನೇಮಕಾತಿ

ಕಳೆದ 2015ರಲ್ಲಿ ಗ್ರಾಮ ಲೆಕ್ಕಾಧಿಕಾರಿಗಳ ನೇಮಕ ನಡೆದ ನಂತರ ಇದೀಗ ಸುದೀರ್ಘ ಅವಧಿಯ ಬಳಿಕ ನೇಮಕಾತಿಗೆ ಸರಕಾರ ಸನ್ನದ್ಧವಾಗಿದೆ. ಗ್ರಾಮ ಲೆಕ್ಕಾಧಿಕಾರಿಗಳ ಕೊರತೆಯಿಂದಾಗಿ ರೈತರ ಜಮೀನಿನ ದಾಖಲೆಗಳ ಸಿದ್ಧತೆ, ಬರ, ನೆರೆ, ಚುನಾವಣೆ, ಪಡಿತರ ಚೀಟಿ ವಿತರಣೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಫಲಾನುಭವಿಗಳಿಗೆ ಸಕಾಲಕ್ಕೆ ತಲುಪುತ್ತಿಲ್ಲ.

ಕೆಲವು ತಿಂಗಳುಗಳ ಹಿಂದೆಯಷ್ಟೆ ರಾಜ್ಯ ಸರಕಾರ ‘ಗ್ರಾಮ ಲೆಕ್ಕಾಧಿಕಾರಿ’ (Village accountant) ಹುದ್ದೆಗೆ ‘ಗ್ರಾಮ ಆಡಳಿತ ಅಧಿಕಾರಿ’ (Village Administrative Officer) ಎಂದು ಮರು ನಾಮಕರಣ ಮಾಡಿದ್ದು; ಈಗ ನೇಮಕಾತಿಗೆ ಅಧಿಕೃತ ಪ್ರಕ್ರಿಯೆ ಮುಂದಾಗಿದೆ.

ಇದನ್ನೂ ಓದಿ: RDPR Recruitment 2024 : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನ | ಸಂಬಳ : ₹61,500 | Panchayat Raj fellowship recruitment

ಗೆಜೆಟ್ ಅಧಿಸೂಚನೆ ಬಿಡುಗಡೆ

ಕಂದಾಯ ಇಲಾಖೆಯಲ್ಲಿ ಒಟ್ಟು 1,839 ಗ್ರಾಮ ಲೆಕ್ಕಾಧಿಕಾರಿ (ಗ್ರಾಮ ಆಡಳಿತಾಧಿಕಾರಿ) ಹುದ್ದೆಗಳು ಖಾಲಿ ಇದ್ದು, ಇವುಗಳ ನೇಮಕಾತಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಕಳೆದ ಡಿಸೆಂಬರ್ 06, 2023ರಂದು ಬೆಳಗಾವಿಯ ವಿಧಾನ ಮಂಡಲ ಅಧಿವೇಶನದಲ್ಲಿ ಜಿಲ್ಲಾವಾರು ಹುದ್ದೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದರು.

ಈ ಮೊದಲು ದ್ವಿತೀಯ ಪಿಯುಸಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಗ್ರಾಮ ಲೆಕ್ಕಾಧಿಕಾರಿಗಳ ಆಯ್ಕೆ ಮಾಡಿಕೊಳ್ಳಲಾಗುತ್ತಿತ್ತು. ಈಗ ಮಹತ್ವದ ಬದಲಾವಣೆ ಮಾಡಲಾಗಿದ್ದು; ಇನ್ಮುಂದೆ ನೇರ ನೇಮಕಾತಿ ಮೂಲಕ ಮಾಡಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಆದೇಶ ಹೊರ ಬಿದ್ದಿರಲಿಲ್ಲ. ಈಗ ಈ ಸಂಬಂಧ ಸರಕಾರ ದಿನಾಂಕ: 02-02-2024 ರಂದು ಅಧಿಕೃತ ಗೆಜೆಟ್ ಅಧಿಸೂಚನೆ ಹೊರಡಿಸಿದೆ.

ಇದನ್ನೂ ಓದಿ: Google Pay loan : ತ್ವರಿತವಾಗಿ ಗೂಗಲ್ ಪೇ ಲೋನ್ ಪಡೆಯುವುದು ಹೇಗೆ? | 8 ಲಕ್ಷ ರೂಪಾಯಿ ವರೆಗೆ ಸಿಗುತ್ತೆ ಸಾಲ ಸೌಲಭ್ಯ

ಗೆಜೆಟ್ ಅಧಿಸೂಚನೆಯಲ್ಲಿ ಏನಿದೆ?

ಗ್ರಾಮ ಲೆಕ್ಕಾಧಿಕಾರಿ ನೇಮಕಾತಿ ಕುರಿತು ರಾಜ್ಯ ಸರ್ಕಾರ ಹೊರಡಿಸಿರುವ ಗೆಜೆಟ್ ಅಧಿಸೂಚನೆಯಲ್ಲಿ ಕರ್ನಾಟಕ ಜನರಲ್ ಸರ್ವಿಸ್ (ಕಂದಾಯ ಅಧೀನ ಶಾಖೆ) (ಕೇಡರ್ ಮತ್ತು ನೇಮಕಾತಿ) (ತಿದ್ದುಪಡಿ) ನಿಯಮಗಳು 2024ಕ್ಕೆ ತಿದ್ದುಪಡಿ ತರಲಾಗುತ್ತಿದೆ.

ವಿಲೇಜ್ ಅಡ್ಮಿನಿಸ್ಟ್ರೇಟಿವ್ ಆಫೀಸರ್ ನೇಮಕಾತಿಯನ್ನು ನೇರ ನೇಮಕಾತಿಯ ಮೂಲಕ ಮಾಡಲಾಗುತ್ತದೆ. ಸ್ಪರ್ಧಾತ್ಮಕ ಪರೀಕ್ಷೆ ನಿಗದಿ ಪಡಿಸಿ, ಅದರಲ್ಲಿ ಗಳಿಸಿದಂತಹ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ: Home Guards jobs : ಹೋಮ್‌ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ | 10ನೇ ತರಗತಿ ಪಾಸಾದವರಿಗೆ ಅವಕಾಶ

ಸ್ಪರ್ಧಾತ್ಮಕ ಪರೀಕ್ಷೆ ಹೇಗೆ?

ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ದ್ವಿತೀಯ ಪಿಯುಸಿ ಅಥವಾ ಅದಕ್ಕೆ ತತ್ಸಮಾನ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದೆ. ಈ ಹುದ್ದೆಯ ನೇಮಕಾತಿ ಪ್ರಕ್ರಿಯೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಥವಾ ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ನಡೆಸಲಾಗುತ್ತದೆ ಎಂದು ರಾಜ್ಯ ಸರ್ಕಾರ ಹೊರಡಿಸಿರುವ ಗೆಜೆಟ್ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ನೇಮಕಾತಿಯ ನಂತರ ಆರು ತಿಂಗಳಿಗೆ ಕಡಿಮೆ ಇಲ್ಲದಂತೆ ತರಬೇತಿಯನ್ನು ಪಡೆಯಬೇಕು. ಪ್ರೊಬೇಷನರಿ ಸಮಯವನ್ನು ಮುಗಿಸಿದ ಬಳಿಕ ರಾಜ್ಯ ಸರ್ಕಾರ ನಡೆಸುವಂತಹ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು ಎಂದು ಗೆಜೆಟ್ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಸದ್ಯದಲ್ಲಿಯೇ ನೇಮಕಾತಿ ಕುರಿತ ಅಧಿಕೃತ ಅಧಿಸೂಚನೆ ಹೊರಡಿಸಲಿದ್ದು; ಅರ್ಜಿ ಸಲ್ಲಿಕೆ ಆರಂಭವಾಗಲಿದೆ.

ರಾಜ್ಯದ ವಿವಿಧ ಜಿಲ್ಲೆಗಳ ತಾಲ್ಲೂಕುವಾರು ಖಾಲಿ ಹುದ್ದೆಗಳ ಸಂಪೂರ್ಣ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ…

ಇದನ್ನೂ ಓದಿ: WCD Karnataka Anganwadi Recruitment 2024 : ಅಂಗನವಾಡಿ ಟೀಚರ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಮೊಬೈಲ್‌ನಲ್ಲೇ ಅರ್ಜಿ ಸಲ್ಲಿಸಿ…

Low interest rate on personal loans : ಕಮ್ಮಿ ಬಡ್ಡಿಯಲ್ಲಿ ಪರ್ಸನಲ್ ಲೋನ್ ನೀಡುವ ಬ್ಯಾಂಕುಗಳು | ಟಾಪ್ ಫೈವ್ ಬ್ಯಾಂಕುಗಳ ಮಾಹಿತಿ ಇಲ್ಲಿದೆ…

WhatsApp Group Join Now
Telegram Group Join Now

Related Posts

error: Content is protected !!