RaitapiJagattu
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ (PM-KISAN) 19ನೇ ಕಂತಿನ 2,000 ರೂ. ಹಣ ಜಮಾ
ಫೆಬ್ರವರಿ 24ರ ಸೋಮವಾರ ದೇಶಾದ್ಯಂತ 9.7 ಕೋಟಿ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ಜಮಾ ಆಗಲಿದೆ.
ಬಿಹಾರದ ಭಾಗಲಪುರದಿಂದ ಪ್ರಧಾನಿ ನರೇಂದ್ರ ಮೋದಿ ಅವರು ರೈತರ ಖಾತೆಗಳಿಗೆ ಪಿಎಂ ಕಿಸಾನ್ ನಿಧಿಯ ಹಣ ಬಿಡುಗಡೆ ಮಾಡಲಿದ್ದಾರೆ.
ಪಿಎಂ ಕಿಸಾನ್ ಯೋಜನೆಯಡಿ ಪ್ರತಿ 4 ತಿಂಗಳಿಗೊಮ್ಮೆ ವಾರ್ಷಿಕ 3 ಕಂತುಗಳಲ್ಲಿ ತಲಾ 2,000 ರೂ. ಹಣವನ್ನು ಬಿಡುಗಡೆ ಮಾಡಲಾಗುತ್ತದೆ.
ಪಿಎಂ ಕಿಸಾನ್ ಯೋಜನೆಯ ಮೂಲಕ ರೈತರಿಗೆ ಪ್ರತಿ ವರ್ಷ 6,000 ರೂ. ನೆರವು ನೀಡಲಾಗುತ್ತದೆ.
ಕಳೆದ 2024ರ ಅಕ್ಟೋಬರ್ 15ರಂದು 18ನೇ ಕಂತಿನ 2,000 ರೂ ಹಣವನ್ನು ಬಿಡುಗಡೆ ಮಾಡಲಾಗಿತ್ತು.
ಪಿಎಂ ಕಿಸಾನ್ ಯೋಜನೆಯ ಪ್ರಯೋಜನಗಳನ್ನು ಪಡೆಯಲು
ರೈತರು ಇ-ಕೆವೈಸಿಯನ್ನು ಪೂರ್ಣಗೊಳಿಸಿರಬೇಕು.
ಒಟಿಪಿ ಆಧಾರದ ಮೇಲೆ ಅಥವಾ
ಪಿಎಂ ಕಿಸಾನ್ ಪೋರ್ಟಲ್ ಮತ್ತು ಮೊಬೈಲ್ ಅಪ್ಲಿಕೇಶನ್ ಮೂಲಕ
ಇ-ಕೆವೈಸಿ ಪೂರ್ಣಗೊಳಿಸಬಹುದು
ನಿಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಗಳ ಮೂಲಕ ಬಯೋಮೆಟ್ರಿಕ್ ಕೆವೈಸಿ ಅನ್ನು ಪೂರ್ಣಗೊಳಿಸಬಹುದು.